ಗರ್ಭಗುಡಿಯ ಬಳಿ ಕುಳಿತು ಪ್ರಾರ್ಥಿಸಿದ್ದಾರೆ. ಈ ಪ್ರಕರಣದಲ್ಲಿ ರಣವೀರ್ ಸಿಂಗ್ ಅವರು ಬೇಷರತ್ ಕ್ಷಮೆಯಾಚಿಸಿದ ನಂತರ ನಟನ ವಿರುದ್ಧದ ವಿಚಾರಣೆಯನ್ನು ಹೈಕೋರ್ಟ್ ಕಳೆದ ತಿಂಗಳು ರದ್ದುಗೊಳಿಸಿತ್ತು. ಮೈಸೂರು: ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಕ್ಷಮೆಯಾಚಿಸಿದ್ದಾರೆ. ಕಾಂತಾರ-1 ಚಿತ್ರದಲ್ಲಿ ದೈವಕ್ಕೆ ಅಪಮಾನ ಮಾಡಿದ ಪ್ರಕರಣದಲ್ಲಿ ಚಾಮುಂಡೇಶ್ವರಿ ಬೆಟ್ಟಕ್ಕೆ ಹೋಗಿ ಕ್ಷಮೆ ಕೋರುವುದಾಗಿ ರಣವೀರ್ ಪರ ವಕೀಲರು ಹೈಕೋರ್ಟ್ ಗೆ ಹೇಳಿದ್ದರು. ಅದರಂತೆ ರಣವೀರ್ ಸಿಂಗ್ ಇಂದು ಬೆಟ್ಟಕ್ಕೆ ಸಾಮಾನ್ಯರಂತೆ ಭೇಟಿ ನೀಡಿದ್ದು, ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದರು. ಗರ್ಭಗುಡಿಯ ಬಳಿ ಕುಳಿತು ಪ್ರಾರ್ಥಿಸಿದ್ದಾರೆ. ಈ ಪ್ರಕರಣದಲ್ಲಿ ರಣವೀರ್ ಸಿಂಗ್ ಅವರು ಬೇಷರತ್ ಕ್ಷಮೆಯಾಚಿಸಿದ ನಂತರ ನಟನ ವಿರುದ್ಧದ ವಿಚಾರಣೆಯನ್ನು ಹೈಕೋರ್ಟ್ ಕಳೆದ ತಿಂಗಳು ರದ್ದುಗೊಳಿಸಿತ್ತು. ಏನಿದುಪ್ರಕರಣ? ಗೋವಾ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ರಣವೀರ್ ಸಿಂಗ್ ನಟ ರಿಷಬ್ ಶೆಟ್ಟಿ ಮುಂದೆಯೇ ಮಾತನಾಡಿದ್ದರು. ರಿಷಬ್ ಅವರ ಕಾಂತಾರ ಸಿನಿಮಾವನ್ನ ಥಿಯೇಟರ್‌ನಲ್ಲಿ ನಾನು ನೋಡಿದೆ. ಅದ್ಭುತವಾಗಿತ್ತು ನಿಮ್ಮ ನಟನೆ. ಅದರಲ್ಲೂ ಹೆಣ್ಣು ದೆವ್ವ ನಿಮ್ಮ ಮೈಸೇರುವ ದೃಶ್ಯವಂತೂ ಅತ್ಯದ್ಭುತವಾಗಿತ್ತು. ಆ ದೃಶ್ಯದಲ್ಲಿ ನಿಮ್ಮ ನಟನೆ ಹಾಗೂ ನಿಮ್ಮ ನೋಟ ಮಜವಾಗಿತ್ತು ಅಂತ ರಣವೀರ್ ಸಿಂಗ್ ಅನುಕರಣೆ ಮಾಡಿದ್ದರು. ರಣವೀರ್ ಮಾಡಿದ ಅಪಹಾಸ್ಯಕ್ಕೆ ದೈವಾರಾಧಕರು ಆಕ್ರೋಶ ಹೊರಹಾಕಿದ್ದರು #Mysuru #Ranveer Singh #prayers #Chamundeshwari temple #ಮೈಸೂರು #ರಣವೀರ್ ಸಿಂಗ್ #ವಿಶೇಷ ಪ್ರಾರ್ಥನೆ#ಚಾಮುಂಡೇಶ್ವರಿ ದೇವಾಲಯ Share via: Facebook X (Twitter) LinkedIn More Post navigation ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್ ! ಸಿಎಂ ಹುದ್ದೆ ಕದನಕ್ಕೆ ಬ್ರೇಕ್ ಬೀಳಲಿದೆಯಾ? ಮೇ ಕ್ರಾಂತಿ ನಿರೀಕ್ಷೆ ಹುಸಿ: ರಾಜ್ಯದಲ್ಲಿ ನಾಯಕತ್ವ ಊಹಾಪೋಹಗಳಿಗೆ ತೆರೆ, DCM ಡಿಕೆ ಶಿವಕುಮಾರ್ ಮುಂದಿನ ನಡೆ ಏನು?