ಪ್ರವಾಹದ ಸಾಂದರ್ಭಿಕ ಚಿತ್ರ


ನೇಪಾಳದ ತ್ರಿಶೂಲಿ ನದಿಯಲ್ಲಿ ಹೆಚ್ಚಾದ ನೀರಿನ ಹರಿವು ಕೆಳಭಾಗಕ್ಕೆ ಹರಿದು ನಾರಾಯಣಿ ನದಿಯ ಮೂಲಕ ಗಂಡಕ್ ನದಿಯನ್ನು ಸೇರುತ್ತಿದ್ದು, ಇದರ ಪರಿಣಾಮ ವಾಲ್ಮೀಕಿನಗರ ಗಂಡಕ್ ಬ್ಯಾರೇಜ್‌ನಿಂದ ಹೊರಬಿಡಲಾಗುತ್ತಿರುವ ನೀರಿನ ಪ್ರಮಾಣದಲ್ಲಿ ತೀವ್ರ ಏರಿಕೆಯಾಗಿದೆ.

ಲಖನೌ: ಭೀಕರ ಪ್ರವಾಹದಿಂದ ನಲುಗಿದ್ದ ನೇಪಾಳದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯಲ್ಲಿ ಪ್ರವಾಹದ ಭೀತಿ  ಹೆಚ್ಚಾಗಿದೆ. ನೇಪಾಳದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶದ ನಾರಾಯಣಿ-ಗಂಡಕ್ ನದಿಯಲ್ಲಿ ನೀರಿನ ಮಟ್ಟ ನಿರಂತರವಾಗಿ ಏರುತ್ತಿದ್ದು, ನದಿಪಾತ್ರದ ಗ್ರಾಮಗಳ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ನೇಪಾಳದ ತ್ರಿಶೂಲಿ ನದಿಯಲ್ಲಿ ಹೆಚ್ಚಾದ ನೀರಿನ ಹರಿವು ಕೆಳಭಾಗಕ್ಕೆ ಹರಿದು ನಾರಾಯಣಿ ನದಿಯ ಮೂಲಕ ಗಂಡಕ್ ನದಿಯನ್ನು ಸೇರುತ್ತಿದ್ದು, ಇದರ ಪರಿಣಾಮ ವಾಲ್ಮೀಕಿನಗರ ಗಂಡಕ್ ಬ್ಯಾರೇಜ್‌ನಿಂದ ಹೊರಬಿಡಲಾಗುತ್ತಿರುವ ನೀರಿನ ಪ್ರಮಾಣದಲ್ಲಿ ತೀವ್ರ ಏರಿಕೆಯಾಗಿದೆ.

12 ಗಂಟೆಗಳಲ್ಲಿ50 ಸಾವಿರ ಕ್ಯೂಸೆಕ್ ನೀರು ಸಂಗ್ರಹ

ಅಧಿಕಾರಿಗಳ ಪ್ರಕಾರ, ಶನಿವಾರ ಸಂಜೆ 6 ಗಂಟೆಗೆ ಬ್ಯಾರೇಜ್‌ನಲ್ಲಿ 99,800 ಕ್ಯೂಸೆಕ್ ನೀರಿನ ಹರಿವು ದಾಖಲಾಗಿತ್ತು. ಭಾನುವಾರ ಬೆಳಗ್ಗೆ 10 ಗಂಟೆಗೆ ಇದು 1,25,000 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಮಧ್ಯಾಹ್ನ 1 ಗಂಟೆ ವೇಳೆಗೆ ನೀರಿನ ಹರಿವು ಮತ್ತಷ್ಟು ಹೆಚ್ಚಾಗಿ 1,47,500 ಕ್ಯೂಸೆಕ್‌ಗೆ ತಲುಪಿದೆ.

ನೀರಿನ ಹರಿವು ಹೆಚ್ಚಾಗುತ್ತಿದ್ದಂತೆ ನದಿಯ ದಡಗಳ ಮೇಲಿನ ಒತ್ತಡವೂ ಹೆಚ್ಚಾಗಿದೆ. ನಿಚ್ಲೌಲ್‌ ತಹಸಿಲ್‌ನ ಪಥಲ್ಹವಾ ಮತ್ತು ತೆಲ್ಪಾಲ್‌ ಪ್ರದೇಶಗಳ ಸಮೀಪ ನಾರಾಯಣಿ-ಗಂಡಕ್ ನದಿ ಉಕ್ಕಿ ಹರಿಯುತ್ತಿದೆ. ನದಿಯಂಚಿನ ಗ್ರಾಮಗಳ ನಿವಾಸಿಗಳು ನೀರಿನ ಮಟ್ಟ ವೇಗವಾಗಿ ಏರುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಇದರ ನಡುವೆ ಸೋಹ್ಗಿಬರ್ವಾ ಪ್ರದೇಶದ ರೋಹುವಾ ಚರಂಡಿಯೂ ಉಕ್ಕಿ ಹರಿಯುತ್ತಿದ್ದು, ಭೋಥಹಾ ಜನವಸತಿ ಪ್ರದೇಶದತ್ತ ನೀರಿನ ಒತ್ತಡ ಹೆಚ್ಚಾಗಿದೆ. ಇದರಿಂದ ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಅಪಾಯ ಮತ್ತಷ್ಟು ಹೆಚ್ಚಾಗಿದೆ.

#Nepalheavyrain #Uttar Pradesh #Floods #Narayani gander rises #ನೇಪಾಳ ಭಾರಿ ಮಳೆ#ಉತ್ತರಪ್ರದೇಶ#ಮಳೆ #ನಾರಾಯಣಿ ಗಂಡಕ್ ನದಿ

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link