ಪ್ರಾಥಮಿಕ ಮಾಹಿತಿಯ ಪ್ರಕಾರ, ಇದುವರೆಗೆ 18 ಮಂದಿ ಮೃತಪಟ್ಟಿದ್ದಾರೆ. ಆದರೆ ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನಲ್ಲಿ ಚುನಾವಣೆವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಪಟಾಕಿ ಕಾರ್ಖಾನೆಯಲ್ಲಿ ಉಂಟಾದ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ತಮಿಳುನಾಡಿನ ವಿರುಧುನಗರ ಜಿಲ್ಲೆಯ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಭಾರಿ ಸ್ಫೋಟವು ದೊಡ್ಡ ಅಪಘಾತಕ್ಕೆ ಕಾರಣವಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇದುವರೆಗೆ 18 ಮಂದಿ ಮೃತಪಟ್ಟಿದ್ದಾರೆ. ಆದರೆ ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಾಗಿದೆ. ಕತ್ತನಾರಪಟ್ಟಿ ಪ್ರದೇಶದಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ನಾಲ್ಕು ಘಟಕಗಳಿಗೂ ಕ್ಷಣಾರ್ಧದಲ್ಲಿ ಆವರಿಸಿಕೊಂಡಿವೆ. ಅಪಘಾತವು ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿದ್ದು ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಪ್ರಾರಂಭಿಸಲಾಯಿತು. ಸ್ಫೋಟವು ಎಷ್ಟು ತೀವ್ರವಾಗಿತ್ತೆಂದರೆ ಹತ್ತಿರದ ಕಟ್ಟಡಗಳಿಗೆ ಹಾನಿಯಾಗಿದೆ. ಅಗ್ನಿಶಾಮಕ ಇಲಾಖೆ, ಪೊಲೀಸರು ಮತ್ತು ರಕ್ಷಣಾ ತಂಡಗಳು ಅವಶೇಷಗಳನ್ನು ತೆರವುಗೊಳಿ ಜನರನ್ನು ರಕ್ಷಿಸುವಲ್ಲಿ ನಿರತರಾಗಿದ್ದಾರೆ. ಆಡಳಿತವು ಇಡೀ ಪ್ರದೇಶವನ್ನು ಸುತ್ತುವರೆದಿದೆ. ಕಠಿಣ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಗಿದೆ. ಘಟನೆಯ ಬಗ್ಗೆ ತಿಳಿದ ತಕ್ಷಣ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದು ಅಗತ್ಯವಿರುವ ಎಲ್ಲಾ ನೆರವನ್ನು ಕಲ್ಪಿಸುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಎಂಕೆ ಸ್ಟಾಲಿನ್ ಹೇಳಿದ್ದಾರೆ. Post navigation ಅಗ್ನಿಪರೀಕ್ಷೆಯಲ್ಲಿ ಸೋತ NDA: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು! ಡಾಲಿ ಧನಂಜಯ ನಟನೆಯ ಅಣ್ಣ from Mexico’ ಚಿತ್ರದ ಟೀಸರ್ ಬಿಡುಗಡೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಥ್!