ಮಾಗಡಿ ಕ್ಷೇತ್ರದ ಶಾಸಕ ಹೆಚ್. ಸಿ. ಬಾಲಕೃಷ್ಣ ಇದೇ ಮೊದಲ ಬಾರಿಗೆ ಸಚಿವರಾಗಿದ್ದಾರೆ.ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಮನಗರ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತರಾದ ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ಶಾಸಕ ಹೆಚ್. ಸಿ. ಬಾಲಕೃಷ್ಣ ಅವರ ಬಹು ದಿನಗಳ ಸಚಿನ ಸ್ಥಾನದ ಕನಸು ಕೊನೆಗೂ ನನಸು ಆಗಿದೆ. ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಗೆ ಮುಖ್ಯಮಂತ್ರಿ ಸ್ಥಾನದ ಜೊತೆಗೆ ನಾಡಪ್ರಭು, ಬೆಂಗಳೂರು ನಿರ್ಮಾತೃ ಕೆಂಪೇಗೌಡರ ತವರೂರು ಮಾಗಡಿ ಕ್ಷೇತ್ರದ ಶಾಸಕ ಹೆಚ್. ಸಿ. ಬಾಲಕೃಷ್ಣ ಇದೇ ಮೊದಲ ಬಾರಿಗೆ ಸಚಿವರಾಗಿದ್ದಾರೆ.ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನಾ, ಬಾಲಕೃಷ್ಣ ಹೆಸರಿರುವ ಕಾಂಗ್ರೆಸ್ ಹೈಕಮಾಂಡ್ ಅಂಕಿತದ ಪಟ್ಟಿ ಹೊರಬೀಳುತ್ತಿದ್ದಂತೆಯೇ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಾಲಕೃಷ್ಣ ಅಭಿಮಾನಿಗಳು ಸಂಭ್ರಮ ಪಟ್ಟಿದ್ದು, ಬಾಲಕೃಷ್ಣ ಅವರು ವಿಡಿಯೋ ಮೂಲಕ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಗೆದ್ದು ರಾಜಕೀಯ ಆರಂಭಿಸಿದ ಬಾಲಕೃಷ್ಣ ಅವರು ನಂತರ ಜೆಡಿಎಸ್ ನಲ್ಲಿ ಗೆದ್ದು ಮೂರು ಸಲ ಶಾಸಕರಾಗಿದ್ದರು. 2018ರಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಅವರು, ಆ ವರ್ಷದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎ. ಮಂಜುನಾಥ್ ವಿರುದ್ಧ ಸೋತಿದ್ದರು. ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರ📍ಲೋಕಭವನ, ಬೆಂಗಳೂರುhttps://t.co/Ce3bDP3IRt— CM of Karnataka (@CMofKarnataka) August 3, 2026 ನಂತರ 2023ರ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆದ್ದಿದ್ದರು. ಆದರೆ ಡಿಕೆ ಶಿವಕುಮಾರ್ ಅವರ ಬಣದಲ್ಲಿ ಗುರುತಿಸಿಕೊಂಡಿದ್ದರಿಂದ ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಸಚಿವ ಸ್ಥಾನದಿಂದ ವಂಚಿತರಾಗಿದ್ದರು.ಈಗ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. #Karnataka #Cabinet Expansion #HC Balakrishna #sworn in as ministers #ಕರ್ನಾಟಕ #ಸಂಪುಟವಿಸ್ತರಣೆ #ಹೆಚ್ ಸಿಬಾಲಕೃಷ್ಣ#ಸಚಿವರಾಗಿಪ್ರಮಾಣ ವಚನ ಸ್ವೀಕಾರ Share via: Facebook X (Twitter) LinkedIn More Post navigation ರಾಜ್ಯ ಸಚಿವ ಸಂಪುಟ ವಿಸ್ತರಣೆ: ಅಜಯ್ ಸಿಂಗ್, ಹೆಚ್. ಸಿ. ಬಾಲಕೃಷ್ಣ, ಎಸ್.ಎಸ್. ಮಲ್ಲಿಕಾರ್ಜುನ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ! ಕೃಷಿ ಅಧಿಕಾರಿ ನೇಮಕಾತಿ ನಿಯಮಗಳ ಗೊಂದಲ: GKVK ವಿದ್ಯಾರ್ಥಿಗಳನ್ನು ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್!