ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ಉಳಿದಿಬ್ಬರು ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ತೀವ್ರ ಆಕ್ಷೇಪ ಎತ್ತಿದ್ದಾರೆ ಎಂದು ವರದಿಯಾಗಿದೆ.

ನವದೆಹಲಿ: ದೇಶಾದ್ಯಂತ ಜಾರಿಯಲ್ಲಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR), ಕೇಂದ್ರೀಕೃತ ಐಟಿ ನಿಯಂತ್ರಣ ಸೇರಿದಂತೆ ಹಲವು ವಿಷಯಗಳಲ್ಲಿ ಭಾರತದ ಚುನಾವಣಾ ಆಯೋಗದಲ್ಲಿ (ECI) ಮುಖ್ಯಸ್ಥರು ಹಾಗೂ ಸದಸ್ಯರ ನಡುವೆ ಆಂತರಿಕ ಭಿನ್ನಾಭಿಪ್ರಾಯ ಮತ್ತು ಅಸಮಾಧಾನ ತಲೆದೋರಿದೆ ಎನ್ನಲಾಗಿದೆ. 

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ಉಳಿದಿಬ್ಬರು ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ತೀವ್ರ ಆಕ್ಷೇಪ ಎತ್ತಿದ್ದಾರೆ ಎಂದು ವರದಿಯಾಗಿದೆ.

ಅಸಮಾಧಾನಕ್ಕೆಮುಖ್ಯಕಾರಣಗಳೇನು?

ಮತದಾರರ ಪಟ್ಟಿ ಪರಿಷ್ಕರಣೆ (SIR): ದೇಶಾದ್ಯಂತ ಜಾರಿಯಲ್ಲಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ, ತಮ್ಮ ಗಮನಕ್ಕೆ ತರದೆ ಮತ್ತು ನಿಯಮಗಳನ್ನು ಉಲ್ಲಂಘಿಸಿ ಲಕ್ಷಾಂತರ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಹಾಗೂ ಸೇರಿಸಲಾಗಿದೆ ಎಂದು ಇಬ್ಬರು ಆಯುಕ್ತರು ಲಿಖಿತ ದೂರು ನೀಡಿದ್ದಾರೆ.

 ಕಳೆದ 10 ತಿಂಗಳುಗಳಲ್ಲಿ ಜ್ಞಾನೇಶ್ ಕುಮಾರ್ ಅವರ ವಿವಿಧ ನಿರ್ಧಾರಗಳ ವಿರುದ್ಧ ಸುಖ್‌ಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ ಅವರು ಬರೋಬ್ಬರಿ 14 ಬಾರಿ ತಮ್ಮ ಲಿಖಿತ ಅಸಮ್ಮತಿಯನ್ನು ದಾಖಲಿಸಿದ್ದಾರೆ.

ಕೇಂದ್ರೀಕೃತ ಐಟಿ ನಿಯಂತ್ರಣ (ERONet): ಮತದಾರರ ದತ್ತಾಂಶ ನಿರ್ವಹಣೆಯ ತಂತ್ರಜ್ಞಾನ ವ್ಯವಸ್ಥೆಯನ್ನು ದೆಹಲಿಯಿಂದಲೇ ಕೇಂದ್ರೀಕೃತವಾಗಿ ನಿಯಂತ್ರಿಸುತ್ತಿರುವುದಕ್ಕೆ ಮತ್ತು ಸ್ಥಳೀಯ ಚುನಾವಣಾ ನೋಂದಣಿ ಅಧಿಕಾರಿಗಳ ಅಧಿಕಾರವನ್ನು ಕಡಿತಗೊಳಿಸಿರುವುದಕ್ಕೆ ಆಯುಕ್ತರು ಆಕ್ಷೇಪ ವ್ಯಕ್ತಪಡಿಸಿ, ಕ್ಯಾಬಿನೆಟ್ ಕಾರ್ಯದರ್ಶಿಗೂ ಪತ್ರ ಬರೆದಿದ್ದಾರೆ.

ಪಶ್ಚಿಮ ಬಂಗಾಳದ ಪ್ರಕರಣ: ಪಶ್ಚಿಮ ಬಂಗಾಳದಲ್ಲಿ ಮತದಾರರ ಹೆಸರು ಕೈಬಿಟ್ಟಿರುವುದರ ವಿರುದ್ಧ ನ್ಯಾಯಾಧಿಕರಣಕ್ಕೆ ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆಯನ್ನು ತಮ್ಮ ಗಮನಕ್ಕೆ ತರದೆ ನಡೆಸಲಾಗಿದೆ ಎಂದು ಆಯುಕ್ತರು ಪ್ರಶ್ನಿಸಿದ್ದಾರೆ.

  • ಆಯೋಗದಲ್ಲಿಯಾವುದೇಭಿನ್ನಾಭಿಪ್ರಾಯಇಲ್ಲ

ಈ ವರದಿಗಳ ಬೆನ್ನಲ್ಲೇ  ದೇಶಾದ್ಯಂತ ನಡೆದ ಎಸ್‌ಐಆರ್ ಪ್ರಕ್ರಿಯೆ ಸೇರಿದಂತೆ ಚುನಾವಣಾ ಸಮಿತಿ ತೆಗೆದುಕೊಂಡ ಎಲ್ಲಾ ನಿರ್ಧಾರಗಳು ಸಂಪೂರ್ಣವಾಗಿ ಸರ್ವಾನುಮತದಿಂದ ಕೂಡಿವೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಇಬ್ಬರೂ ಚುನಾವಣಾ ಆಯುಕ್ತರ ಪೂರ್ಣ ಅನುಮೋದನೆಯನ್ನು ಹೊಂದಿವೆ ಎಂದು ಚುನಾವಣಾ ಆಯೋಗದ ಉನ್ನತ ಮೂಲಗಳು ಸ್ಪಷ್ಟನೆ ತಿಳಿಸಿವೆ.

ಈ ವಿಚಾರ ಮುನ್ನೆಲೆಗೆ ಬರುತ್ತಿದ್ದಂತೆ ವಿಪಕ್ಷಗಳು ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ನೇರವಾಗಿ ಪ್ರಶ್ನಿಸಿವೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಕಾಂಗ್ರೆಸ್ ಸಂಸದರಾದ ಮನೀಶ್ ತಿವಾರಿ ಮತ್ತು ಜೈರಾಮ್ ರಮೇಶ್, ಆಮ್ ಆದ್ಮಿ ಪಕ್ಷದ ಸೌರಭ್ ಭಾರದ್ವಾಜ್ ಹಾಗೂ ಶಿವಸೇನಾ ಉದ್ಧವ್ ಬಣದ ಸಂಜಯ್ ರಾವತ್ ಸೇರಿದಂತೆ ಪ್ರಮುಖ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಆಯೋಗದ ನಿಷ್ಪಕ್ಷಪಾತ ನಡವಳಿಕೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿರುವ ನಾಯಕರು, ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಜೊತೆಗೆ, ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಕಾಪಾಡಲು ಸುಪ್ರೀಂ ಕೋರ್ಟ್ ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.


#ECI #internal disquiet #Report #opposition #ಚುನಾವಣಾಆಯೋಗ # ಆಂತರಿಕಬಿಕ್ಕಟ್ಟು #ವರದಿ#ಪ

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link