ಸೋನಂ ವಾಗ್ಚುಕ್

ಕೇಂದ್ರ ಸರ್ಕಾರ ತಮ್ಮ ಪ್ರಮುಖ ಬೇಡಿಕೆಗಳ ಕುರಿತು ಸಕಾರಾತ್ಮಕ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ, ವಾಂಗ್ಚುಕ್ ಬೆಂಬಲಿಸಿ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮಾತ್ರ ಮುಂದುವರಿಯಲಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಘೋಷಿಸಿದೆ.

ಸೋನಂ ವಾಂಗ್ಚುಕ್

ನವದೆಹಲಿ: Neet ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ 26 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರು ತಮ್ಮ ಉಪವಾಸವನ್ನು ಶುಕ್ರವಾರ ಅಂತ್ಯಗೊಳಿಸಿದ್ದಾರೆ.

ಕೇಂದ್ರ ಸರ್ಕಾರ ತಮ್ಮ ಪ್ರಮುಖ ಬೇಡಿಕೆಗಳ ಕುರಿತು ಸಕಾರಾತ್ಮಕ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ, ವಾಂಗ್ಚುಕ್ ಬೆಂಬಲಿಸಿ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮಾತ್ರ ಮುಂದುವರಿಯಲಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಘೋಷಿಸಿದೆ.

ಗುರುವಾರ ಮಧ್ಯರಾತ್ರಿ ಗುರ್ಗಾಂವ್‌ನ ಮೆಡಾಂಟಾ ಆಸ್ಪತ್ರೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಸೋನಂ ವಾಂಗ್ಚುಕ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಸರ್ಕಾರದ ಪರವಾಗಿ ಹಲವು ಭರವಸೆಗಳನ್ನು ನೀಡಿದರು.

ಬಳಿಕ ಲಡಾಖ್‌ನ ಅಪೆಕ್ಸ್ ಬಾಡಿ ಹಿರಿಯ ನಾಯಕರು, ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಹಾಗೂ ವೈದ್ಯರ ಸಮ್ಮುಖದಲ್ಲಿ ಅವರು 26 ದಿನಗಳ ಉಪವಾಸವನ್ನು ಮುರಿದರು. ಬಳಿಕ ವಿಡಿಯೋ ಸಂದೇಶವನ್ನು ಅವರು ಬಿಡುಗಡೆ ಮಾಡಿದ್ದಾರೆ. ಇದು ಉಪವಾಸದ ಅಂತ್ಯವಾಗಿರಬಹುದು. ಆದರೆ ಸರ್ಕಾರ ಮತ್ತು ಅಧಿಕಾರಿಗಳ ಹೊಣೆಗಾರಿಕೆಯ ನಿಜವಾದ ಆರಂಭ. ನೀಟ್- ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹೊಣೆಗಾರಿಕೆ ಕುರಿತು ಚರ್ಚಿಸಲು ಮತ್ತು ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲು ಸರ್ಕಾರ ಭರವಸೆ ನೀಡಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link