ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿತ್ತು. ಸಿಎಂ ಡಿಕೆ ಶಿವಕುಮಾರ್ ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರು ಮೊದಲ ಸಚಿವ ಸಂಪುಟ ಸಭೆಯ ನಂತರ ಘೋಷಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಆದೇಶ ಮಾಡಿ ಹೊರಡಿಸಿದೆ. ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿತ್ತು. ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲು ತಾತ್ವಿಕ ಅನುಮೋದನೆ ನೀಡಿ ಸರ್ಕಾರ ಆದೇಶಿಸಿದೆ. ಮುಂದುವರೆದು, ಈ ಯೋಜನೆಗೆ ಸಂಬಂಧಿಸಿದಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಪುಷ್ಪ ವಿ.ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. #Karnataka #Freebuspass #schoolstudent #Goverenment #ಕರ್ನಾಟಕ #ಉಚಿತಬಸ್ ಪಾಸ್ #ಶಾಲಾವಿದ್ಯಾರ್ಥಿಗಳು #ರಾಜ್ಯಸರ್ಕಾರ Share via: Facebook X (Twitter) LinkedIn More Post navigation KPCC ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ ನೇಮಕ! ಪಕ್ಷ, ಗಾಂಧಿ ನಿಷ್ಠ ಹಿಂದುಳಿದ ನಾಯಕನಿಗೆ ಮಹತ್ವದ ಹುದ್ದೆ ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!