ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ


ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳ, ಕೇರಳ ಹಾಗೂ ಅಸ್ಸಾಂ ಚುನಾವಣೆ ಮುಗಿಯುತ್ತಿದ್ದಂತೆಯೇ ವಾಣಿಜ್ಯ ಸಿಲಿಂಡರ್ ದರ ಹೆಚ್ಚಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಟೀಕಾ ಪ್ರಹಾರ ನಡೆಸಿದ್ದಾರೆ.


ಮಾಣಿಕಂ ಟ್ಯಾಗೋರ್

ನವದೆಹಲಿ: ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆ ಇಂದಿನಿಂದ ಏರಿಕೆಯಾಗಿದೆ. ಮೇ 1 ರಿಂದ ಜಾರಿಗೆ ಬರುವಂತೆ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಬರೊಬ್ಬರಿ ರೂ.993 ರಷ್ಟು ಹೆಚ್ಚಳ ಮಾಡಲಾಗಿದ್ದು, ಇದರೊಂದಿಗೆ ಬೆಂಗಳೂರು ಸೇರಿದಂತೆ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ರೂ.3,071.50 ತಲುಪಿದೆ.

ಇಂಧನ ಕಂಪನಿಗಳ ಪ್ರಕಾರ, ಇತ್ತೀಚಿನ ಜಾಗತಿಕ ತೈಲ ಮತ್ತು ಅನಿಲ ಮಾರುಕಟ್ಟೆಯ ಅಸ್ಥಿರತೆ, ಸರಬರಾಜು ಸರಪಳಿಯ ವೆಚ್ಚ ಏರಿಕೆ ಹಾಗೂ ವಿನಿಮಯ ದರದ ಪರಿಣಾಮದಿಂದ ಈ ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಬೆಲೆ ಏರಿಕೆಯಿಂದ ಹೋಟೆಲ್, ರೆಸ್ಟೋರೆಂಟ್‌ಗಳು ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ನೇರ ಆರ್ಥಿಕ ಪರಿಣಾಮ ಬೀರಲಿದ್ದು, ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಗಗನಕ್ಕೇರಿದ್ದರೂ, 14.2 ಕೆಜಿ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆಯಾಗಿಲ್ಲ. ಸರ್ಕಾರದ ಸಬ್ಸಿಡಿ ಹಾಗೂ ನಿಯಂತ್ರಣ ವ್ಯವಸ್ಥೆಯ ಕಾರಣದಿಂದ ಗೃಹ ಬಳಕೆಯ ಗ್ಯಾಸ್ ದರ ಸ್ಥಿರವಾಗಿಯೇ ಮುಂದುವರಿದಿದೆ.

ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳ, ಕೇರಳ ಹಾಗೂ ಅಸ್ಸಾಂ ಚುನಾವಣೆ ಮುಗಿಯುತ್ತಿದ್ದಂತೆಯೇ ವಾಣಿಜ್ಯ ಸಿಲಿಂಡರ್ ದರ ಹೆಚ್ಚಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಟೀಕಾ ಪ್ರಹಾರ ನಡೆಸಿದ್ದಾರೆ. ಉದ್ದೇಶಪೂರ್ವಕವಾಗಿಯೇ ಇದನ್ನು ಮಾಡಲಾಗಿದೆ. ಇದು ಕಾಕತಾಳೀಯ ಅಲ್ಲ ಎಂದಿದ್ದಾರೆ. 

ಬೆಲೆ ಏರಿಕೆಯು ರೆಸ್ಟೋರೆಂಟ್‌ಗಳು, ಟೀ ಅಂಗಡಿಗಳು ಮತ್ತು ಮಾರಾಟಗಾರರಂತಹ ಸಣ್ಣ ಉದ್ಯಮಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಟ್ಯಾಗೋರ್ ಎಚ್ಚರಿಸಿದ್ದಾರೆ.

#commerciallpg #pricehike #Congress #BJP #ವಾಣಿಜ್ಯ ಸಿಲಿಂಡರ್ ದರ #ದರ ಏರಿಕೆ# ಕಾಂಗ್ರೆಸ್ #ಬಿಜೆಪಿ

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link