ಮಾರ್ಕೊ ರುಬಿಯೊ- ಮೋದಿ ಭೇಟಿ;ಮಾರ್ಕೊ ರುಬಿಯೊ- ಮೋದಿ ಭೇಟಿ;


ಉಭಯ ನಾಯಕರು ಭಾರತ-ಯುಎಸ್ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಮತ್ತು ಪ್ರಾದೇಶಿಕ, ಜಾಗತಿಕ ಶಾಂತಿ ಮತ್ತು ಭದ್ರತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.

ಮಾರ್ಕೊ ರುಬಿಯೊ- ಮೋದಿ ಭೇಟಿ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.  ಉಭಯ ನಾಯಕರು ಭಾರತ-ಯುಎಸ್ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಮತ್ತು ಪ್ರಾದೇಶಿಕ, ಜಾಗತಿಕ ಶಾಂತಿ ಮತ್ತು ಭದ್ರತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.

ರೂಬಿಯೊ ಅವರನ್ನು ಸ್ವಾಗತಿಸಲು ಸಂತೋಷವಾಗಿದೆ. ಭಾರತ ಮತ್ತು ಅಮೆರಿಕ “ಜಾಗತಿಕ ಒಳಿತಿಗಾಗಿ” ನಿಕಟವಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

“ಭಾರತ-ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ ನಿರಂತರ ಪ್ರಗತಿ ಮತ್ತು ಪ್ರಾದೇಶಿಕ ಮತ್ತು ಜಾಗತಿಕ ಶಾಂತಿ ಮತ್ತು ಭದ್ರತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ನಾವು ಚರ್ಚಿಸಿದ್ದೇವೆ. ಭಾರತ ಮತ್ತು ಅಮೆರಿಕ ಜಾಗತಿಕ ಒಳಿತಿಗಾಗಿ ನಿಕಟವಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತವೆ” ಎಂದು ಮೋದಿ ಸಾಮಾಜಿಕ ಜಾಲತಾಣ X ನಲ್ಲಿ ಬರೆದುಕೊಂಡಿದ್ದಾರೆ. 

ಭಾನುವಾರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಮಾತುಕತೆ ನಡೆಸುವ ಮತ್ತು ನವದೆಹಲಿಯಲ್ಲಿ ನಡೆಯುವ ಕ್ವಾಡ್ ವಿದೇಶಾಂಗ ಸಚಿವರ ಸಭೆಯಲ್ಲಿ  ರೂಬಿಯೊ ಭಾಗವಹಿಸುವ ನಿರೀಕ್ಷೆಯಿದೆ.

#newdelhi #pmmodi #Rubio #meeting #ನವದೆಹಲಿ#ಪ್ರಧಾನಿಮೋದಿ #ರುಬಿಯೊ #ಸಭೆ

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link