2026ರ ವಿಧಾನಸಭಾ ಚುನಾವಣೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಭರ್ಜರಿ ಜಯ ಸಾಧಿಸಿದ ಬಳಿಕ ಮುಖ್ಯಮಂತ್ರಿ ಆಯ್ಕೆ ಕುರಿತು ನಡೆಯುತ್ತಿದ್ದ ಚರ್ಚೆಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೀರ್ಮಾನಕ್ಕೆ ಬಂದಿದೆ. ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ಕೊನೆಗೂ ಅಂತ್ಯವಾಗಿದೆ. ಯುಡಿಎಫ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ವಿ.ಡಿ. ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಮುಖ್ಯಮಂತ್ರಿ ಪದವಿ ರೇಸ್ ನಲ್ಲಿ K. C. Venugopal ಮತ್ತು Ramesh Chennithala ಹೆಸರುಗಳು ಬಲವಾಗಿ ಕೇಳಿಬಂದಿತ್ತಾದರೂ ವಿ.ಡಿ ಸತೀಶನ್ ಮುನ್ನಡೆ ಸಾಧಿಸಿ ಈ ಸ್ಥಾನವನ್ನು ಪಡೆದಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಭರ್ಜರಿ ಜಯ ಸಾಧಿಸಿದ ಬಳಿಕ ಮುಖ್ಯಮಂತ್ರಿ ಆಯ್ಕೆ ಕುರಿತು ನಡೆಯುತ್ತಿದ್ದ ಚರ್ಚೆಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೀರ್ಮಾನಕ್ಕೆ ಬಂದಿದೆ. ಕಾಂಗ್ರೆಸ್ ನೇತೃತ್ವದ UDF ಕೇರಳ ವಿಧಾನಸಭಾ ಚುನಾವಣೆಯಲ್ಲಿ 140 ಸ್ಥಾನಗಳಲ್ಲಿ 102 ಸ್ಥಾನಗಳನ್ನು ಗೆದ್ದು ಭಾರೀ ಜನಾದೇಶ ಪಡೆದಿತ್ತು. ಇದರೊಂದಿಗೆ ಪಿಣರಾಯಿ ನೇತೃತ್ವದ ಎಡಪಕ್ಷದ ಸರ್ಕಾರವನ್ನು ಸೋಲಿಸಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಮರಳಿದೆ.ದೆಹಲಿನಲ್ಲಿ ಹಲವು ದಿನಗಳಿಂದ ನಡೆದ ಚರ್ಚೆಗಳು, ಲಾಬಿ ಹಾಗೂ ಸಮಾಲೋಚನೆಗಳ ಬಳಿಕ, ಕಾಂಗ್ರೆಸ್ ತನ್ನ ವಿಧಾನಮಂಡಲ ಪಕ್ಷದ ನಾಯಕನ ಹೆಸರನ್ನು ಅಂತಿಮವಾಗಿ ಇಂದು ಘೋಷಣೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹಿರಿಯ ನಾಯಕ ರಾಹುಲ್ ಗಾಂಧಿ ಕಳೆದ ಕೆಲವು ದಿನಗಳಲ್ಲಿ ಹಲವು ಸುತ್ತಿನ ಚರ್ಚೆಗಳನ್ನು ನಡೆಸಿದ್ದಾರೆ. ಅಂತಿಮ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಈ ಮಾತುಕತೆಗಳು ನಡೆದಿತ್ತು. ತಿರುವನಂತಪುರಂನ KPCC ಕಚೇರಿಯಲ್ಲಿ ಕಾಂಗ್ರೆಸ್ ವಿಧಾನಮಂಡಲ ಪಕ್ಷದ ಸಭೆ ನಡೆದಿದ್ದು, ಅದರಲ್ಲಿ ಅಧಿಕೃತವಾಗಿ ನಾಯಕನ ಆಯ್ಕೆ ಮಾಡಲಾಗಿದೆ. #Kerala Chief Minister #VD Satheesan #Congresspicks #ಕೇರಳ ಸಿಎಂ #ವಿಡಿಸತೀಶನ್ #ಕಾಂಗ್ರೆಸ್ ಆಯ್ಕೆ Post navigation ಕೇರಳ CM ಆಯ್ಕೆ ಬಿಕ್ಕಟ್ಟು: ಇಂದು ಅಂತಿಮ ನಿರ್ಧಾರ ಸಾಧ್ಯತೆ ಪ್ರಧಾನಿ ಮೋದಿ ವಾರ್ನಿಂಗ್ ಬೆನ್ನಲ್ಲೇ, ಪೆಟ್ರೋಲ್- ಡೀಸೆಲ್ ದರ ದುಬಾರಿ: ಲೀಟರ್ಗೆ ರೂ. 3 ಏರಿಕೆ, 4 ವರ್ಷಗಳ ಬಳಿಕ ಇಂಧನ ದರ ಪರಿಷ್ಕರಣೆ..!