2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಮಂಗಳೂರು: ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಇಟ್ಟು ಸ್ಪೋಟಿಸಿದ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ತಪಿತಸ್ಥ ಎಂದು ಘೋಷಿಸಿರುವ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯ, ಸೋಮವಾರ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಶಾರಿಕ್ ಬಾಂಬ್ ಹೊತ್ತು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ ಭಾರಿ ಅನಾಹುತವೊಂದು ತಪ್ಪಿತ್ತು. ಸ್ಫೋಟದಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಇಬ್ಬರೂ ಗಾಯಗೊಂಡಿದ್ದರು. ದೇಶದ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಲಾಗಿತ್ತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎನ್ಐಎ ಕೋರ್ಟ್, ಐಪಿಸಿ ಸೆಕ್ಷನ್ 121ಎ, ಐಪಿಸಿ ಸೆಕ್ಷನ್ 326 ಹಾಗೂ ಭಯೋತ್ಪಾದನಾ ಚಟುವಟಿಕೆಗಳ ತಡೆ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಿದೆ. ಈ ಪ್ರಕರಣದಲ್ಲಿ ಶಾರಿಕ್ ತನ್ನ ಮೇಲಿರುವ ಎಲ್ಲಾ ಆರೋಪಗಳನ್ನು ಮತ್ತು ಮಾಡಿದ ತಪ್ಪನ್ನು ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದ. #Mangalurucookerblastcase #10yearJail #mohammed shariq Share via: Facebook X (Twitter) LinkedIn More Post navigation ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಿಸಿದ ಅನಿಲ್ ಶೆಟ್ಟಿ-ಮಾನುಷಿ ಚಿಲ್ಲರ್! ಸಿಎಂ ಹುದ್ದೆ ಬದಲಾವಣೆ: ‘ಮುಂದಿನ ಕ್ರಾಂತಿ’ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದೇನೆ- ಎಚ್.ಡಿ. ಕುಮಾರಸ್ವಾಮಿ!