ಮಾಜಿ ಸಚಿವ ಬಿ.ಸಿ. ನಾಗೇಶ್ ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯಕ್ಕೆ ತುತ್ತಾಗಿ ಬೆಂಗಳೂರಿನ ತಮ್ಮ ಪುತ್ರಿ ನಿವಾಸದಲ್ಲೇ ಇದ್ದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದು, ಪತ್ನಿ ವೀಣಾ ನಾಗೇಶ್, ಪುತ್ರ ವಿಶ್ವದೀಪ್ ಹಾಗೂ ಪುತ್ರಿ ಶಾರದಾ ಸೇರಿದಂತೆ ಅಪಾರ ಬಂಧು ಬಳಗ, ಕಾರ್ಯಕರ್ತರನ್ನು ಅಗಲಿದ್ದಾರೆ. ಬೆಂಗಳೂರು: ಅನಾರೋಗ್ಯದಿಂದ ಬೆಂಗಳೂರಿನ ಜಯನಗರದಲ್ಲಿರುವ ಪುತ್ರಿ ನಿವಾಸದಲ್ಲಿ ಮಂಗಳವಾರ ರಾತ್ರಿ ನಿಧನರಾದ ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವರಾದ ಬಿ.ಸಿ. ನಾಗೇಶ್ ಅವರ ಅಂತ್ಯಕ್ರಿಯೆ ತಿಪಟೂರಿನಲ್ಲಿ ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಮಾಜಿ ಸಚಿವ ಬಿ.ಸಿ. ನಾಗೇಶ್ ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯಕ್ಕೆ ತುತ್ತಾಗಿ ಬೆಂಗಳೂರಿನ ತಮ್ಮ ಪುತ್ರಿ ನಿವಾಸದಲ್ಲೇ ಇದ್ದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದು, ಪತ್ನಿ ವೀಣಾ ನಾಗೇಶ್, ಪುತ್ರ ವಿಶ್ವದೀಪ್ ಹಾಗೂ ಪುತ್ರಿ ಶಾರದಾ ಸೇರಿದಂತೆ ಅಪಾರ ಬಂಧು ಬಳಗ, ಕಾರ್ಯಕರ್ತರನ್ನು ಅಗಲಿದ್ದಾರೆ. ತಿಪಟೂರಿನ ಕೆ.ಆರ್.ಬಡಾವಣೆಯಲ್ಲಿರುವ ಅವರ ನಿವಾಸದಲ್ಲಿ ಮಧ್ಯಾಹ್ನ ಪಾರ್ಥಿವ ಶರೀರದ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು ಇದಕ್ಕೂ ಮುನ್ನ ಇಂದು ಬೆಳಿಗ್ಗೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಬಿ.ಸಿ. ನಾಗೇಶ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.ಈ ವೇಳೆ ಕಚೇರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ,ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ,ಶೋಭಾ ಕರದ್ಲಾಂಜೆ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ,ಬಿ.ಸಿ ನಾಗೇಶ್ ಹಲವು ವರ್ಷಗಳಿಂದ ನನಗೆ ಪರಿಚಿತರು.ಶಿಕ್ಷಣ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದ ಒಬ್ಬ ಪ್ರಾಮಾಣಿಕ ವ್ಯಕ್ತಿಯಾಗಿದ್ದರು.ಶಿಕ್ಷಣ ಕ್ಷೇತ್ರದಲ್ಲಿ ಶಿಸ್ತನ್ನು ತರಲು ದೊಡ್ಡ ಪ್ರಯತ್ನ ಮಾಡಿದ್ದರು. ಅವರಿಗೆ ಎಲ್ಲಾ ರೀತಿಯ ಸರ್ಕಾರಿ ಗೌರವಗಳನ್ನು ಒದಗಿಸುತ್ತೇವೆ. ನೊಣವಿನಕೆರೆ ಮಠದ ಎಲ್ಲಾ ಕಾರ್ಯಕ್ರಮಗಳಲ್ಲೂ ನನ್ನೊಂದಿಗೆ ಪಾಲ್ಗೊಂಡು, ನಮಗೆ ಸಹಕರಿಸಿದ್ದರು ಎಂದರು. ಎಂಎಲ್‌ಸಿ ಸಿ.ಟಿ ರವಿ ಕೂಡ ಮಾತನಾಡಿ,ಬಿ.ಸಿ. ನಾಗೇಶ್ ಅವರು ಮೃದು ಹೃದಯದ ವ್ಯಕ್ತಿ. ರಾಜಕೀಯ ಮೀರಿ ಜನಪ್ರೀತಿ ಸಂಪಾದಿಸಿದ್ದರು. ಒಬ್ಬ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದೇವೆ.ಶಾಸಕರಾಗುವ ಮುನ್ನವೇ ಎಬಿವಿಪಿಯಲ್ಲಿ ಸೇವೆ ಸಲ್ಲಿಸಿದ್ದ ನಾಗೇಶ್, ಕೊನೆಯವರೆಗೂ ಪಕ್ಷ ಹಾಗೂ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ,ನಾಗೇಶ್ ಸರಳ, ಸಜ್ಜನ ಜೆಂಟಲ್‌ಮ್ಯಾನ್ ಇನ್ ಪಾಲಿಟಿಕ್ಸ್ ಎಂದು ಬಣ್ಣಿಸಿದ್ದಾರೆ. ತಿಪಟೂರು ಕ್ಷೇತ್ರದ ಅಭಿವೃದ್ಧಿಗೆ ನಾಗೇಶ್ ಸಾಕಷ್ಟು ಶ್ರಮಿಸಿದ್ದರು. ನೀರಾವರಿ ಯೋಜನೆಗಳಿಗಾಗಿ ಹೆಚ್ಚಿನ ಕೆಲಸ ಮಾಡಿಸಿದ್ದರು. ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಶಿಕ್ಷಣ ಸಚಿವರಾಗಿ ಹೊಸ ಶಿಕ್ಷಣ ನೀತಿ ಜಾರಿಗೆ ತರಲು ಶ್ರಮಿಸಿದ್ದರು. ಒಬ್ಬ ಗೆಳೆಯನನ್ನು ಕಳೆದುಕೊಂಡಿದ್ದೇವೆ. ಬಿಜೆಪಿಗೆ, ರಾಜ್ಯಕ್ಕೆ ಹಾಗೂ ವೈಯಕ್ತಿಕವಾಗಿ ಇದು ನೋವಿನ ಸಂಗತಿ ಎಂದು ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಮಾಜಿ ಸಚಿವರು ಹಾಗೂ ತಿಪಟೂರು ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರು, ಸರಳ ಸಜ್ಜನ ರಾಜಕಾರಣಿ ಶ್ರೀ ಬಿ.ಸಿ ನಾಗೇಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಲಾಯಿತು. ಶ್ರೀ ಬಿ.ಸಿ ನಾಗೇಶ್ ಅವರು ಹಲವು ವರ್ಷಗಳಿಂದ ನನಗೆ ಪರಿಚಿತರು. ಶಿಕ್ಷಣ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದ ಒಬ್ಬ ಪ್ರಾಮಾಣಿಕ… pic.twitter.com/PvsiyaQ45R— DK Shivakumar (@DKShivakumar) August 19, 2026 ಎಬಿವಿಪಿಯಲ್ಲಿ ವಿದ್ಯಾರ್ಥಿ ಮುಖಂಡರಾಗಿ ಮತ್ತು ಆರ್‌ಎಸ್‌ಎಸ್ ಕಟ್ಟಾಳು ಆಗಿದ್ದ ಬಿ.ಸಿ. ನಾಗೇಶ್ ಅವರು ಇಂಜಿನಿಯರಿಂಗ್ ಪದವೀಧರರಾಗಿದ್ದರು. 1948 ರಲ್ಲಿ ಭಾರತೀಯ ಜನತಾ ಪಾರ್ಟಿ ಸೇರ್ಪಡೆಯಾಗಿ ಅಂದಿನಿಂದ ಪಕ್ಷದ ಸಂಘಟನೆಗೆ ಒತ್ತು ನೀಡಿದ್ದರು. 1984 ರಲ್ಲಿ ಬಿಜೆಪಿ ಪಕ್ಷ ಸೇರಿದ್ದರೂ ಸಹ 2004 ವರೆಗೂ ವಿಧಾನಸಭಾ ಚುನಾವಣೆಗೆ ಬಿ.ಸಿ. ನಾಗೇಶ್ ಅವರು ಸ್ಪರ್ಧೆಸಿರಲಿಲ್ಲ. ಅಲ್ಲಿಯವರೆಗೂ ಪಕ್ಷ ಸಂಘಟನೆ ಕಾರ್ಯದಲ್ಲಿ ತೊಡಗಿಕೊಂಡಿದ್ದರು. 2004 ರಲ್ಲಿ ಪ್ರಥಮ ಬಾರಿಗೆ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದಾದ ಬಳಿಕ ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸಿ ಸೋಲನುಭವಿಸಿದ್ದರು. 2008ರಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ 2018ರಲ್ಲೂ ಸಹ ಶಾಸಕರಾಗಿ ಆಯ್ಕೆಯಾಗಿದ್ದ ಬಿ.ಸಿ. ನಾಗೇಶ್ ಅವರು ಬಸವರಾಜ ಬೊಮ್ಮಾಯಿ ಅವರ ಸರ್ಕಾರದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇವರ ತಂದೆ ಬಿ.ಹೆಚ್. ಚಂದ್ರಶೇಖರಯ್ಯ ಅವರು ಸಹ ಶಾಸಕರಾಗಿ ಕಾರ್ಯನಿರ್ವಹಿಸಿದ್ದನ್ನು ಸ್ಮರಿಸಬಹುದಾಗಿದೆ. #Bengaluru #formerministerbc Nagesh #Demise #dignitaries condolence #ಬೆಂಗಳೂರು#ಮಾಜಿ ಸಚಿವ ಬಿಸಿ ನಾಗೇಶ್ #ನಿಧನ #ಗಣ್ಯರ ಸಂತಾಪ Share via: Facebook X (Twitter) LinkedIn More Post navigation ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ: KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ, ಕಚೇರಿ ಮೇಲೆ ಇಡಿ ದಾಳಿ! ಬಾಗಲಕೋಟೆ ಬಳಿ ಭೀಕರ ರಸ್ತೆ ಅಪಘಾತ: ಬೈಕ್ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, ಸ್ಥಳದಲ್ಲೇ ಇಬ್ಬರು ಸಾವು!