ಸೌಹಾರ್ದಯುತವಾಗಿ ಕಾವೇರಿ ನೀರು ಹಂಚಿಕೆಯ ಸಮಸ್ಯೆ ಬಗೆಹರಿಸಲು ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸೌಹಾರ್ದಯುತವಾಗಿ ಕಾವೇರಿ ನೀರು ಹಂಚಿಕೆಯ ಸಮಸ್ಯೆ ಬಗೆಹರಿಸಲು ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸೌಹಾರ್ದಯುತವಾಗಿ ಕಾವೇರಿ ನೀರು ಹಂಚಿಕೆಯ ಸಮಸ್ಯೆ ಬಗೆಹರಿಸಲು ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿಂದು ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಮಾತುಕತೆಗೆ ಬರಲು ಸಿದ್ಧ ಎಂದು ತಿಳಿಸಿದ್ದರು. ಆದರೆ, ಕಾವೇರಿ ಪರಿಸ್ಥಿತಿ ತಿಳಿಯಾದ ನಂತರ ಬರುವಂತೆ ಹೇಳಲಾಗಿದೆ. ಈಗ ರಾಜ್ಯದ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡು ಬರುತ್ತಿವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಪ್ರಮಾಣದ ನೀರನ್ನು ಸಂಗ್ರಹಿಸಲಾಗಿದೆ. ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಹೆಚ್ಚುವರಿ ಒಳಹರಿವನ್ನು ಈಗಾಗಲೇ ನಾಲೆಗಳಿಗೆ ನೀರು ಹರಿಸಲಾಗಿದ್ದು, ಇದರಿಂದ ರೈತರಿಗೆ ಅನುಕೂಲವಾಗಿದೆ ಎಂದರು.
ರಾಜ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶದ ವಿರುದ್ಧ ಈಗಾಗಲೇ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ರಾಜ್ಯಕ್ಕೆ ಉತ್ತಮ ಸಹಕಾರ ನೀಡುತ್ತಿದ್ದು, ಕೃಷ್ಣಾ ನದಿ ನೀರಿನ ಹಂಚಿಕೆ, ತುಂಗಭದ್ರಾ ಅಣೆಕಟ್ಟಿನ ಕ್ರಸ್ಟ್ ಗೇಟ್‌ಗಳ ಮರುಸ್ಥಾಪನೆ, ನವಿಲೆ ಸಮತೋಲನ ಅಣೆಕಟ್ಟೆ ನಿರ್ಮಾಣದ ಪ್ರಸ್ತಾಪಕ್ಕೂ ಸಮ್ಮತಿ ಸೂಚಿಸಿದ್ದಾರೆ.

ಕೃಷ್ಣಾ-ಗೋದಾವರಿ-ಕಾವೇರಿ ನದಿಗಳ ಜೋಡಣೆ ಹಾಗೂ ಕೃಷ್ಣಾ ನದಿ ನೀರು ಹಂಚಿಕೆಯಲ್ಲೂ ನೆರವು ನೀಡಿದ್ದಾರೆ ಎಂದರು.
ರಾಜ್ಯದ ಕುಡಿಯುವ ನೀರಿನ ಅಗತ್ಯವನ್ನು ಭದ್ರಪಡಿಸುವುದರ ಜೊತೆಗೆ ರೈತರ ಹಿತವನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ಕ್ರಮ ಕೈಗೊಂಡಿದೆ. ಈಗಾಗಲೇ ರೈತರು ಬಿತ್ತಿರುವ ಬೆಳೆಗಳ ರಕ್ಷಣೆಯ ಉದ್ದೇಶದಿಂದ ಕೆ.ಆರ್.ಎಸ್. ಹಾಗೂ ಕಬಿನಿ ನಾಲೆಗಳಿಗೆ ನೀರು ಹರಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಮಾಹಿತಿ ನೀಡಿದರು.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿಎಸ್ ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ, ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಸಂಸದ ಗೋವಿಂದ ಕಾರಜೋಳ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಛಲವಾದಿ ನಾರಾಯಣಸ್ವಾಮಿ, ನಿವೃತ್ತ ನ್ಯಾಯಾಧೀಶ ನಾಗಮೋಹನ್ ದಾಸ್, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link