ಸಿಎನ್ ಜಿ


ಮೇ 15 ರಂದು ತೈಲ ಕಂಪನಿಗಳು ಸಿಎನ್‌ಜಿ ಬೆಲೆಯನ್ನು 2 ರೂಪಾಯಿ ಹೆಚ್ಚಿಸಿದ್ದವು. ಇದೀಗ ಮತ್ತೆ ಬೆಲೆ ಹೆಚ್ಚಳ ಮಾಡಲಾಗಿದ್ದು, ಇದರೊಂದಿಗೆ ಎರಡು ದಿನಗಳಲ್ಲಿ ಒಟ್ಟು 3 ರೂಪಾಯಿ ಏರಿಕೆ ಕಂಡಂತಾಗಿದೆ.

ನವದೆಹಲಿ: ಇತ್ತೀಚಿಗಷ್ಟೇ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಶಾಕ್ ನೀಡಿತ್ತು. ಇದೀಗ ದೇಶದ ಪ್ರಮುಖ ನಗರಗಳಲ್ಲಿ ಸಿಎನ್‌ಜಿ (CNG) ದರವನ್ನು ಪ್ರತಿ ಕೆಜಿಗೆ 1 ರೂಪಾಯಿ ಹೆಚ್ಚಳ ಮಾಡಲಾಗಿದೆ. ಕೇವಲ 48 ಗಂಟೆಗಳ ಅವಧಿಯಲ್ಲಿ ಇದು ಎರಡನೇ ಬಾರಿಯ ಬೆಲೆ ಏರಿಕೆಯಾಗಿದ್ದು, ಗ್ರಾಹಕರು ಹಾಗೂ ಆಟೋ-ಟ್ಯಾಕ್ಸಿ ಚಾಲಕರು ಕಂಗಾಲಾಗಿದ್ದಾರೆ.

ಮೇ 15 ರಂದು ತೈಲ ಕಂಪನಿಗಳು ಸಿಎನ್‌ಜಿ ಬೆಲೆಯನ್ನು 2 ರೂಪಾಯಿ ಹೆಚ್ಚಿಸಿದ್ದವು. ಇದೀಗ ಮತ್ತೆ ಬೆಲೆ ಹೆಚ್ಚಳ ಮಾಡಲಾಗಿದ್ದು, ಇದರೊಂದಿಗೆ ಎರಡು ದಿನಗಳಲ್ಲಿ ಒಟ್ಟು 3 ರೂಪಾಯಿ ಏರಿಕೆ ಕಂಡಂತಾಗಿದೆ. ಇದರಿಂದಾಗಿ ದೆಹಲಿಯಲ್ಲಿ ಒಂದು ಕೆಜಿ ಸಿಎನ್ ಜಿ ದರ ರೂ.80.09 ಆಗಿದೆ. ನೋಯ್ಡಾ ಮತ್ತು ಗಾಜಿಯಾಬಾದ್ ನಲ್ಲಿ ರೂ.88.70, ಗುರುಗ್ರಾಮ್ ನಲ್ಲಿ ರೂ.85.12, ಮುಂಬೈನಲ್ಲಿ ರೂ.84.00 ಮತ್ತು ಬೆಂಗಳೂರಿನಲ್ಲಿ ರೂ.93.00 ಆಗಿದೆ.

ಈ ದರ ಏರಿಕೆಯ ಪರಿಣಾಮವಾಗಿ ಸಿಎನ್‌ಜಿ ಆಧಾರಿತ ಆಟೋ ರಿಕ್ಷಾ, ಟ್ಯಾಕ್ಸಿ ಮತ್ತು ಖಾಸಗಿ ವಾಹನ ಬಳಕೆದಾರರ ದಿನನಿತ್ಯದ ವೆಚ್ಚ ಹೆಚ್ಚಾಗಲಿದೆ. ಸಾರಿಗೆ ಸಂಸ್ಥೆಗಳ ಕಾರ್ಯಾಚರಣಾ ವೆಚ್ಚವೂ ಏರಿಕೆಯಾಗುವ ಸಾಧ್ಯತೆ ಇದ್ದು, ಇದರ ಪರಿಣಾಮವಾಗಿ ಸಾರ್ವಜನಿಕ ಸಾರಿಗೆ ದರಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಯುದ್ಧ ಪರಿಸ್ಥಿತಿ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಇಂಧನ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಆದರೆ, ನಿರಂತರ ದರ ಏರಿಕೆಯಿಂದ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

#India #CNG #price #Hiked #ಭಾರತ #ಸಿಎನ್ ಜಿ #ದರ #ಏರಿಕೆ

Leave a Reply

Your email address will not be published. Required fields are marked *