ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಮಾರು ಎರಡು ತಿಂಗಳ ನಂತರ ರಾಜ್ಯದಲ್ಲಿ ಸೋಮವಾರ ಸಚಿವ ಸಂಪುಟ ವಿಸ್ತರಣೆ ನಡೆಯಿತು. ಬೆಂಗಳೂರು: ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಮಾರು ಎರಡು ತಿಂಗಳ ನಂತರ ರಾಜ್ಯದಲ್ಲಿ ಸೋಮವಾರ ಸಚಿವ ಸಂಪುಟ ವಿಸ್ತರಣೆ ನಡೆಯಿತು. ಬೆಂಗಳೂರಿನ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ 19 ಮಂದಿ ನೂತನ ಸಚಿವರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು. ಪಿ ಎಂ ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ, ರುದ್ರಪ್ಪ ಲಮಾಣಿ, ಕೆ ಎಸ್ ಬಸವಂತಪ್ಪ, ಬಿ ನಾಗೇಂದ್ರ, ಟಿ ರಘುಮೂರ್ತಿ, ಬಿ ಝಡ್ ಜಮೀರ್ ಅಹಮದ್ ಖಾನ್, ರಿಜ್ವಾನ್ ಅರ್ಷದ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ಪುಟ್ಟುರಂಗಶೆಟ್ಟಿ, ಮಂಕಾಳ ವೈದ್ಯ, ಅಜಯ್ ಸಿಂಗ್, ಎನ್ ಚಲುವರಾಯಸ್ವಾಮಿ, ಬಸವರಾಜ ರಾಯರೆಡ್ಡಿ, ವಿಜಯಾನಂದ ಕಾಶಪ್ಪನವರ್ ಮತ್ತು ಲಕ್ಷ್ಮಣ ಸವದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಗಾಯಿತ್ರಿ ಶಾಂತಗೌಡ ಅವರ ಹೆಸರು ಪಟ್ಟಿಯಲ್ಲಿತ್ತು. ಆದರೆ, ಕೊನೆ ಕ್ಷಣದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಲಿಲ್ಲ. ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರ📍ಲೋಕಭವನ, ಬೆಂಗಳೂರುhttps://t.co/Ce3bDP3IRt— CM of Karnataka (@CMofKarnataka) August 3, 2026 ಇದರೊಂದಿಗೆ ಮುಖ್ಯಮಂತ್ರಿ ಸೇರಿದಂತೆ 34 ಮಂತ್ರಿಗಳ ಸಂಪೂರ್ಣ ಕ್ಯಾಬಿನೆಟ್ ರಚನೆಯಾಗಿದೆ. #Karnataka Cabinet Expansion #Ajay Singh #HC Balakrishna #sworn in as ministers #ರಾಜ್ಯಸಚಿವಸಂಪುಟ ವಿಸ್ತರಣೆ#ಅಜಯ್ ಸಿಂಗ್ #ಹೆಚ್ ಸಿಬಾಲಕೃಷ್ಣ#ಸಚಿವರಾಗಿ ಪದಗ್ರಹಣ Share via: Facebook X (Twitter) LinkedIn More Post navigation ಸೌಹಾರ್ದಯುತವಾಗಿ ಕಾವೇರಿ ನೀರು ಹಂಚಿಕೆಯ ಸಮಸ್ಯೆ ಬಗೆ ಹರಿಸಲು ಆದ್ಯತೆ, ರಾಜ್ಯದ ಜನರ ಹಿತಾಸಕ್ತಿ ರಕ್ಷಣೆಗೆ ಸರ್ಕಾರ ಬದ್ಧ – ಮುಖ್ಯಮಂತ್ರಿ ಬೆಂಗಳೂರು ದಕ್ಷಿಣಜಿಲ್ಲೆ: ಮಾಗಡಿ ಶಾಸಕ ಹೆಚ್. ಸಿ. ಬಾಲಕೃಷ್ಣಗೆ ಒಲಿದ ಸಚಿವ ಸ್ಥಾನ!