ಸಾಂದರ್ಭಿಕ ಚಿತ್ರಆರೋಪಿ ದರ್ಶನ್, ರೇಣುಕಾಸ್ವಾಮಿ


ಪ್ರಾಸಿಕ್ಯೂಷನ್ ಅಂದರೆ ಸರ್ಕಾರದ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಈ ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಇದು ಅತ್ಯಂತ ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಕಾನೂನು ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ನಟ ದರ್ಶನ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ  ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ ಒಟ್ಟು ಹದಿನೇಳು ಆರೋಪಿಗಳಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ. 

ಪ್ರಾಸಿಕ್ಯೂಷನ್ ಅಂದರೆ ಸರ್ಕಾರದ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಈ ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಇದು ಅತ್ಯಂತ ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಕಾನೂನು ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ಈ ಇಡೀ ಕಾನೂನು ಹೋರಾಟದ ಹಿನ್ನೆಲೆಯನ್ನು ಗಮನಿಸುವುದಾದರೆ, ಪ್ರಕರಣದ ತನಿಖೆ ನಡೆಸುತ್ತಿರುವ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸರ್ಕಾರಿ ಅಭಿಯೋಜಕರು ಈ ಹಿಂದೆ ಅಧೀನ ನ್ಯಾಯಾಲಯಕ್ಕೆ ಮಹತ್ವದ ಮನವಿಯೊಂದನ್ನು ಸಲ್ಲಿಸಿದ್ದರು. ರೇಣುಕಾಸ್ವಾಮಿ ಅವರ ತಾಯಿಯ ಪರವಾಗಿ ಪಾರ್ಟಿ ಸವಾಲು ಅಂದರೆ ಕಾನೂನು ಭಾಷೆಯಲ್ಲಿ ಕ್ರಾಸ್ ಎಕ್ಸಾಮಿನೇಷನ್ ನಡೆಸಲು ಅವಕಾಶ ನೀಡಬೇಕು ಎಂದು ಪೊಲೀಸರು ಕೋರಿದ್ದರು. 

ಕೆಲವು ಪ್ರಮುಖ ಸಾಕ್ಷಿಗಳು ನ್ಯಾಯಾಲಯದ ಮುಂದೆ ತಮ್ಮ ಹೇಳಿಕೆಯನ್ನು ಬದಲಾಯಿಸುವ ಅಥವಾ ತನಿಖಾ ಸಂಸ್ಥೆಗೆ ನೀಡಿದ ಮಾಹಿತಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವ ಸಾಧ್ಯತೆ ಇರುವುದರಿಂದ, ಅವರನ್ನು ಪ್ರತಿಕೂಲ ಸಾಕ್ಷಿ ಅಥವಾ ಹಾಸ್ಟೈಲ್ ವಿಟ್ನೆಸ್ ಎಂದು ಪರಿಗಣಿಸಿ ಸವಾಲು ಹಾಕಲು ಪ್ರಾಸಿಕ್ಯೂಷನ್ ಮುಂದಾಗಿತ್ತು.

ಈ ಕುರಿತಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸಿಟಿ ಸಿವಿಲ್ ಕೋರ್ಟ್ ನ 57ನೇ ನ್ಯಾಯಾಲಯ 2026ರ ಜನವರಿ 17 ರಂದು ತಿರಸ್ಕರಿಸಿದೆ. ಆದ್ದರಿಂದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿ ರತ್ನ ಪ್ರಭಾ ಅವರನ್ನು ಪಾಟಿ ಸವಾಲಿಗೆ ಒಳಪಡಿಸಲು ಅನುಮತಿ ನೀಡಿ ಆದೇಶಿಸಬೇಕು ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಪ್ರತಿವಾದಿಗಳಾದ ಪವಿತ್ರಗೌಡ, ದರ್ಶನ್ ಮತ್ತಿತರ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಿತು.

#RenukaswamyMurdercase #Highcourt #Notice #Darshan #ರೇಣುಕಾಸ್ವಾಮಿಕೊಲೆಪ್ರಕರಣ #ಹೈಕೋರ್ಟ್ #ನೋಟಿಸ್ #ದರ್ಶನ್

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link