ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್ಟಿಎ ತಿಳಿಸಿದೆ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ಹೇಳಿದೆ. ಈ ಮಧ್ಯೆ ಆರೋಪಗಳ ಬಗ್ಗೆ ಸಮಗ್ರ ತನಿಖೆಗಾಗಿ ಕೇಂದ್ರ ಸರ್ಕಾರ, ಸಿಬಿಐ ತನಿಖೆಗೆ ಆದೇಶಿಸಿದೆ. ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಮೇ 3 ರಂದು ನಡೆದಿದ್ದ NEET UG 2026 ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮಂಗಳವಾರ ರದ್ದುಗೊಳಿಸಿದೆ ಮತ್ತು ಪರೀಕ್ಷೆಯನ್ನು ಮತ್ತೆ ನಡೆಸಲಾಗುವುದು ಎಂದು ಘೋಷಿಸಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್ಟಿಎ ತಿಳಿಸಿದೆ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ಹೇಳಿದೆ. ಈ ಮಧ್ಯೆ ಆರೋಪಗಳ ಬಗ್ಗೆ ಸಮಗ್ರ ತನಿಖೆಗಾಗಿ ಕೇಂದ್ರ ಸರ್ಕಾರ, ಸಿಬಿಐ ತನಿಖೆಗೆ ಆದೇಶಿಸಿದೆ. ಪರೀಕ್ಷೆ ರದ್ದುಗೊಂಡಿದ್ದರಿಂದ ಭಾರತ ಮತ್ತು ವಿದೇಶಗಳಲ್ಲಿನ 5432 ಕೇಂದ್ರಗಳಲ್ಲಿ ಪರೀಕ್ಷೆ ಬರೆದ 22 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಿದೆ. ಕೇಂದ್ರ ಸರ್ಕಾರ ಈಗ ಮಧ್ಯೆ ಪ್ರವೇಶಿಸಿ, ಸಿಬಿಐ ತನಿಖೆಗೆ ಆದೇಶಿಸಿದೆ ಮತ್ತು ವ್ಯವಸ್ಥೆಯಲ್ಲಿ ನಂಬಿಕೆಯನ್ನು ಪುನಃಸ್ಥಾಪಿಸಲು ಮರು ಪರೀಕ್ಷೆಯನ್ನು ಘೋಷಿಸಿದೆ. ಕಳೆದ ಮೇ 3, 2026 ರಂದು ಭಾನುವಾರ ದೇಶಾದ್ಯಂತ ನೀಟ್ ಪರೀಕ್ಷೆ ನಡೆದಿತ್ತು. ಆದರೆ ರಾಜಸ್ಥಾನದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಹರಿದಾಡಿದ್ದವು. ಈ ಬಗ್ಗೆ ಮೇ 8 ರಂದು ಎನ್ಟಿಎ ಕೇಂದ್ರ ತನಿಖಾ ಸಂಸ್ಥೆಗಳಿಗೆ ಸ್ವತಂತ್ರ ಪರಿಶೀಲನೆ ನಡೆಸುವಂತೆ ಮನವಿ ಮಾಡಿತ್ತು. ತನಿಖಾ ಸಂಸ್ಥೆಗಳು ಮತ್ತು ಕಾನೂನು ಜಾರಿ ಸಂಸ್ಥೆಗಳು ನೀಡಿದ ವರದಿಯನ್ನಾಧರಿಸಿ, ಕೇಂದ್ರ ಸರ್ಕಾರದ ಅನುಮೋದನೆಯೊಂದಿಗೆ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ದೆಹಲಿಯಲ್ಲಿ ಭುಗಿಲೆದ್ದ ಪ್ರತಿಭಟನೆ ಈ ಮಧ್ಯೆ ಕಾಂಗ್ರೆಸ್ನ ವಿದ್ಯಾರ್ಥಿ ವಿಭಾಗವಾದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್ಎಸ್ಯುಐ) ನವದೆಹಲಿಯ ಶಾಸ್ತ್ರಿ ಭವನದ ಹೊರಗೆ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿತು. ನೀಟ್ ಪರೀಕ್ಷೆಯಲ್ಲಿ ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ ಎಂದು ಬರೆದಿರುವ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಆರೋಪಿ ಬಂಧನ: ನೀಟ್-ಯುಜಿ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ರಾಜಸ್ಥಾನ ಪೊಲೀಸರ ಮನವಿ ಮೇರೆಗೆ ಆರೋಪಿಯನ್ನು ವಶಕ್ಕೆ ಪಡೆದಿದ್ದು, ರಾಜಸ್ಥಾನ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ನಾಸಿಕ್ ನಗರದ ಉಪ ಪೊಲೀಸ್ ಆಯುಕ್ತ ಕಿರಣ್ ಕುಮಾರ್ ಚವ್ಹಾಣ್ ಹೇಳಿದ್ದಾರೆ. ಆರೋಪಿ ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ. ಆದಾಗ್ಯೂ, ಅಂತಿಮವಾಗಿ ಆತನನ್ನು ಪತ್ತೆಹಚ್ಚಿ ತಾಂತ್ರಿಕ ಪುರಾವೆಗಳು ಮತ್ತು ಕಣ್ಗಾವಲು ಬಳಸಿ ಬಂಧಿಸಲಾಯಿತು. ಆರೋಪಿ ನಾಸಿಕ್ನ ನಂದಗಾಂವ್ ಗ್ರಾಮದವನಾಗಿದ್ದು, ಬಿಎಎಂಎಸ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದರು. #NEET-UG 2026 cancelled #CBI registers FIR #paper leak #accused detained #Nashik #ನೀಟ್ ಯುಜಿ 2026 ರದ್ದು #ಸಿಬಿಐಎಫ್ ಐಆರ್ #ಪೇಪರ್ ಸೋರಿಕೆ #ಆರೋಪಿ ಬಂಧನ Post navigation ಶೃಂಗೇರಿ: ಮರುಎಣಿಕೆ’ ಫಲಿತಾಂಶಕ್ಕೆ ಸುಪ್ರೀಂ ತಡೆ; ಶಾಸಕರಾಗಿ ರಾಜೇಗೌಡ ಮುಂದುವರಿಕೆ!