ಈ ಮಧ್ಯೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮಾಡಿರುವ ಟ್ವೀಟ್ ಅಭಿಮಾನಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜಕೀಯ ಹಾಗೂ ಸಾಂಸ್ಕೃತಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ನಟ ಚೇತನ್ ಅಹಿಂಸಾ

ಬೆಂಗಳೂರು: ಕನ್ನಡ ಚಿತ್ರರಂಗದ ದಂತಕತೆ, ವರನಟ ಡಾ. ರಾಜ್‌ಕುಮಾರ್ಅವರ97ನೇಜನ್ಮದಿನಾಚರಣೆಯನ್ನು ಇಂದು ರಾಜ್ಯಾದ್ಯಂತ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದ್ದಾರೆ. 

 ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿ ಹೂವುಗಳಿಂದ ಅಲಂಕೃತವಾಗಿತ್ತು. ಕುಟುಂಬದವರು ಮತ್ತು ಗಣ್ಯರು ಪೂಜೆ ಸಲ್ಲಿಸಿದ್ದಾರೆ. ಅಭಿಮಾನಿಗಳು ಅನ್ನದಾನ, ರಕ್ತದಾನ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.

 ಈ ಮಧ್ಯೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮಾಡಿರುವ ಟ್ವೀಟ್ ಅಭಿಮಾನಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜಕೀಯ ಹಾಗೂ ಸಾಂಸ್ಕೃತಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ರಾಜ್‌ಕುಮಾರ್ ಅವರ ಸ್ಮಾರಕದ ಜಾಗದ ಪ್ರಶ್ನೆ ಎತ್ತಿದ್ದು ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರಿನ ಹೃದಯಭಾಗದಲ್ಲಿ ಸ್ಮಾರಕಕ್ಕೆ ನೀಡಿರುವ ಜಾಗದ ಬಗ್ಗೆ ಚೇತನ್ ಟ್ವೀಟ್ ಮಾಡಿದ್ದಾರೆ.

ನಾವು ರಾಜ್‌ಕುಮಾರ್ ಅವರನ್ನು ಒಬ್ಬ ಶ್ರೇಷ್ಠ ಕಲಾವಿದ ಎಂದು ಗೌರವಿಸುತ್ತೇವೆ. ಆದರೆ, 2006ರಲ್ಲಿ ಬೆಂಗಳೂರಿನ ಕೇಂದ್ರ ಭಾಗದಲ್ಲಿ ಈ ನಟನ ಸ್ಮಾರಕ ಸಂಕೀರ್ಣಕ್ಕಾಗಿ 2.5 ಎಕರೆ ಭೂಮಿಯನ್ನು ನೀಡಿದ್ದು ಎಷ್ಟು ಸಮಂಜಸ? ಸರ್ಕಾರವು ಭೂಮಿಯನ್ನು ಮಂಜೂರು ಮಾಡುವಾಗ ಮತಗಳ ಮೇಲೆ ಕಣ್ಣಿಡುವ ಬದಲು, ದೂರದೃಷ್ಟಿ ಮತ್ತು ಸಾರ್ವಜನಿಕ ಉಪಯುಕ್ತತೆಯನ್ನು ಗಮನಿಸಬೇಕು. 21ನೇ ಶತಮಾನದ ಭಾರತದಲ್ಲಿ ಭೂಮಿಗಾಗಿ ದೊಡ್ಡ ಹೋರಾಟವೇ ನಡೆಯುತ್ತಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಕೇವಲ ಮತ ಬ್ಯಾಂಕ್‌ಗಾಗಿ ಸರ್ಕಾರಗಳು ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ ಎಂಬ ಚೇತನ್ ಅವರ ಪರೋಕ್ಷ ಟೀಕೆ ಈಗ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಇನ್ನು ಕೆಲವರು ರಾಜ್ ಕುಮಾರ್ ಅವರು ಕನ್ನಡ ಭಾಷೆಗೆ, ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಚೇತನ್ ಅಹಿಂಸಗೆ ನೆನಪು ಮಾಡುವ ಪ್ರಯತ್ನ ಮಾಡಿದ್ದಾರೆ. ಇನ್ನು ಕೆಲವರು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಇನ್ನಿತರರ ಸಮಾಧಿ ಸ್ಥಳಗಳ ಉಲ್ಲೇಖವನ್ನು ಮಾಡಿದ್ದಾರೆ.

#sandalwood #DrRajkumarmemorial #chetanahimasha #ಸ್ಯಾಂಡಲ್ ವುಡ್ #ಡಾ.ರಾಜ್ ಕುಮಾರ್ ಸ್ಮಾರಕ #ಚೇತನ್ ಅಹಿಂಸಾ

Leave a Reply

Your email address will not be published. Required fields are marked *