ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಫಲಿತಾಂಶ ಮತ್ತು ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಪ್ರಶ್ನಿಸಿ ಕಾಂಗ್ರೆಸ್ ನ ಪರಾಜಿತ ಅಭ್ಯರ್ಥಿ ಟಿ.ಡಿ ರಾಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಇಂದು ಮಹತ್ವದ ಆದೇಶ ನೀಡಿದೆ. ನವದೆಹಲಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಗುದ್ದಾಟ ಇನ್ನೂ ಮುಗಿದಿಲ್ಲ. ಮಹತ್ವದ ಬೆಳವಣಿಗೆಯೊಂದರಲ್ಲಿ ಸುಪ್ರೀಂಕೋರ್ಟ್ ಇಂದು ಬಿಜೆಪಿ ಶಾಕ್ ನೀಡಿದೆ. ಅಂಚೆ ಮತಗಳ ಮರು ಎಣಿಕೆ ಫಲಿತಾಂಶಕ್ಕೆ ತಡೆ ನೀಡಿರುವ ಸುಪ್ರೀಂ ಕೋರ್ಟ್, ‘ಯಥಾಸ್ಥಿತಿ’ ಕಾಯ್ದುಕೊಳ್ಳುವಂತೆ ಸೂಚಿಸಿದೆ. ಇದರಿಂದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ ಒಂದೇ ವಾರದಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಳ್ಳುವಂತಾಗಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಫಲಿತಾಂಶ ಮತ್ತು ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಪ್ರಶ್ನಿಸಿ ಕಾಂಗ್ರೆಸ್ ನ ಪರಾಜಿತ ಅಭ್ಯರ್ಥಿ ಟಿ.ಡಿ ರಾಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಇಂದು ಮಹತ್ವದ ಆದೇಶ ನೀಡಿದೆ. ರಾಜೇಗೌಡ ಅವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ, ‘ಯಥಾಸ್ಥಿತಿ’ ಕಾಯ್ದುಕೊಳ್ಳುವಂತೆ ಆದೇಶಿಸಿದೆ.ರಾಜೇಗೌಡ ಅವರ ಪರವಾಗಿ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಪ್ರಬಲವಾದ ಮಂಡಿಸಿದರು. ಚುನಾವಣಾ ಆಯೋಗದ ನಡವಳಿಕೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, ಮರುಎಣಿಕೆಯ ಸಂದರ್ಭದಲ್ಲಿ ಪಾರದರ್ಶಕತೆ ಇರಲಿಲ್ಲ ಎಂದು ವಾದಿಸಿದರು. #Sringeri recount result #Supreme Court stays #congress td rajegowda #jeevaraj #ಶೃಂಗೇರಿ ಮರು ಫಲಿತಾಂಶ #ಸುಪ್ರೀಂಕೋರ್ಟ್ ತಡೆ #ಕಾಂಗ್ರೆಸ್ ಟಿಡಿ ರಾಜೇಗೌಡ Post navigation ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸಚಿವ ಡಿ. ಸುಧಾಕರ್ ಅಂತ್ಯಕ್ರಿಯೆ! ಚಿನ್ನ ಖರೀದಿಸಬೇಡಿ: ಮೋದಿ ಮಾತನಾಡಿದ್ದು ದೇಶದ ಪ್ರದಾನಿಯಾಗಿಯೋ? ಇಲ್ಲವೇ ವಿಪಕ್ಷ ನಾಯಕರಾಗಿಯೋ? CM ಸಿದ್ದರಾಮಯ್ಯ ಕಿಡಿ!