ವಾಯುದಾಳಿ ಚಿತ್ರ


ಕಳೆದ ವಾರವೇ ಯುದ್ಧ ಅಂತ್ಯಗೊಳಿಸಲು ಹಾಗೂ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಸಂಪೂರ್ಣವಾಗಿ ತೆರೆಯಲು ಉಭಯ ದೇಶಗಳ ನಡುವೆ ಮಧ್ಯಂತರ ಒಪ್ಪಂದವಾಗಿದ್ದರೂ, ಈ ದಾಳಿ ಹಿನ್ನಡೆಯುಂಟು ಮಾಡಿದಂತಾಗಿದೆ.

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ ಆವರಿಸಿದೆ. ಹಾರ್ಮುಜ್ ಜಲಸಂಧಿಯಲ್ಲಿ ಸರಕು ಸಾಗಣೆ ಹಡಗಿನ ಮೇಲೆ ನಡೆದ ಡ್ರೋನ್ ದಾಳಿಗೆ ಪ್ರತಿಯಾಗಿ ಅಮೆರಿಕ, ಇರಾನ್‌ನ ಕ್ಷಿಪಣಿ ಮತ್ತು ಡ್ರೋನ್ ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ.

ಕಳೆದ ವಾರವೇ ಯುದ್ಧ ಅಂತ್ಯಗೊಳಿಸಲು ಹಾಗೂ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಸಂಪೂರ್ಣವಾಗಿ ತೆರೆಯಲು ಉಭಯ ದೇಶಗಳ ನಡುವೆ ಮಧ್ಯಂತರ ಒಪ್ಪಂದವಾಗಿದ್ದರೂ, ಈ ದಾಳಿ ಹಿನ್ನಡೆಯುಂಟು ಮಾಡಿದಂತಾಗಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸರಕು ಹಡಗಿನ ಮೇಲಿನ ಡ್ರೋನ್ ದಾಳಿ ಕದನ ವಿರಾಮದ ಸ್ಪಷ್ಟ ಉಲ್ಲಂಘನೆ ಎಂದು ಆರೋಪಿಸಿದ್ದಾರೆ. ನಿನ್ನೆ ಅವರು ನಾಲ್ಕು ಬಾರಿ ದಾಳಿ ನಡೆಸಿರುವುದು ನನಗೆ ಇಷ್ಟವಾಗಲಿಲ್ಲ,” ಎಂದು ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದ ಟ್ರಂಪ್, ಅಮೆರಿಕ ಪ್ರತಿದಾಳಿ ನಡೆಸುತ್ತದೆಯೇ ಎಂಬ ಪ್ರಶ್ನೆಗೆ ಮೊದಲು “ನಿಮಗೇ ಗೊತ್ತಾಗುತ್ತದೆ” ಎಂದು ಉತ್ತರಿಸಿದ್ದರು.

ಈ ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಇರಾನ್‌ನಲ್ಲಿರುವ ಕ್ಷಿಪಣಿ ಉಡಾವಣಾ ಕೇಂದ್ರಗಳು, ಡ್ರೋನ್ ತಾಣಗಳು ಹಾಗೂ ಕರಾವಳಿ ರಾಡಾರ್ ವ್ಯವಸ್ಥೆಗಳ ಮೇಲೆ ನಿಖರ ವಾಯುದಾಳಿ ನಡೆಸಿರುವುದಾಗಿ ಘೋಷಿಸಿದೆ. ಸುಮಾರು ಒಂದು ಗಂಟೆಯೊಳಗೆ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕ ಮತ್ತು ಇರಾನ್ ನಡುವಿನ ಮಧ್ಯಂತರ ಒಪ್ಪಂದದ ಪ್ರಕಾರ, ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸುರಕ್ಷಿತ ಸಂಚಾರ, ಇರಾನ್‌ನ ಅಧಿಕ ಪ್ರಮಾಣದಲ್ಲಿ ಸಂಸ್ಕರಿಸಿದ ಯುರೇನಿಯಂ ಸಂಗ್ರಹ ಸೇರಿದಂತೆ ಹಲವು ವಿಷಯಗಳಲ್ಲಿ 60 ದಿನಗಳೊಳಗೆ ಅಂತಿಮ ಒಪ್ಪಂದಕ್ಕೆ ಬರಬೇಕಿದೆ. ಆದರೆ, ಇತ್ತೀಚಿನ ಬೆಳವಣಿಗೆಗಳಿಂದ ಮಾತುಕತೆಗಳ ಭವಿಷ್ಯದ ಬಗ್ಗೆ ಮತ್ತೆ ಅನುಮಾನಗಳು ಮೂಡಿವೆ.

ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತಾ ಸಮಿತಿಯ ಅಧ್ಯಕ್ಷ ಇಬ್ರಾಹಿಂ ಅಜೀಜಿ, ಟ್ರಂಪ್ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಿ, “ಹಾರ್ಮುಜ್ ಜಲಸಂಧಿಯ ನಿಯಂತ್ರಣ ಇರಾನ್‌ನಲ್ಲಿದೆ. ನಿಯಮಗಳನ್ನು ಗೌರವಿಸಿ. ನಿಯಂತ್ರಣವನ್ನು ಕದನ ವಿರಾಮ ಉಲ್ಲಂಘನೆ ಎಂದು ತಪ್ಪಾಗಿ ಅರ್ಥೈಸಬೇಡಿ. ಇದು ಕದನ ವಿರಾಮದ ಉಲ್ಲಂಘನೆಯಲ್ಲ, ಕದನ ವಿರಾಮದ ನಿರ್ವಹಣೆ” ಎಂದು ಹೇಳಿದ್ದಾರೆ.

#America #Airstrike #iran#ಅಮೆರಿಕ#ವಾಯುದಾಳಿ #ಇರಾನ್

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link