ಮಂಗಳವಾರ ನಡೆದ ಚುನಾವಣೋತ್ತರ ಹಿಂಸಾಚಾರದಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವು ಪಕ್ಷದ ಕಚೇರಿಗಳನ್ನು ದೋಚಲಾಗಿದೆ ಎಂಬ ಆರೋಪದ ನಂತರ ಚುನಾವಣಾ ಆಯೋಗದಿಂದ ನಿರ್ದೇಶನ ಬಂದಿದೆ.

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿರುವವರನ್ನು ತಕ್ಷಣ ಬಂಧಿಸುವಂತೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಮಂಗಳವಾರ ನಡೆದ ಚುನಾವಣೋತ್ತರ ಹಿಂಸಾಚಾರದಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವು ಪಕ್ಷದ ಕಚೇರಿಗಳನ್ನು ದೋಚಲಾಗಿದೆ ಎಂಬ ಆರೋಪದ ನಂತರ ಚುನಾವಣಾ ಆಯೋಗದಿಂದ ನಿರ್ದೇಶನ ಬಂದಿದೆ.

ಸೂಕ್ಷ್ಮ ಪ್ರದೇಶಗಳಲ್ಲಿ ನಿರಂತರ ಗಸ್ತು ತಿರುಗುವಂತೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು, ಕೋಲ್ಕತ್ತಾ ಪೊಲೀಸ್ ಆಯುಕ್ತರು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಮಹಾನಿರ್ದೇಶಕರು, ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಇತರ ಅಧಿಕಾರಿಗಳಿಗೆ ಸಿಇಸಿ ಸೂಚನೆಗಳನ್ನು ನೀಡಿದೆ ಎಂದು ಅವರು ಹೇಳಿದರು.

“ಹಿಂಸಾಚಾರವನ್ನು ಪ್ರಚೋದಿಸುವ ಮತ್ತು ವಿಧ್ವಂಸಕ ಕೃತ್ಯಗಳನ್ನು ನಡೆಸುವವರನ್ನು  ತಕ್ಷಣವೇ ಬಂಧಿಸಬೇಕು. ತ್ವರಿತಗತಿಯಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಚುನಾವಣಾ ಆಯುಕ್ತರು ನಿರ್ದೇಶನ ನೀಡಿರುವುದಾಗಿ ಅಧಿಕಾರಿ ತಿಳಿಸಿದರು.

#westbengal #postpoll violence #goons #CEC# ಪಶ್ಚಿಮ ಬಂಗಾಳ #ಚುನಾವಣೋತ್ತರ ಹಿಂಸಾಚಾರ #

Leave a Reply

Your email address will not be published. Required fields are marked *