ರಾಹುಲ್ ಗಾಂಧಿ ಸಿದ್ದರಾಮಯ್ಯ


ದೆಹಲಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯರನ್ನು ಭೇಟಿ ಮಾಡಿದ ಬಳಿಕ, ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.

ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಇಂದು ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಅವರು, ದೆಹಲಿಯ 10 ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ನಿವಾಸಕ್ಕೆ ಆಗಮಿಸಿದ್ದಾರೆ. ಸೋನಿಯಾ ಜೊತೆ ರಾಹುಲ್ ಗಾಂಧಿಯನ್ನೂ ಭೇಟಿ ಮಾಡಿದ್ದು, ಇಬ್ಬರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಸಿದ್ದು ಭೇಟಿ: ದೆಹಲಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯರನ್ನು ಭೇಟಿ ಮಾಡಿದ ಬಳಿಕ, ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಈ ವೇಳೆ ಪುತ್ರ ಯತೀಂದ್ರ ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ ಮತ್ತಿತರರು ಉಪಸ್ಥಿತರಿದ್ದರು.

#newdelhi #siddaramaiah #Rahulgandhi #kharge #ನವದೆಹಲಿ #ಸಿದ್ದರಾಮಯ್ಯ #ರಾಹುಲ್ ಗಾಂಧಿ #ಖರ್ಗೆ

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link