ಡಿಕೆ ಶಿವಕುಮಾರ್ಡಿಕೆ ಶಿವಕುಮಾರ್


ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯ ನಾಯಕತ್ವ ವಹಿಸಿಕೊಳ್ಳುವಂತೆ ಹೈಕಮಾಂಡ್ ಮನವಿ ಮಾಡಲಾಗಿತ್ತಾದರೂ, ವಯಸ್ಸು ಹಾಗೂ ಆರೋಗ್ಯದ ಕಾರಣ ನೀಡಿ ಅವರು ಅದನ್ನು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯ ನಾಯಕತ್ವ ವಹಿಸಿಕೊಳ್ಳುವಂತೆ ಹೈಕಮಾಂಡ್ ಮನವಿ ಮಾಡಲಾಗಿತ್ತಾದರೂ, ವಯಸ್ಸು ಹಾಗೂ ಆರೋಗ್ಯದ ಕಾರಣ ನೀಡಿ ಅವರು ಅದನ್ನು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಸ್ಥಾನ ತ್ಯಾಗಕ್ಕೆ ಸಮ್ಮತಿಸಿದ್ದು, ಮೇ 29 ಅಥವಾ ಮೇ 31ರಂದು ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ.

ಇಂದು ಸಿದ್ದರಾಮಯ್ಯರಾಜೀನಾಮೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬೆಳಿಗ್ಗೆ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಉಪಾಹಾರ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಅದರ ನಂತರ ಕಾಂಗ್ರೆಸ್ ಶಾಸಕಾಂಗ ಪಕ್ಷ (CLP) ಸಭೆ ಕರೆಯಲಾಗುವುದು. ಈ ಸಭೆಯಲ್ಲಿ ಹೊಸ CLP ನಾಯಕನ ಆಯ್ಕೆ ನಡೆಯಲಿದ್ದು, ಆಯ್ಕೆಯಾದ ನಾಯಕನೇ ರಾಜ್ಯದ ಹೊಸ ಮುಖ್ಯಮಂತ್ರಿಯಾಗಲಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಸಂಭ್ರಮಾಚರಣೆ

ಇನ್ನೂ ಡಿಕೆ ಶಿವಕುಮಾರ್ ನಿವಾಸದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ದೆಹಲಿ ಪ್ರವಾಸ ಮುಗಿಸಿ ಬುಧವಾರ ಸಂಜೆ ಬೆಂಗಳೂರಿಗೆ ಮರಳಿದ ಡಿಕೆ ಶಿವಕುಮಾರ್, ತಮ್ಮ ಆಧ್ಯಾತ್ಮಿಕ ಗುರು ಹಾಗೂ ಜ್ಯೋತಿಷಿ ಬೆಳ್ಳೂರು ಶಂಕರನಾರಾಯಣ ದ್ವಾರಕನಾಥ್ ಅವರನ್ನು ಸಂಪರ್ಕಿಸಿ ಆಶೀರ್ವಾದ ಪಡೆದಿದ್ದಾರೆ. “ಡಿಕೆಶಿ ಅಧಿಕೃತ ಘೋಷಣೆಗೆ ಕಾಯುತ್ತಿದ್ದಾರೆ ಎಂದು ಗುರುಜಿ ತಿಳಿಸಿದ್ದಾರೆ. ಕನಕಪುರ ಹಾಗೂ ರಾಮನಗರ, ಮಾಗಡಿ, ಚನ್ನಪಟ್ಟಣ ಸೇರಿದಂತೆ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ. ಪಟಾಕಿ ಸಿಡಿಸಿ, ಸಿಹಿ ಹಂಚಿ, “ಮುಂದಿನ ಸಿಎಂ ಡಿಕೆಶಿ” ಎಂಬ ಘೋಷಣೆಗಳು ಕೂಗಿದ್ದಾರೆ.

2028 ಚುನಾವಣೆಗೆ ಡಿಕೆಶಿಗೆ ದೊಡ್ಡ ಜವಾಬ್ದಾರಿ

ಈ ನಡುವೆ ಸಿದ್ದರಾಮಯ್ಯ-ಡಿಕೆಶಿ ಬೆಂಬಲಿಗರ ನಡುವಿನ ಸಂಘರ್ಷದಿಂದ ಕಾಂಗ್ರೆಸ್ ಇಮೇಜ್‌ಗೆ ಹಾನಿಯಾಗಿದೆ ಎಂಬ ಅಸಮಾಧಾನ ಹೈಕಮಾಂಡ್ ನಲ್ಲಿದ್ದು, ಈ ಹಿನ್ನೆಲೆ, ಪಕ್ಷವನ್ನು ಪುನರ್‌ಸಂಘಟಿಸಿ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ತರುವ ಹೊಣೆಗಾರಿಕೆಯನ್ನು ಡಿಕೆ ಶಿವಕುಮಾರ್ ಅವರಿಗೆ ನೀಡಲಾಗಿದೆ ಎಂದು ಮೂಲಗಳು ಹೇಳುತ್ತಿವೆ.

#Karnatakapolitics #Leadershipchange #Siddaramaiah resign #DK Shivakumar #ಕರ್ನಾಟಕ ರಾಜಕೀಯ #ನಾಯಕತ್ವಬದಲಾವಣೆ#ಸಿದ್ದರಾಮಯ್ಯ ರಾಜೀನಾಮೆ#ಡಿಕೆ ಶಿವಕುಮಾರ್

Leave a Reply

Your email address will not be published. Required fields are marked *