ಚಮೋಲಿ ಸುರಂಗ ಕುಸಿತದ ಸ್ಥಳ


ಪಿಪಲ್ಕೋಟಿ ಸಮೀಪದ ಮಾಯಾಪುರದಲ್ಲಿ ನಿರ್ಮಾಣ ಹಂತದಲ್ಲಿರುವ ಟೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC)ನ ಸುರಂಗದೊಳಗೆ ಭಾರಿ ಭೂಕುಸಿತದಿಂದ ಮತ್ತು ನೀರು ತುಂಬಿಕೊಂಡ ಪರಿಣಾಮ ಕನಿಷ್ಠ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಮೋಲಿ: ಉತ್ತರಾಖಂಡ್ ರಾಜ್ಯದಲ್ಲಿ ದೊಡ್ಡ ದುರಂತ ಸಂಭವಿಸಿದೆ. ನಿರ್ಮಾಣ ಹಂತದ ಸುರಂಗ ಕುಸಿತದಿಂದ ಏಳು ಕಾರ್ಮಿಕರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿರುವ ಘಟನೆ ಚಮೋಲಿ ಜಿಲ್ಲೆಯಲ್ಲಿ ನಡೆದಿದೆ

ಪಿಪಲ್ಕೋಟಿ ಸಮೀಪದ ಮಾಯಾಪುರದಲ್ಲಿ ನಿರ್ಮಾಣ ಹಂತದಲ್ಲಿರುವ ಟೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC)ನ ಸುರಂಗದೊಳಗೆ ಭಾರಿ ಭೂಕುಸಿತದಿಂದ ಮತ್ತು ನೀರು ತುಂಬಿಕೊಂಡ ಪರಿಣಾಮ ಕನಿಷ್ಠ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಲಕನಂದಾ ನದಿಯ ಮೇಲಿನ ನಿರ್ಮಾಣ ಹಂತದಲ್ಲಿರುವ ವಿಷ್ಣುಗಾಡ್-ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯ ಟೇಲ್ ರೇಸ್ ಟನಲ್ (TRT)ನಲ್ಲಿ ನಿನ್ನೆ ಗುರುವಾರ ಸಾಯಂಕಾಲ ಈ ಘಟನೆ ಸಂಭವಿಸಿದೆ. ಕಾರ್ಮಿಕರು ಸುರಂಗದೊಳಗೆ ಬಲವರ್ಧಕ ಕಬ್ಬಿಣದ ಸರಳುಗಳನ್ನು ವೆಲ್ಡಿಂಗ್ ಮಾಡುತ್ತಿದ್ದ ವೇಳೆ ಭೂಕುಸಿತ ಸಂಭವಿಸಿದ್ದು, ಭಾರಿ ಪ್ರಮಾಣದ ಅವಶೇಷಗಳು ಹಾಗೂ ನೀರು ಸುರಂಗದೊಳಗೆ ನುಗ್ಗಿ ಹಲವು ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಮಾಹಿತಿಯ ಪ್ರಕಾರ, ಘಟನೆಯ ಬಳಿಕ 28 ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದರು. ರಕ್ಷಣಾ ತಂಡಗಳು ಈವರೆಗೆ 22 ಕಾರ್ಮಿಕರನ್ನು ಹೊರಗೆ ಕರೆತಂದಿದ್ದು, ಅವರ ಪೈಕಿ 7 ಮಂದಿ ಮೃತಪಟ್ಟಿದ್ದಾರೆ.

ರಕ್ಷಿಸಲ್ಪಟ್ಟ ಕಾರ್ಮಿಕರ ಪೈಕಿ 11 ಮಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಬ್ಬ ಕಾರ್ಮಿಕರನ್ನು ಪಿಪಲ್ಕೋಟಿಯ ವಿವೇಕಾನಂದ ಚಾರಿಟೇಬಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಬ್ಬ ಕಾರ್ಮಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ವೈದ್ಯಕೀಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಸುರಂಗದೊಳಗೆ ಇನ್ನೂ ಸಿಲುಕಿಕೊಂಡಿರುವ ಆರು ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಎನ್‌ಡಿಆರ್‌ಎಫ್ (NDRF) ಮತ್ತು ಎಸ್‌ಡಿಆರ್‌ಎಫ್ (SDRF) ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಸುರಂಗದೊಳಗೆ ಭಾರಿ ಪ್ರಮಾಣದ ನೀರು ಮತ್ತು ಅವಶೇಷಗಳು ತುಂಬಿಕೊಂಡಿರುವುದರಿಂದ ರಕ್ಷಣಾ ಕಾರ್ಯಾಚರಣೆ ಸವಾಲಿನದ್ದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

#Uttarakhand #Chamoli #Tunnel #Dead #ಉತ್ತರಾಖಂಡ #ಚಮೋಲಿ#ಸುರಂಗಕುಸಿತ#ಸಾವು

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link