ಅಮೆರಿಕ ದಾಳಿ ಚಿತ್ರ


 ಅಮೆರಿಕ ವಿಧಿಸಿರುವ ನೌಕಾ ದಿಗ್ಬಂಧನವನ್ನು (Naval Blockade) ಮೀರಿ ಚಲಿಸಲು ಯತ್ನಿಸಿದ ವಾಣಿಜ್ಯ ತೈಲ ಟ್ಯಾಂಕರ್ ಹಡಗೊಂದರ ಮೇಲೆ ಅಮೆರಿಕಾ ಪಡೆಗಳು ಕ್ಷಿಪಣಿ ದಾಳಿ ನಡೆಸಿ, ಅದನ್ನು ಸಮುದ್ರದಲ್ಲೇ ನಿಷ್ಕ್ರಿಯಗೊಳಿಸಿವೆ.

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ  ಮತ್ತೆ ಯುದ್ಧದ ಕಾರ್ಮೋಡ ಆವರಿಸಿದೆ.ಅಮೆರಿಕದ ಮಿಲಿಟರಿ ಪಡೆಗಳು ಇರಾನ್‌ನ ರಾಜಧಾನಿ ಟೆಹ್ರಾನ್ ಸೇರಿದಂತೆ ಉತ್ತರ ಭಾಗದ ಪ್ರಮುಖ ಸೇನಾ ನೆಲೆಗಳ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿವೆ.ಪ್ರಮುಖ ಸೇನಾ ನೆಲೆಗಳ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿವೆ.

ಇದರ ಬೆನ್ನಲ್ಲೇ, ಅಮೆರಿಕ ವಿಧಿಸಿರುವ ನೌಕಾ ದಿಗ್ಬಂಧನವನ್ನು (Naval Blockade) ಮೀರಿ ಚಲಿಸಲು ಯತ್ನಿಸಿದ ವಾಣಿಜ್ಯ ತೈಲ ಟ್ಯಾಂಕರ್ ಹಡಗೊಂದರ ಮೇಲೆ ಅಮೆರಿಕಾ ಪಡೆಗಳು ಕ್ಷಿಪಣಿ ದಾಳಿ ನಡೆಸಿ, ಅದನ್ನು ಸಮುದ್ರದಲ್ಲೇ ನಿಷ್ಕ್ರಿಯಗೊಳಿಸಿವೆ.

ಮೂಲಗಳ ಪ್ರಕಾರ, ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಪಡೆಗಳು ಇರಾನ್‌ನ ಇತಿಹಾಸದಲ್ಲೇ ಅತ್ಯಂತ ಆಳವಾದ ಭಾಗಗಳಿಗೆ ನುಗ್ಗಿ ದಾಳಿ ನಡೆಸಿವೆ ಎಂದು ತಿಳಿದುಬಂದಿದ್ದು, ಇರಾನ್‌ನ ಬ್ಯಾಲಿಸ್ಟಿಕ್ ಕ್ಷಿಪಣಿ ಉತ್ಪಾದನೆ ಮತ್ತು ಬಾಹ್ಯಾಕಾಶ ಕಾರ್ಯಕ್ರಮದ ಪ್ರಮುಖ ಕೇಂದ್ರವಾಗಿರುವ ‘ಸೆಮ್ನಾನ್’ ಪ್ರಾಂತ್ಯವನ್ನು ಗುರಿಯಾಗಿಸಿಕೊಂಡು ಬಾಂಬ್ ದಾಳಿ ನಡೆಸಲಾಗಿದೆ.

ಬಂದರ್ ಅಬ್ಬಾಸ್ ಮತ್ತು ಖೇಶ್ಮ್ ದ್ವೀಪಗಳಲ್ಲಿರುವ ಇರಾನ್‌ನ ಡ್ರೋನ್ ಉಡಾವಣಾ ಕೇಂದ್ರಗಳು ಮತ್ತು ರೇಡಾರ್ ವ್ಯವಸ್ಥೆಗಳನ್ನು ಅಮೆರಿಕ ಸಂಪೂರ್ಣವಾಗಿ ಧ್ವಂಸಗೊಳಿಸಿದೆ. ಸಿಸ್ತಾನ್ ಪ್ರಾಂತ್ಯದಲ್ಲಿ ನಡೆದ ದಾಳಿಯಲ್ಲಿ ಇರಾನ್‌ನ ಕನಿಷ್ಠ ಏಳು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇದಕ್ಕೆ ಪ್ರತಿಯಾಗಿ ಇರಾನ್, ಬಹ್ರೇನ್ ಮತ್ತು ಕುವೈತ್‌ನಲ್ಲಿರುವ ಅಮೆರಿಕದ ಹಿತಾಸಕ್ತಿಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿದೆ. ಇದರೊಂದಿಗೆ ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಿದ್ದು, ಸಂಪೂರ್ಣ ಯುದ್ಧದ ಆತಂಕ ಮತ್ತೆ ಎದುರಾಗಿದೆ.

#US hits Iranian #Tehran attacks #Kuwait #ಅಮೆರಿಕ ಇರಾನ್ ಮೇಲೆ ದಾಳಿ #ಇರಾನ್ ದಾಳಿ#ಕುವೈತ್

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link