ಡಿಕೆ ಶಿವಕುಮಾರ್ಮೆಟ್ರೋ ರೈಲಿನಲ್ಲಿ ಸಿಎಂ ಡಿಕೆ ಶಿವಕುಮಾರ್ ಪ್ರಯಾಣ

ವಿಧಾನಸೌಧದ ಎದುರಿನ ಮೆಟ್ರೋ ಸ್ಟೇಷನ್ ನಿಂದ ಕನಕಪುರ ರಸ್ತೆ ಕೊನೇ ಮೆಟ್ರೋ ಸ್ಟೇಷನ್ ವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಿದ ಮುಖ್ಯಮಂತ್ರಿ, ರೈಲಿನಲ್ಲಿ ಪ್ರಯಾಣಿಕರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಪ್ರಯಾಣಿಕರು ಸಿಎಂ ಜೊತೆಗೆ ಸೆಲ್ಫಿ ಕ್ಲಿಕಿಸಿಕೊಂಡರು.

ಬೆಂಗಳೂರು: ಸಾರ್ವಜನಿಕರಿಗೆ ತೊಂದರೆ ಆಗಬಹುದಾದ “ಜೀರೋ ಟ್ರಾಫಿಕ್” ಕಾರು ಪ್ರಯಾಣ ತಪ್ಪಿಸಲು ಸಿಎಂ ಡಿ ಕೆ ಶಿವಕುಮಾರ್ ಭಾನುವಾರ ಮೆಟ್ರೋದಲ್ಲಿ ಸಂಚರಿಸಿದ್ದಾರೆ.

 ವಿಧಾನಸೌಧದ ಎದುರಿನ ಮೆಟ್ರೋ ಸ್ಟೇಷನ್ ನಿಂದ ಕನಕಪುರ ರಸ್ತೆ ಕೊನೇ ಮೆಟ್ರೋ ಸ್ಟೇಷನ್ ವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಿದ ಮುಖ್ಯಮಂತ್ರಿ, ರೈಲಿನಲ್ಲಿ ಪ್ರಯಾಣಿಕರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಪ್ರಯಾಣಿಕರು ಸಿಎಂ ಜೊತೆಗೆ ಸೆಲ್ಫಿ ಕ್ಲಿಕಿಸಿಕೊಂಡರು.

ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ಮತ್ತು ಕನಕಪುರ ತಾಲೂಕಿನ ನಾನಾ ಕಡೆ ಜನರಿಗೆ ಕೃತಜ್ಞತೆ ಸಲ್ಲಿಸಲು ಭಾನುವಾರ ಬೆಳಗ್ಗೆ 10 ಗಂಟೆಯಿಂದ ರಾತ್ರಿ 9.00 ರವರೆಗೆ ಕೃತಜ್ಞತೆ ಸಮರ್ಪಣಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸದಾಶಿವನಗರ ನಿವಾಸದಿಂದ ಕನಕಪುರ ರಸ್ತೆವರೆಗೂ ಜೀರೋ ಟ್ರಾಫಿಕ್ ಬಳಸುವುದರಿಂದ ಜನರ ವಾಹನ ಸಂಚಾರಕ್ಕೆ ತೊಂದರೆ ಆಗುತ್ತದೆ ಎಂಬುದನ್ನು ಮನಗಂಡು ಸಿಎಂ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.

#Bengaluru #CMDKShivakumar #Metroride #ಬೆಂಗಳೂರು#ಸಿಎಂಡಿಕೆ ಶಿವಕುಮಾರ್ #ಮೆಟ್ರೋ ಪ್ರಯಾಣ

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link