ಸಾಂದರ್ಭಿಕ ಚಿತ್ರರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ


ಬೇರೆ ವ್ಯವಸ್ಥೆ ಆಗುವವರೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಜವಾಬ್ದಾರಿ ನಿರ್ವಹಿಸಬೇಕಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ತಕ್ಷಣದಿಂದಲೇ ಸಚಿವ ಸಂಪುಟ ಸಭೆಯೂ ವಿಸರ್ಜನೆ ಆಗಲಿದೆ. ಬೇರೆ ವ್ಯವಸ್ಥೆ ಆಗುವವರೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಜವಾಬ್ದಾರಿ ನಿರ್ವಹಿಸಬೇಕಾಗಿದೆ.

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ದೆಹಲಿಯಿಂದ ವಾಪಸ್ ಆದ ಬಳಿಕ ನಾಳೆ ಅಥವಾ ಭಾನುವಾರ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಮುಂದಿನ ಸಿಎಂ ಯಾರು ಎಂಬುದನ್ನು  ಹೈಕಮಾಂಡ್ ನಾಯಕರು ಮಾಡಲಿದ್ದಾರೆ‌.

ಈ ಸಭೆಯಲ್ಲಿ ಶಾಸಕಾಂಗ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಸಿಎಲ್ ಪಿ ನಾಯಕನ ಆಯ್ಕೆ ವೇಳೆ ಕಾಂಗ್ರೆಸ್ ಮುಖಂಡರಾದ ರಣದೀಪ್ ಸುರ್ಜೇವಾಲ, ಕೆಸಿ ವೇಣುಗೋಪಾಲ್ ಕೂಡಾ ಉಪಸ್ಥಿತಿ ಇರಲಿದ್ದಾರೆ.

#karnatakaPolitics #Siddaramaiahresign #Governor thawarChandGehlot #Accept #ಕರ್ನಾಟಕರಾಜಕೀಯ #ಸಿದ್ದರಾಮಯ್ಯರಾಜೀನಾಮೆ#ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ #ಅಂಗೀಕಾರ

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link