ಭಟ್ಕಳ ದುರಂತಭಟ್ಕಳ ದುರಂತ


ಮೂವರನ್ನು ಸ್ಥಳೀಯರು ರಕ್ಷಿಸಿದ್ದು ಮೂವರು ನಾಪತ್ತೆಯಾಗಿದ್ದು ಶೋಧ ಕಾರ್ಯ ಮುಂದುವರಿದೆ. ಅಸ್ವಸ್ಥಗೊಂಡಿರುವವರಿಗೆ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭಟ್ಕಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಸ್ಥಳೀಯರು ತೊಡಗಿದ್ದಾರೆ.

ಭಟ್ಕಳ ಆಸ್ಪತ್ರೆಯ ಶವಾಗಾರದ ಮುಂಭಾಗ ನೆರೆದ ಜನರು

ಕಾರವಾರ: ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಭಾನುವಾರ ಕಪ್ಪೆ ಚಿಪ್ಪು ಹಿಡಿಯಲು ಹೋಗಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.   14 ಜನರು ಒಟ್ಟಿಗೆ ಬೋಟಿನಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದಾಗ ದುರ್ಘಟನೆ ಸಂಭವಿಸಿತ್ತು. ನೀರು ಪಾಲಾದವರು ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದುಬಂದಿದೆ. 

ಮೂವರನ್ನು ಸ್ಥಳೀಯರು ರಕ್ಷಿಸಿದ್ದು ಮೂವರು ನಾಪತ್ತೆಯಾಗಿದ್ದು ಶೋಧ ಕಾರ್ಯ ಮುಂದುವರಿದೆ. ಅಸ್ವಸ್ಥಗೊಂಡಿರುವವರಿಗೆ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭಟ್ಕಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಸ್ಥಳೀಯರು ತೊಡಗಿದ್ದಾರೆ.

ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಅಪಘಾತದಲ್ಲಿ ಇನ್ನೂ ಕೆಲವರು ಕಾಣೆಯಾಗಿದ್ದಾರೆ ಎಂಬ ಮಾಹಿತಿಯೂ ಇದೆ. ಅವರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಕಾಣೆಯಾದ ವ್ಯಕ್ತಿಗಳು ಬದುಕುಳಿದು ಅವರ ಕುಟುಂಬಗಳೊಂದಿಗೆ ಮತ್ತೆ ಸೇರಲಿ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇನ್ನೂ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ,ತೀವ್ರ ಆಘಾತ ಮತ್ತು ಸಂತಾಪ ವ್ಯಕ್ತಪಡಿಸಿ, ಸಂತ್ರಸ್ತರ ಕಷ್ಟಕ್ಕೆ  ಸ್ಪಂದಿಸಿ, ಅವರು, ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತುರ್ತು ಆರ್ಥಿಕ ನೆರವನ್ನು ಘೋಷಿಸಿದ್ದಾರೆ. ದುರಂತದಲ್ಲಿ ಮೃತಪಟ್ಟವರ ವಾರಸುದಾರರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ತೀವ್ರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರ ಧನವನ್ನು ಪ್ರಧಾನಿ ಕಾರ್ಯಾಲಯ (PMO) ಪ್ರಕಟಿಸಿದೆ.

​ಈ ಕುರಿತು ಕಂಬನಿ ಮಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ದುರಂತದ ಬಗ್ಗೆ ಕೇಳಿ ತೀವ್ರ ಆಘಾತವಾಯಿತು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ದೇಶದ ಯಾವುದೇ ಮೂಲೆಯಲ್ಲಿ ಇಂತಹ ದುರದೃಷ್ಟಕರ ಘಟನೆಗಳು ಸಂಭವಿಸಿದಾಗ ಸಂತ್ರಸ್ತರ ಸಂಕಷ್ಟಕ್ಕೆ ತಕ್ಷಣವೇ ನೆರವಾಗುವುದು ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಧೈರ್ಯ ತುಂಬುವುದು ಸರ್ಕಾರದ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮೃತರ ವಾರಸುದಾರರಿಗೆ ಹಾಗೂ ಗಾಯಗೊಂಡವರಿಗೆ ಪ್ರಧಾನಮಂತ್ರಿ ಪರಿಹಾರ ನಿಧಿ (PMNRF) ವತಿಯಿಂದ ತಕ್ಷಣವೇ ಪರಿಹಾರ ಹಣ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.

#Bhatkal #family drown #PM Modi #Siddaramaiah #condole deaths #ಭಟ್ಕಳ #ನೀರಿನಲ್ಲಿ ಮುಳುಗಿ ಕುಟುಂಬ ಸಾವು #ಪ್ರಧಾನಿಮೋದಿ #ಸಿದ್ದರಾಮಯ್ಯ #ಸಂತಾಪ

Leave a Reply

Your email address will not be published. Required fields are marked *