ಜಂತರ್ ಮಂತರ್ನಲ್ಲಿ ಬೆಂಬಲಿಗರನ್ನು ಭೇಟಿಯಾಗುವ ಬಗ್ಗೆ ಉತ್ಸಾಹ ವ್ಯಕ್ತಪಡಿಸಿದರು. ಮತ್ತು ಪುಸ್ತಕ ಮತ್ತು ರಾಷ್ಟ್ರಧ್ವಜವನ್ನು ತರುವಂತೆ ಹೇಳಿದ್ದಾರೆ. ಕರುಣೆ ಮತ್ತು ಕೃತಜ್ಞತೆಯ ಸೂಚಕವಾಗಿ ಪೊಲೀಸ್ ಸಿಬ್ಬಂದಿಗೆ ಹೂವುಗಳನ್ನು ನೀಡುವಂತೆ ತಿಳಿಸಿದ್ದಾರೆ. ಅಭಿಜೀತ್ ದಿಪ್ಕೆ ನವದೆಹಲಿ: ಕಾಕ್ರೋಚ್ ಜನತಾ ಪಕ್ಷ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಅದರ ಸಂಸ್ಥಾಪಕ ಅಭಿಜೀತ್ ದಿಪ್ಕೆ ಶನಿವಾರ ದೆಹಲಿಗೆ ಬಂದಿಳಿದಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ತನ್ನ ಬೆಂಬಲಿಗರಿಗೆ ಅವರು ಕರೆ ನೀಡಿದ್ದಾರೆ. ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ ಕಾರ್ಯಕರ್ತ ಸೋನಮ್ ವಾಂಗ್ಚುಕ್, ಡಿಪ್ಕೆ ಅವರನ್ನು ಬಂಧಿಸಿದರೆ ಆರು ವಾರಗಳ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದಕ್ಕೂ ಮುನ್ನಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಅಭಿಜೀತ್ ದಿಪ್ಕೆ, ಜಂತರ್ ಮಂತರ್ನಲ್ಲಿ ಬೆಂಬಲಿಗರನ್ನು ಭೇಟಿಯಾಗುವ ಬಗ್ಗೆ ಉತ್ಸಾಹ ವ್ಯಕ್ತಪಡಿಸಿದರು. ಮತ್ತು ಪುಸ್ತಕ ಮತ್ತು ರಾಷ್ಟ್ರಧ್ವಜವನ್ನು ತರುವಂತೆ ಹೇಳಿದ್ದಾರೆ. ಕರುಣೆ ಮತ್ತು ಕೃತಜ್ಞತೆಯ ಸೂಚಕವಾಗಿ ಪೊಲೀಸ್ ಸಿಬ್ಬಂದಿಗೆ ಹೂವುಗಳನ್ನು ನೀಡುವಂತೆ ತಿಳಿಸಿದ್ದಾರೆ. ನೀಟ್, ಸಿಬಿಎಸ್ಇ, ಸಿಯುಇಟಿ ಮತ್ತು ಎಸ್ಎಸ್ಸಿ ಸೇರಿದಂತೆ ಇನ್ನಿತರ ಪರೀಕ್ಷೆ ಮತ್ತು ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸರ್ಕಾರದ ಹೊಣೆಗಾರಿಕೆಗೆ ಒತ್ತಾಯಿಸಿ ಸಿಜೆಪಿ ಈ ಪ್ರತಿಭಟನೆಯನ್ನು ಆಯೋಜಿಸಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೂ ಕರೆ ನೀಡಿದೆ. #Cockroach Janta Party founder #Abhijeet Dipke #lands in Delhi #ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ #ಅಭಿಜೀತ್ ದಿಪ್ಕೆ #ದೆಹಲಿಗೆ ಆಗಮನ Share via: Facebook X (Twitter) LinkedIn More Post navigation ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ! ‘ನಮ್ಮ ಪೋಸ್ಟ್ಗಳನ್ನು ಡಿಲೀಟ್ ಮಾಡಬಹುದು, ಆದರೆ ನಮ್ಮನ್ನು ಅಳಿಸಲು ಸಾಧ್ಯವಿಲ್ಲ’ :CJP ಸಂಸ್ಥಾಪಕ!