ರಾಹುಲ್ ಗಾಂಧಿ


‘ವೋಟ್ ಚೋರಿ’ (ಮತಗಳ ಕಳ್ಳತನ) ಭಾರತದ ಜನರ ವಿರುದ್ಧದ ಅಪರಾಧ ಹಾಗೂ ಸಂವಿಧಾನದ ಮೇಲಿನ ನೇರ ದಾಳಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

ನವದೆಹಲಿ: ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಆಯೋಗದೊಳಗೆ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳ  ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಿಡಿದೆದಿದ್ದಾರೆ.

‘ವೋಟ್ ಚೋರಿ’ (ಮತಗಳ ಕಳ್ಳತನ) ಭಾರತದ ಜನರ ವಿರುದ್ಧದ ಅಪರಾಧ ಹಾಗೂ ಸಂವಿಧಾನದ ಮೇಲಿನ ನೇರ ದಾಳಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ‘ಬಿಜೆಪಿ, ಆರ್‌ಎಸ್‌ಎಸ್ ಮತ್ತು ಚುನಾವಣಾ ಆಯೋಗವು ಇದರಲ್ಲಿ ಭಾಗಿಯಾಗಿದ್ದು, ‘ದೇಶದ್ರೋಹ’ ಎಸಗಿವೆ ಎಂದಿದ್ದಾರೆ.

 ವೋಟ್ ಚೋರಿ ಭಾರತೀಯ ಜನರ ವಿರುದ್ಧದ ಅಪರಾಧ ಮತ್ತು ನಮ್ಮ ಸಂವಿಧಾನದ ಮೇಲಿನ ನೇರ ದಾಳಿ. ಇದನ್ನು ಸಂಘಟಿಸಿದ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಚುನಾವಣಾ ಆಯೋಗ ದೇಶದ್ರೋಹದ ಕೃತ್ಯ ಎಸಗಿವೆ. ಆದರೆ ಇವೆಲ್ಲದಕ್ಕೂ ನ್ಯಾಯ ಸಿಗಲಿದೆ” ಎಂದು ಹೇಳಿದ್ದಾರೆ.

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಆಯೋಗದೊಳಗೇ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳ ಬೆನ್ನಲ್ಲೇ ರಾಹುಲ್ ಗಾಂಧಿ ಈ ಆರೋಪ ಮಾಡಿದ್ದಾರೆ.

ವರದಿಗಳ ಪ್ರಕಾರ, ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕಳೆದ 10 ತಿಂಗಳಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದ ನಿರ್ಧಾರಗಳ ಕುರಿತು ಕನಿಷ್ಠ 14 ಬಾರಿ ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

#ECI  #rift #Rahulgandhi #Vote choir #ಭಾರತದ ಚುನಾವಣಾ ಆಯೋಗ #ಬಿಕ್ಕಟ್ಟು #ರಾಹುಲ್ ಗಾಂಧಿ#ವೋಟು ಕಳ್ಳತನ

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link