ಸಾಂದರ್ಭಿಕ ಚಿತ್ರ


ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರವು ರೂ.94.77ರಿಂದ ರೂ.97.77ಕ್ಕೆ ಏರಿಕೆಯಾದರೆ, ಡೀಸೆಲ್ ದರವು ರೂ.89.67ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗೆ ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಜನರು ಹೊಸದಾಗಿ ಚಿನ್ನ ವಾಹನಗಳನ್ನು ಖರೀದಿಸದಂತೆ, ಮೆಟ್ರೋ, ಸಾರ್ವಜನಿಕ ವಾಹನಗಳನ್ನು ಬಳಸುವಂತೆ ಕರೆ ನೀಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಇದೀಗ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆಯಾಗಿದೆ.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಲೀಟರ್‌ಗೆ ರೂ.3ರಷ್ಟು ಹೆಚ್ಚಳ ಮಾಡಲಾಗಿದೆ. ನಾಲ್ಕು ವರ್ಷಗಳ ಬಳಿಕ ಸರ್ಕಾರಿ ತೈಲ ಕಂಪನಿಗಳು ಇಂಧನ ದರ ಪರಿಷ್ಕರಣೆಗೆ ಮುಂದಾಗಿರುವುದು ಜನತೆಗೆ ಮತ್ತೊಂದು ಬೆಲೆ ಶಾಕ್ ನೀಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರವು ರೂ.94.77ರಿಂದ ರೂ.97.77ಕ್ಕೆ ಏರಿಕೆಯಾದರೆ, ಡೀಸೆಲ್ ದರವು ರೂ.89.67ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸಂಸ್ಥೆಗಳು ಹೊಸ ದರ ಜಾರಿಗೆ ತಂದಿವೆ. ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಸಂಘರ್ಷ ಜಾಗತಿಕ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಭಾರೀ ಅಸ್ಥಿರತೆ ಉಂಟು ಮಾಡಿದೆ.

ತೈಲ ಉತ್ಪಾದನೆ ಮತ್ತು ಸಾಗಣೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿಯಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಭಾರತ ಆಮದು ಮಾಡುವ ಕಚ್ಚಾ ತೈಲದ ಸರಾಸರಿ ಬೆಲೆ ಫೆಬ್ರವರಿಯಲ್ಲಿ ಬ್ಯಾರೆಲ್‌ಗೆ ಸುಮಾರು 69 ಡಾಲರ್ ಇದ್ದರೆ, ಯುದ್ಧ ಆರಂಭವಾದ ಬಳಿಕ ಅದು 113–114 ಡಾಲರ್ ಮಟ್ಟಕ್ಕೇರಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದರೂ ಕಳೆದ 11 ವಾರಗಳಿಂದ ದೇಶೀಯ ಇಂಧನ ದರವನ್ನು ತೈಲ ಕಂಪನಿಗಳು ಸ್ಥಿರವಾಗಿಯೇ ಉಳಿಸಿಕೊಂಡಿದ್ದವು. ಆದರೆ, ನಿರಂತರ ನಷ್ಟ ಮತ್ತು ಹೆಚ್ಚುತ್ತಿರುವ ಕಾರ್ಯಾಚರಣಾ ವೆಚ್ಚದಿಂದ ಇದೀಗ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಮೂಲಗಳು ಹೇಳಿವೆ.

#West Asia crisis #INDIA #Petroldiesel prices #Hiked #ಪಶ್ಚಿಮ ಏಷ್ಯಾ ಬಿಕ್ಕಟ್ಟು#ಭಾರತ #ಪೆಟ್ರೋಲ್ ಡೀಸೆಲ್ #ದರ ಏರಿಕೆ

Leave a Reply

Your email address will not be published. Required fields are marked *