ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ದಿಢೀರ್ ಬೆಳವಣಿಗೆಯಾಗಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಜೀರ್ ಅಹ್ಮದ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆ ಭಾರೀ ಚರ್ಚೆಗೆ ಕಾರಣವಾಗಿದೆ. ನಜೀರ್ ಅಹ್ಮದ್ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ. ಸೋಮವಾರ (ಏ.13) ರಂದು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ನಜೀರ್ ಅಹ್ಮದ್ಗೆ ಡೆಡ್ಲೈನ್ ನೀಡಿದ್ದರು. ಜೊತೆಗೆ ಸಂಜೆಯೊಳಗೆ ರಾಜೀನಾಮೆ ನೀಡಬೇಕೆಂದು ಸೂಚಿಸಿದ್ದರು. ಒಂದು ವೇಳೆ ಸಂಜೆಯೊಳಗೆ ನಜೀರ್ ಅಹಮ್ಮದ್ ರಾಜೀನಾಮೆ ಕೊಡದಿದ್ದರೆ ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲು ಸಿದ್ದರಾಮಯ್ಯ ಅವರಿಗೆ ಸೂಚಿಸುವುದಾಗಿ ತಿಳಿಸಿದ್ದರು. ಇದರ ನಡುವೆ ಕೊನೆ ಗಳಿಗೆಯಲ್ಲಿ ನಜೀರ್ ಅಹಮ್ಮದ್ ರಾಜೀನಾಮೆ ಪತ್ರ ರವಾನಿಸಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಭುಗಿಲೆದ್ದ ಭಿನ್ನಮತ ಶಮನ ಆಗಿಲ್ಲ. ದಾವಣಗೆರೆಯಲ್ಲಿ ಅಭ್ಯರ್ಥಿ ವಿಚಾರವಾಗಿ ನಡೆದ ಬೆಳವಣಿಗೆಯಲ್ಲಿ ಶಾಸಕರಾದ ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹ್ಮದ್ ಪತ್ರಿಕಾಗೋಷ್ಠಿಯನ್ನು ನಡೆಸಿದ್ದರು. ಸಮರ್ಥ್ ಅವರನ್ನು ಸೋಲಿಸಲು ವಿರೋಧ ಪಕ್ಷದ ಮುಖಂಡರ ಜೊತೆಗೆ ಕಾಂಗ್ರೆಸ್ ಪಕ್ಷದ ಮುಖಂಡರು ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದ್ದರು. Post navigation ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DKS! ಮಹಿಳಾ ಮೀಸಲಾತಿ ಮಸೂದೆ: ಲೋಕಸಭೆಯ ಸ್ಥಾನಗಳು 850ಕ್ಕೆ ಏರಿಕೆಯಿಂದ ಏನು ಲಾಭ?: