ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಮತದಾನ ಮುಕ್ತಾಯ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಆಂತರಿಕ ಬಂಡಾಯ ಸ್ಫೋಟಗೊಂಡಿದ್ದು, ಕಾಂಗ್ರೆಸ್ ಮುಸ್ಲಿಂ ನಾಯರ ನಡುವಿನ ಅಸಮಾಧಾನ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಬೆಂಗಳೂರು: ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಮತದಾನ ಮುಕ್ತಾಯ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಆಂತರಿಕ ಬಂಡಾಯ ಸ್ಫೋಟಗೊಂಡಿದ್ದು, ಕಾಂಗ್ರೆಸ್ ಮುಸ್ಲಿಂ ನಾಯರ ನಡುವಿನ ಅಸಮಾಧಾನ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪಗಳ ಹಿನ್ನಲೆಯಲ್ಲಿ ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದ ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಜಬ್ಬಾರ್ ರಾಜೀನಾಮೆ ನೀಡಿದ್ದು, ಇದೀಗ ಈ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಂಗೀಕರಿಸಿದ್ದಾರೆ. ಅಲ್ಲದೇ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ (KPCC Minority Department) ವಿಸರ್ಜಿಸಿ ಕಾಂಗ್ರೆಸ್ ಆದೇಶ ಹೊರಡಿಸಿದ್ದು, ಈ ಬೆಳವಣಿಗೆ ಕಾಂಗ್ರೆಸ್ ನಲ್ಲಿ ಭಾರೀ ಸಂಚನಲನ ಮೂಡಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ INC Karnataka, ‘ಕೆಪಿಸಿಸಿ ಅಲ್ಪಸಂಖ್ಯಾತ ಇಲಾಖೆಯ ಅಧ್ಯಕ್ಷ ಸ್ಥಾನಕ್ಕೆ ಕೆ. ಅಬ್ದುಲ್ ಜಬ್ಬಾರ್ ಅವರು ಸಲ್ಲಿಸಿದ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಇಲಾಖೆಯ ಅಡಿಯಲ್ಲಿ ರಾಜ್ಯ, ಜಿಲ್ಲಾ ಮತ್ತು ವಿಧಾನಸಭೆ/ಬ್ಲಾಕ್ ಮಟ್ಟದಲ್ಲಿ ರಚಿಸಲಾದ ಎಲ್ಲಾ ಸಮಿತಿಗಳನ್ನು ವಿಸರ್ಜಿಸಲಾಗಿದೆ. ಸಂಘಟನೆ ಮತ್ತು ಪಾಲುದಾರರೊಂದಿಗೆ ಸೂಕ್ತ ಸಮಾಲೋಚನೆಯ ನಂತರ, ಸಾಧ್ಯವಾದಷ್ಟು ಬೇಗ ಹೊಸ ಸಮಿತಿಯನ್ನು ರಚಿಸಲಾಗುವುದು’ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ. Share via: Facebook X (Twitter) LinkedIn More Post navigation IPL 2026: ವೈಭವ್ ಸೂರ್ಯವಂಶಿ ಅಬ್ಬರ; RCB ವಿರುದ್ಧ ಗೆದ್ದು ಬೀಗಿದ ರಾಜಸ್ಥಾನ ರಾಯಲ್ಸ್! ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಸೀರ್ ಅಹ್ಮದ್ ರಾಜೀನಾಮೆ!