ಕರ್ನಾಟಕ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷರಾದ ವಿ.ಎಸ್. ಉಗ್ರಪ್ಪನವರ ನೇತೃತ್ವದ ನಿಯೋಗದ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶೇ. 56 ಮೀಸಲಾತಿ ಹೆಚ್ಚಳದ ವಿಚಾರಕ್ಕೆ ಈಗಾಗಲೇ ಕೇಂದ್ರಕ್ಕೆ ಪ್ರಸ್ತಾವನೆ ನೀಡಲಾಗಿದೆ ಎಂದರು. ಬೆಂಗಳೂರು: ಎಸ್ಸಿ, ಎಸ್ಟಿ, ಒಬಿಸಿ ಮೀಸಲಾತಿಯ ಗೊಂದಲ ಬಗೆಹರಿಸಲು ಜನಪ್ರತಿನಿಧಿಗಳ ಸಭೆ ಕರೆದು ತಕ್ಷಣ ಪ್ರಧಾನಿ ಹಾಗೂ ಕೇಂದ್ರ ಪರಿಶಿಷ್ಟ ಪಂಗಡ ಇಲಾಖೆ ಸಚಿವರನ್ನು ಭೇಟಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷರಾದ ವಿ.ಎಸ್. ಉಗ್ರಪ್ಪನವರ ನೇತೃತ್ವದ ನಿಯೋಗದ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶೇ. 56 ಮೀಸಲಾತಿ ಹೆಚ್ಚಳದ ವಿಚಾರಕ್ಕೆ ಈಗಾಗಲೇ ಕೇಂದ್ರಕ್ಕೆ ಪ್ರಸ್ತಾವನೆ ನೀಡಲಾಗಿದೆ ಎಂದರು. ವಿ.ಎಸ್. ಉಗ್ರಪ್ಪನವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೀಸಲಾತಿ ವಿಚಾರದ ಎಲ್ಲ ಗೊಂದಲಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟರು. ತಳವಾರ, ಪರಿವಾರ ಸಮುದಾಯದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ನೀಡಿದ್ದಾರೆ. ಈಗಾಗಲೇ ರಾಜ್ಯದಲ್ಲಿ 2,39,166 ಜನ ನಕಲಿ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ. ಉಡುಪಿ- ಕುಂದಾಪುರ ಒಂದರಲ್ಲೇ 500 ಕ್ಕೂ ಹೆಚ್ಚು ನಕಲಿ ಜಾತಿ ಪ್ರಮಾಣ ಪತ್ರಗಳು ವಿತರಣೆಯಾಗಿವೆ. ಸರ್ಕಾರದ ಸ್ಪಷ್ಟ ಆದೇಶ ಇದ್ದರೂ ನಕಲಿ ಜಾತಿಬಪ್ರಮಾಣ ಪತ್ರಗಳು ವಿತರಣೆಯಾಗುತ್ತಿರುವುದು ವಿಪರ್ಯಾಸ ಎಂದು ಮನವರಿಕೆ ಮಾಡಿಕೊಟ್ಟರು. ರಾಜ್ಯ 4 ಕೋಟಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಒಬಿಸಿ ಜನರಿಗೆ ಮೀಸಲಾತಿ ವಿಚಾರದಲ್ಲಿ ಅನ್ಯಾಯವಾಗುತ್ತಿದೆ. ಕಲಂ 343 ಅಡಿಯಲ್ಲಿ ರಾಜಕೀಯ ಮೀಸಲಾತಿ ನೀಡಿದ ಪರಿಣಾಮ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಾತಿ ದೊರೆತಿದೆ. ಇಂದಿರಾ ಸಾನಿ ಪ್ರಕರಣದಲ್ಲಿ ಸ್ಪಷ್ಟವಾಗಿ ಆದೇಶ ಇದ್ದರೂ ಕೂಡ ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ. ವಾಲ್ಮೀಕಿ ಅಥವಾ ನಾಯಕ ಸಮುದಾಯದ ತಳವಾರ ಜನರನ್ನು ಹೊರತುಪಡಿಸಿ ಉಳಿದ ಜನಾಂಗದ ತಳವಾರ ಜನರನ್ನು ಒಬಿಸಿ ಅಡಿಯಲ್ಲಿ ಜಾತಿ ಪ್ರಮಾಣ ಪತ್ರ ನೀಡಬೇಕು. ಆದರೆ ಸರ್ಕಾರದ ಆದೇಶ ಉಲ್ಲಂಘನೆ ಮಾಡಿ ನಕಲಿ ಜಾತಿ ಪ್ರಮಾಣ ಪತ್ರ ನೀಡಲಾಗುತ್ತಿದೆ ಎಂದು ವಿ.ಎಸ್.ಉಗ್ರಪ್ಪ ವಿವರಿಸಿದರು. 2015 ರಲ್ಲಿ ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಿಸಲು ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ಹೈಕೋರ್ಟ್ ರಿಟ್ ಅರ್ಜಿ ಸಂಖ್ಯೆ 16852/2015 ರಲ್ಲಿ ಮೀಸಲಾತಿ ಹೆಚ್ಚಳದ ಮನವಿ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅದರಂತೆ ನ್ಯಾ. ನಾಗಮೋಹನ್ ದಾಸ್ ಆಯೋಗ ಹಾಗೂ ಸುಭಾಷ್ ಅಡಿ ಆಯೋಗ ರಚಿಸಿ ಆ ಆಯೋಗಗಳ ವರದಿ ಆಧಾರದಲ್ಲಿ ಪರಿಶಿಷ್ಟ ಜಾತಿಗೆ ಶೇ. 17% ಪರಿಶಿಷ್ಟ ಪಂಗಡಕ್ಕೆ ಶೇ.7% ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಆದರೆ ಇದನ್ನು ಶೆಡ್ಯೂಲ್ 9 ಗೆ ಸೇರಿಸಿಲ್ಲ. ಇದರಿಂದ ಎಸ್ಸಿ ಎಸ್ಟಿ ಸಮಯದಾಯಗಳಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ತಕ್ಷಣ ಸರ್ವಪಕ್ಷಗಳ ಸಭೆ ಕರೆಯಬೇಕು, ಸರ್ವಪಕ್ಷ ನಿಯೋಗ ತೆಗೆದುಕೊಂಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಬಂಧಿಸಿ ಸಚಿವರ ಬಳಿ ಕೊಂಡೊಯ್ಯಬೇಕು. ಹೈಕೋರ್ಟ್ ನಲ್ಲಿ ತಡೆಯಾಜ್ಞೆ ತೆರವುಗೊಳಿಸಲು ಸಮರ್ಥ ವಕೀಲರ ನೇಮಕ ಮಾಡಬೇಕು. ತಡೆಯಾಜ್ಞೆ ತೆರವುಗೊಳಿಸಲು ವಿಶೇಷ ಅರ್ಜಿ ಹಾಕಬೇಕು. ಒಂದು ವೇಳೆ ತಡೆಯಾಜ್ಞೆ ತೆರವಾಗದಿದ್ದರೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿ ಈ ವಿಚಾರವಾಗಿ ತಳ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವವರಿಗೆ ಹಾಗೂ ನೀಡುವವರಿಗೆ ಶಿಕ್ಷೆಯಾಗಬೇಕು ಎಂದು ಉಗ್ರಪ್ಪ ಮನವಿ ಮಾಡಿದರು. ಉಗ್ರಪ್ಪನವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಕ್ಷಣ ಸುಳ್ಳು ಜಾತಿ ಪ್ರಮಾಣ ಪತ್ರ ವಿತರಣೆ ತಡೆಯಬೇಕು. ಅದಕ್ಕೆ ಮತ್ತೊಮ್ಮೆ ನಿರ್ದೇಶನ ಹೊರಡಿಸಲು ಅಧಿಕಾರಿಗಳಿಗೆ ತಾಕೀತು ಮಾಡಿದರು. ಜೊತೆಗೆ ಮೀಸಲಾತಿ ವಿಚಾರದಲ್ಲಿ ತಡೆಯಾಜ್ಞೆ ತೆರವುಗೊಳಿಸಲು ಅರ್ಜಿ ಸಲ್ಲಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು. ಇದರ ಜೊತೆಗೆ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರಧಾನಿ ಬಳಿ ಸರ್ವಪಕ್ಷ ಸಭೆ ಕರೆದೊಯ್ದು ಇದನ್ನು ಶೆಡ್ಯೂಲ್ 9 ಗೆ ಸೇರಿಸಲು ಒತ್ತಡ ತರಲೇಬೇಕು. ಇದಕ್ಕ ಸಂಬಂಧಿಸಿದಂತೆ ಶಾಸಕರು ಹಾಗೂ ಮಂತ್ರಿಗಳ ಸಭೆ ಕರೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪರಿಷ್ಟ ವರ್ಗಕ್ಕೆ ಮೀಸಲಾತಿ ಸಿಗಲು ಉಗ್ರಪ್ಪನವರೇ ಕಾರಣ ಅವರ ಹೋರಾಟ ಜೊತೆಗೆ ದೇವೇಗೌಡರಯ ಹಾಗೂ ನಾವೆಲ್ಲ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದ ಪರಿಣಾಮ ನಿಮಗೆಲ್ಲ ಮೀಸಲಾತಿ ಸಿಕ್ಕಿದೆ. ಈಗಲೂ ನಾನು ಮೀಸಲಾತಿ ವಿಚಾರಕ್ಕೆ ಬದ್ದನಾಗಿದ್ದೇನೆ. ತಕ್ಷಣ ಮೀಸಲಾತಿ ಹೆಚ್ಚಳ ವಿಚಾರವನ್ನು ಶೆಡ್ಯೂಲ್ 9 ಗೆ ಸೇರಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಬಂಧಿಸಿದ ಸಚಿವರನ್ನು ಭೇಟಿ ಮಾಡಿ ಒತ್ತಡ ಹೇರೋಣ, ಕೇವಲ ಪತ್ರ ವ್ಯವಹಾರದಿಂದ ಈ ಸಮಸ್ಯೆ ಬಗೆಹರಿಯೊಲ್ಲ ಎಂದು ಸಿದ್ದರಾಮಯ್ಯ ನಿಯೋಗಕ್ಕೆ ಹೇಳಿದರು. ಇದೇ ವೇಳೆ ಬೋವಿ ಸಮುದಾಯದ ಹೆಸರಿನಲ್ಲಿ ಕೂಡ ನಕಲಿ ಜಾತಿ ಪ್ರಮಾಣ ಪತ್ರ ವಿತರಣೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಅವರ ಸಮಸ್ಯೆಯನ್ನೂ ಬಗೆಹರಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು. #reservation #Valmiki community Leaders #meets #cmsiddaramaiah #ಮೀಸಲಾತಿ #ವಾಲ್ಮೀಕಿ ಸಮುದಾಯದ ನಾಯಕರು #ಭೇಟಿ #ಸಿಎಂ ಸಿದ್ದರಾಮಯ್ಯ Post navigation ಚಿನ್ನ ಖರೀದಿಸಬೇಡಿ: ಮೋದಿ ಮಾತನಾಡಿದ್ದು ದೇಶದ ಪ್ರದಾನಿಯಾಗಿಯೋ? ಇಲ್ಲವೇ ವಿಪಕ್ಷ ನಾಯಕರಾಗಿಯೋ? CM ಸಿದ್ದರಾಮಯ್ಯ ಕಿಡಿ! ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ: ಜು.1 ರಿಂದಜಾರಿ!