ಡಮ್ಮಿ ಸಿಎಂ ಡಿಕೆ ಶಿವಕುಮಾರ್ ಅವರೇ,ಪೇಮೆಂಟ್ ಕೋಟಾ ಸಚಿವರಿಗೆ ಖಾತೆ ಹಂಚಲು ಹೈಕಮಾಂಡ್ ಅನುಮತಿಗಾಗಿ ಕಾಯುತ್ತಿದ್ದೀರೋ ಅಥವಾ ನಿಗದಿಯಾದ ಪೇಮೆಂಟ್ ಇನ್ನೂ ‘ಖಾತೆ’ಗೆ (Account) ಜಮಾ ಆಗಿಲ್ಲವೆಂದು ತಡೆ ಹಿಡಿದಿದ್ದೀರೋ? ಎಂದು ಕಿಡಿಕಾರಿದ್ದಾರೆ. ಬೆಂಗಳೂರು: ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಮುಗಿದು ಮೂರು ದಿನಗಳೇ ಕಳೆದಿವೆ… ಆದರೆ ‘ಖಾತೆ’ಗಳ ಸುಳಿವೇ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಡಮ್ಮಿ ಸಿಎಂ @DKShivakumar ಅವರೇ,ಪೇಮೆಂಟ್ ಕೋಟಾ ಸಚಿವರಿಗೆ ಖಾತೆ ಹಂಚಲು ಹೈಕಮಾಂಡ್ ಅನುಮತಿಗಾಗಿ ಕಾಯುತ್ತಿದ್ದೀರೋ ಅಥವಾ ನಿಗದಿಯಾದ ಪೇಮೆಂಟ್ ಇನ್ನೂ ‘ಖಾತೆ’ಗೆ (Account) ಜಮಾ ಆಗಿಲ್ಲವೆಂದು ತಡೆ ಹಿಡಿದಿದ್ದೀರೋ? ಎಂದು ಕಿಡಿಕಾರಿದ್ದಾರೆ. ಇತ್ತ ದೆಹಲಿಯ ‘ಕಲೆಕ್ಷನ್ ಏಜೆಂಟ್’ ರಣದೀಪ್ ಸುರ್ಜೇವಾಲಾ ಸಾಹೇಬರು, ಅಸಮಾಧಾನಗೊಂಡ ಶಾಸಕರ ಮನೆ ಮನೆಗೆ ತೆರಳಿ ತೇಪೆ ಹಚ್ಚುವುದರಲ್ಲಿ ಹಾಗೂ ಕುಸಿಯುತ್ತಿರುವ ಸರ್ಕಾರಕ್ಕೆ ‘ಪ್ಯಾಚ್ ವರ್ಕ್’ ಹಾಕುವುದರಲ್ಲೇ ಬ್ಯುಸಿಯಾಗಿದ್ದಾರೆ. ಅಂದಹಾಗೆ, ಇನ್ನುಮುಂದೆ ಪ್ರತಿಯೊಂದು ಕಡತಕ್ಕೂ ಸಹಿ ಹಾಕಲು ಸುರ್ಜೇವಾಲಾ ಅವರೇ ಬೆಂಗಳೂರಿಗೆ ಬರಬೇಕಾ? ವಿಧಾನಸೌಧದಲ್ಲಿ ಅವರಿಗೆ ಒಂದು ಕೊಠಡಿ ಮೀಸಲಿಟ್ಟಿದ್ದೀರಾ? ಎಂದು ಪ್ರಶ್ನಿಸಿದ್ದಾರೆ. ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಮುಗಿದು ಮೂರು ದಿನಗಳೇ ಕಳೆದಿವೆ… ಆದರೆ 'ಖಾತೆ'ಗಳ ಸುಳಿವೇ ಇಲ್ಲ!ಡಮ್ಮಿ ಸಿಎಂ @DKShivakumar ಅವರೇ,ಪೇಮೆಂಟ್ ಕೋಟಾ ಸಚಿವರಿಗೆ ಖಾತೆ ಹಂಚಲು ಹೈಕಮಾಂಡ್ ಅನುಮತಿಗಾಗಿ ಕಾಯುತ್ತಿದ್ದೀರೋ ಅಥವಾ ನಿಗದಿಯಾದ ಪೇಮೆಂಟ್ ಇನ್ನೂ 'ಖಾತೆ'ಗೆ (Account) ಜಮಾ ಆಗಿಲ್ಲವೆಂದು ತಡೆ ಹಿಡಿದಿದ್ದೀರೋ?ಇತ್ತ… pic.twitter.com/MqU01FZUXW— R. Ashoka (@RAshokaBJP) August 6, 2026 ಅಥವಾ ಎಲ್ಲಾ ಫೈಲ್ಗಳನ್ನ ದೆಹಲಿಗೆ ಸ್ಪೀಡ್ ಪೋಸ್ಟ್ನಲ್ಲಿ ಕಳುಹಿಸಿಕೊಡುವ ವ್ಯವಸ್ಥೆ ಮಾಡಿದ್ದೀರಾ ‘ರಬ್ಬರ್ ಸ್ಟ್ಯಾಂಪ್’ ಮುಖ್ಯಮಂತ್ರಿಗಳೇ? ರಾಜ್ಯದಲ್ಲಿ ನಿಜವಾದ ಸರ್ಕಾರ ನಡೀತಾ ಇದೆಯೋ ಅಥವಾ ದೆಹಲಿಯ ಹೈಕಮಾಂಡ್ನ ‘ರಿಮೋಟ್ ಕಂಟ್ರೋಲ್’ ಹೈಜಾಕ್ ನಾಟಕ ನಡೀತಾ ಇದೆಯೋ ಜನತೆಗಂತೂ ಸ್ಪಷ್ಟವಾಗಿ ಅರ್ಥವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. #Bengaluru #cmdkshivakumar #rashok #ಬೆಂಗಳೂರು#ಸಿಎಂಡಿಕೆ ಶಿವಕುಮಾರ್ #ಆರ್ ಅಶೋಕ್ Share via: Facebook X (Twitter) LinkedIn More Post navigation ಕೃಷಿ ಅಧಿಕಾರಿ ನೇಮಕಾತಿ ನಿಯಮಗಳ ಗೊಂದಲ: GKVK ವಿದ್ಯಾರ್ಥಿಗಳನ್ನು ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್! ಬಿಡದಿ ಟೌನ್ಶಿಪ್ ಯೋಜನೆ ವಿರುದ್ಧ ಬಿಜೆಪಿ-ಜೆಡಿಎಸ್ ಒಂದಾಗಿ ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ್!