ನಾನು ಯಾರ್ಯಾರೋಮಾತಿಗೆ ಉತ್ತರ ನೀಡಲು ಆಗುವುದಿಲ್ಲ. ಮಹಾರಾಷ್ಟ್ರದಲ್ಲಿ 90 ಸಾವಿರ ಎಕರೆ, ತೆಲಂಗಾಣದಲ್ಲಿ 40 ಸಾವಿರ ಎಕರೆಯಲ್ಲಿ ಟೌನ್ ಶಿಪ್ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ನಮ್ಮ ಸರ್ಕಾರ ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ” ಎಂದು ಸಿಎಂಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ವೈದೇಹಿ ಆಸ್ಪತ್ರೆ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಸೋಮವಾರ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಯೋಜನೆ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಲು ಸರ್ಕಾರ ಮುಂದಾಗಿದೆ. ಆರಂಭದಲ್ಲಿ ಕೆಲವು ಫಲಾನುಭವಿಗಳು ಬೇರೆಯವರ ದೂರವಾಣಿ ಸಂಖ್ಯೆ ಹಾಗೂ ಇತರೆ ಮಾಹಿತಿ ನೀಡಿದ್ದಾರೆ. ಬೇರೆಯವರ ಖಾತೆಗೆ ಹಣ ಹೋಗುತ್ತಿರುವ ಬಗ್ಗೆ ನಮಗೆ ಮಾಹಿತಿ ಇದೆ. ಫಲಾನುಭವಿಗಳ ಖಾತೆಗೆ ಹಣಹೋಗುವಂತೆ ಮಾಡುವುದು ಸರ್ಕಾರದ ಉದ್ದೇಶ ಎಂದು ತಿಳಿಸಿದರು. ಫಲಾನುಭವಿಗಳಿಗೆ ಗುರುತಿನ ಚೀಟಿ ನೀಡಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದ್ದೇವೆ. ಆಪ್ರಕ್ರಿಯೆ ನಡೆಯುತ್ತಿದೆ. ಯೋಜನೆ ನಿಲ್ಲಿಸುವುದು ನಮ್ಮಉದ್ದೇಶವಲ್ಲ. ನಮ್ಮ ಗ್ಯಾರಂಟಿ ದೇಶಕ್ಕೆ ಮಾದರಿ. ಮಹಾರಾಷ್ಟ್ರ, ಮಧ್ಯಪ್ರದೇಶ, ಆಂಧ್ರ ಪ್ರದೇಶ ಸೇರಿದಂತೆ ಬೇರೆ ರಾಜ್ಯಗಳು ನಮ್ಮಮಾದರಿ ಅನುಸರಿಸಿವೆ ಎಂದು ತಿಳಿಸಿದರು. ಬಿಜೆಪಿ ಸರ್ಕಾರ 1 ಸಾವಿರ ಎಕರೆ ಸ್ವಾಧೀನ ಮಾಡಿಕೊಂಡಾಗ ಯಾಕೆ ಸುಮ್ಮನಿದ್ದರು? ಇದೇ ವೇಳೆ ಬಿಡದಿ ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, “ನಾನು ಯಾರ್ಯಾರೋ ಮಾತಿಗೆ ಉತ್ತರ ನೀಡಲು ಆಗುವುದಿಲ್ಲ. ಮಹಾರಾಷ್ಟ್ರದಲ್ಲಿ 90 ಸಾವಿರ ಎಕರೆ, ತೆಲಂಗಾಣದಲ್ಲಿ 40 ಸಾವಿರ ಎಕರೆಯಲ್ಲಿ ಟೌನ್ ಶಿಪ್ ಮಾಡುತ್ತಿದ್ದಾರೆ ಬಿಡದಿಯದು ನನ್ನ ಯೋಜನೆಯಲ್ಲ. ಕುಮಾರಸ್ವಾಮಿ ಅವರು ಈ ಯೋಜನೆಗೆ ಅಧಿಸೂಚನೆ ಹೊರಡಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರ ಈ ಜಾಗದಲ್ಲಿ 1 ಸಾವಿರ ಎಕರೆಯನ್ನು ಕೆಐಎಡಿಬಿಗೆ ಸ್ವಾಧೀನಪಡಿಸಿಕೊಟ್ಟಾಗ ಇವರು ಯಾಕೆ ಸುಮ್ಮನಿದ್ದರು? ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಮಾಡಿದ್ದು ಯಾರು? ಆಗ ರೈತರನ್ನು ಕಳುಹಿಸಲಿಲ್ಲವೇ? ಇಲ್ಲಿ ರೈತರು ಜಮೀನು ನೀಡಲು ಮುಂದಾಗಿದ್ದಾರೆ. ಆದರೆ ಇವರಿಗೆ ರಾಜಕಾರಣ ಮಾಡಬೇಕು ಮಾಡುತ್ತಿದ್ದಾರೆ ಎಂದು ಹರಿಹಾಯ್ದರು. #Bidadi township#CM DK Shivakumar#Union Minister HD Kumarswamy#JDS# Share via: Facebook X (Twitter) LinkedIn More Post navigation ಸಮಾಜ ಸೇವಕಿ ಡಾ. ಜಿ.ಎಸ್. ಸುಶೀಲಮ್ಮ ಸಂದರ್ಶನ ಭಾಗ-1 ಸಿಎಂ ಡಿಕೆ ಶಿವಕುಮಾರ್ ಆಪ್ತ , ಕಾಂಗ್ರೆಸ್ ಶಾಸಕ, ಇಕ್ಬಾಲ್ ಹುಸೇನ್ ಗೆ ಹೃದಯಾಘಾತ!