ಮಳೆಯ ಸಾಂದರ್ಭಿಕ ಚಿತ್ರಮಳೆಯ ಸಾಂದರ್ಭಿಕ ಚಿತ್ರ


ಗಾಳಿಯು ಗಂಟೆಗೆ 40-50 km ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು,  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರುರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಚುರುಕುಗೊಂಡಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ವಿವಿಧ ಜಿಲ್ಲೆಗಳಲ್ಲಿಯೂ ಭಾರಿ ಮಳೆ ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿರಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಬೆಳಗಾವಿ, ಬಾಗಲಕೋಟೆ, ರಾಯಚೂರು ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ‌ ಅಲರ್ಟ್ ಘೋಷಿಸಲಾಗಿದೆ.

ಗಾಳಿಯು ಗಂಟೆಗೆ 40-50 km ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು,  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

#Karnataka #Bengaluru #Heavyrain #IMD #ಕರ್ನಾಟಕ #ಬೆಂಗಳೂರು#ಭಾರಿ ಮಳೆ#ಭಾರತೀಯಹವಾಮಾನ ಇಲಾಖೆ

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link