ಪ್ರಧಾನಿ ಮೋದಿ ಜೊತೆಗೆ ಜಪಾನ್ ಪ್ರಧಾನಿ


ದೆಹಲಿಯಲ್ಲಿ ಜುಲೈ 3ರವರೆಗೆ ನಡೆಯಲಿರುವ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. 

ಪ್ರಧಾನಿ ಮೋದಿ ಜೊತೆಗೆ ಜಪಾನ್ ಪ್ರಧಾನಿ ಸನೇ ತಕೈಚಿ

ನವದೆಹಲಿ: ಜಪಾನ್ ಪ್ರಧಾನಿ ಸನೇ ತಕೈಚಿ ಮೂರು ದಿನಗಳ ಭಾರತದ ಪ್ರವಾಸಕ್ಕಾಗಿ ಬುಧವಾರ ನವದೆಹಲಿಗೆ ಬಂದಿಳಿದಿದ್ದಾರೆ. ವ್ಯಾಪಾರ, ಹೂಡಿಕೆ ಮತ್ತು ರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಬಾಂಧವ್ಯ ವಿಸ್ತರಿಸುವ ನಿಟ್ಟಿನಲ್ಲಿ ಸನೇ ತಕೈಚಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ದೆಹಲಿಯಲ್ಲಿ ಜುಲೈ 3ರವರೆಗೆ ನಡೆಯಲಿರುವ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. 

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಮೊದಲ ಭಾರತ ಭೇಟಿಯ ಸಂದರ್ಭದಲ್ಲಿ ನಿಮಗೆ ಅತಿಥ್ಯ ನೀಡಲು ನಾವು ಸಂತೋಷಪಡುತ್ತೇವೆ. ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಲು ಎದುರು ನೋಡುತ್ತಿದ್ದೇನೆ. ನಮ್ಮ ಜಂಟಿ ಪ್ರಯತ್ನಗಳ ಮೂಲಕ ಇಂಡೋ-ಪೆಸಿಫಿಕ್ ಮತ್ತು ಅದರಾಚೆಗಿನ ಪ್ರದೇಶಗಳಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿ ಸಾಧಿಸುವುದನ್ನು ಮುಂದುವರೆಸುತ್ತೇವೆ ಎಂದು ಬರೆದುಕೊಂಡಿದ್ದಾರೆ.

ಸನೇ ತಕೈಚಿ ಅವರು ಗುರುವಾರ ಹೈದರಾಬಾದ್ ಹೌಸ್ ನಲ್ಲಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.

#newdelhi #Japanpm #Arrive #PMMODI #ನವದೆಹಲಿ #ಜಪಾನ್ ಪ್ರಧಾನಿ#ಆಗಮನ#ಪ್ರಧಾನಿ ಮೋದಿ

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link