ಶ್ರೇಯಾಂಕಾ ಪಾಟೀಲ್ ಅವರ ಸ್ಥಾನಕ್ಕೆ ಬದಲಿ ಆಟಗಾರ್ತಿಯಾಗಿ ಯುವ ಲೆಗ್ ಸ್ಪಿನ್ನರ್ ಪ್ರೇಮಾ ರಾವತ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಯ್ಕೆ ಮಾಡಿದೆ. ನವದೆಹಲಿ : ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಭಾರತ ತಂಡಕ್ಕೆ ಭಾರಿ ಹೊಡೆತ ಬಿದ್ದಿದೆ. ತಂಡದ ಪ್ರಮುಖ ಆಫ್ ಸ್ಪಿನ್ನರ್ ಕರ್ನಾಟಕದ ಶ್ರೇಯಾಂಕಾ ಪಾಟೀಲ್ ಗಾಯದ ಸಮಸ್ಯೆಯಿಂದಾಗಿ ಇಡೀ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇಂಗ್ಲೆಂಡ್ ಆತಿಥ್ಯದಲ್ಲಿ ನಡೆಯುತ್ತಿರುವ ಈ ಮಹತ್ವದ ಟೂರ್ನಿಯಲ್ಲಿ ಭರವಸೆಯ ಆಟಗಾರ್ತಿಯನ್ನು ಕಳೆದುಕೊಂಡಿರುವುದು ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಶ್ರೇಯಾಂಕಾ ಪಾಟೀಲ್ ಅವರ ಸ್ಥಾನಕ್ಕೆ ಬದಲಿ ಆಟಗಾರ್ತಿಯಾಗಿ ಯುವ ಲೆಗ್ ಸ್ಪಿನ್ನರ್ ಪ್ರೇಮಾ ರಾವತ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಯ್ಕೆ ಮಾಡಿದೆ. ಇಂಗ್ಲೆಂಡ್ನ ಲೀಡ್ಸ್ ಮೈದಾನದಲ್ಲಿ ನೆದರ್ಲೆಂಡ್ಸ್ ತಂಡದ ವಿರುದ್ಧ ಬುಧವಾರ ನಡೆದ ಪಂದ್ಯದ ವೇಳೆ 23 ವರ್ಷದ ಶ್ರೇಯಾಂಕಾ ಪಾಟೀಲ್ ಅವರ ಬಲ ಕಾಲಿನ ಹಿಮ್ಮಡಿಯಲ್ಲಿ ಅಸ್ಥಿರಜ್ಜು ತೀವ್ರವಾಗಿ ಜಖಂಗೊಂಡಿದೆ.ಈ ಸಂದರ್ಭದಲ್ಲಿ ಅವರು ತೀವ್ರವಾದ ನೋವಿನಿಂದ ಮೈದಾನದಲ್ಲೇ ಕುಸಿದು ಬಿದ್ದರು. ತಕ್ಷಣವೇ ಮೈದಾನಕ್ಕೆ ಧಾವಿಸಿದ ವೈದ್ಯಕೀಯ ತಂಡ ಪ್ರಾಥಮಿಕ ಚಿಕಿತ್ಸೆ ನೀಡಲು ಮುಂದಾಯಿತು. ಆದರೆ ನೋವಿನ ತೀವ್ರತೆ ಹೆಚ್ಚಾಗಿದ್ದರಿಂದ ಮತ್ತು ಬಲಗಾಲಿನ ಮೇಲೆ ಕನಿಷ್ಠ ಭಾರವನ್ನು ಸಹ ಹಾಕಲು ಸಾಧ್ಯವಾಗದ ಕಾರಣ ಅವರನ್ನು ಸ್ಟ್ರೆಚರ್ ಮೂಲಕ ಮೈದಾನದಿಂದ ಹೊರಗೆ ಕರೆದೊಯ್ಯಲಾಯಿತು. ನಂತರ ನಡೆದ ವೈದ್ಯಕೀಯ ತಪಾಸಣೆಯಲ್ಲಿ ಅವರ ಕಾಲಿನ ಅಸ್ಥಿರಜ್ಜು ಹರಿದಿರುವುದು ದೃಢಪಟ್ಟಿದ್ದು, ಚೇತರಿಸಿಕೊಳ್ಳಲು ದೀರ್ಘಾವಧಿಯ ವಿಶ್ರಾಂತಿ ಅಗತ್ಯವಿರುವುದರಿಂದ ಟೂರ್ನಿಯಿಂದ ಅಧಿಕೃತವಾಗಿ ಹೊರಗುಳಿದಿದ್ದಾರೆ. #T20 World Cup #Shreyanka Patil #out #ಟಿ-20ವಿಶ್ವಕಪ್ #ಶ್ರೇಯಾಂಕಾ ಪಾಟೀಲ್ #ಹೊರಗೆ Share via: Facebook X (Twitter) LinkedIn More Post navigation Norway Chess title: ಜರ್ಮನಿಯ ವಿನ್ಸೆಂಟ್ ಕೀಮರ್ ಗೆದ್ದು ಇತಿಹಾಸ ಸೃಷ್ಟಿಸಿದ ಪ್ರಜ್ಞಾನಂದ!