ಡಿ. ಸುಧಾಕರ್ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಗಿದ್ದರು. ಚಿತ್ರದುರ್ಗ: ಅನಾರೋಗ್ಯದ ಹಿನ್ನೆಲೆಯಲ್ಲಿ ಭಾನುವಾರ ನಿಧನರಾದ ಸಚಿವ ಡಿ. ಸುಧಾಕರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ನೆರೆವೇರಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಮುಖ್ಯಮಂತ್ರಿಯವರು ಸುಧಾಕರ್ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.ಸರ್ಕಾರಿ ಗೌರವದ ಬಳಿಕ ಮುಖ್ಯಮಂತ್ರಿಯವರು ರಾಷ್ಟ್ರಧ್ವಜವನ್ನು ಕುಟುಂಬದವರಿಗೆ ಹಸ್ತಾಂತರಿಸಿದರು. ಸ್ಪೀಕರ್ ಯು.ಟಿ.ಖಾದರ್, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ಈಶ್ವರ್ ಖಂಡ್ರೆ, ಹೆಚ್.ಕೆ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮುಂಜಾನೆ ನಿಧನರಾದರು. ಅವರಿಗೆ 66 ವರ್ಷ ವಯಸ್ಸಾಗಿತ್ತು. ಮಣಿಪಾಲ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಡಿ ಸುಧಾಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 3:15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಡಿ. ಸುಧಾಕರ್ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಗಿದ್ದರು. #Karnataka #ministerDSudhakar #passesaway #ಕರ್ನಾಟಕ #ಸಚಿವಡಿ ಸುಧಾಕರ್ #ನಿಧನ Share via: Facebook X (Twitter) LinkedIn More Post navigation ಬಾಗಲಕೋಟೆ ಉಪಚುನಾವಣೆ: 21,866 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಭರ್ಜರಿ ಗೆಲುವು! ಶೃಂಗೇರಿ: ಮರುಎಣಿಕೆ’ ಫಲಿತಾಂಶಕ್ಕೆ ಸುಪ್ರೀಂ ತಡೆ; ಶಾಸಕರಾಗಿ ರಾಜೇಗೌಡ ಮುಂದುವರಿಕೆ!