ರಾಜ್ಯ ಸರ್ಕಾರ ಈಗಾಗಲೇ ಕೇಂದ್ರಕ್ಕೆ ಬರ ಪರಿಸ್ಥಿತಿಗೆ ಸಂಬಂಧಿಸಿದ ಮನವಿ ಸಲ್ಲಿಸಿದ್ದು, ಅದರ ಆಧಾರದ ಮೇಲೆ ಕೇಂದ್ರದ ತಂಡಗಳು ಪರಿಶೀಲನೆ ಕೈಗೊಳ್ಳಲಿವೆ. ಬೆಂಗಳೂರು: ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದ ಬರ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರದ ಮೂರು ತಂಡಗಳು ರಾಜ್ಯಕ್ಕೆ ಭೇಟಿ ನೀಡಲಿವೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸೋಮವಾರ ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ಒಂದು ತಂಡ ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಭಾಗಗಳಲ್ಲಿ, ಮತ್ತೊಂದು ತಂಡ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹಾಗೂ 3ನೇ ತಂಡ ಮೈಸೂರು ಭಾಗದ ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯನ್ನು ಪರಿಶೀಲಿಸಲಿದೆ ಎಂದು ಹೇಳಿದರು. ಕೇಂದ್ರದ ತಂಡಗಳು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಿವೆ. ರಾಜ್ಯ ಸರ್ಕಾರ ಈಗಾಗಲೇ ಕೇಂದ್ರಕ್ಕೆ ಬರ ಪರಿಸ್ಥಿತಿಗೆ ಸಂಬಂಧಿಸಿದ ಮನವಿ ಸಲ್ಲಿಸಿದ್ದು, ಅದರ ಆಧಾರದ ಮೇಲೆ ಕೇಂದ್ರದ ತಂಡಗಳು ಪರಿಶೀಲನೆ ಕೈಗೊಳ್ಳಲಿವೆ. ರಾಜ್ಯ ಸರ್ಕಾರದಿಂದ ಮತ್ತೊಂದು ಮನವಿಯನ್ನೂ ಸಲ್ಲಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದರು. Following the State Government’s request, 3 teams from the Union Government will visit Karnataka to assess the drought situation. One team will cover the Tumakuru, Chitradurga and Davanagere region, another will visit districts in North Karnataka, while the third will assess the… pic.twitter.com/Mx9BE6iCkG— Dr. G Parameshwara (@DrParameshwara) September 28, 2026 ರಾಜ್ಯದಲ್ಲಿ ಬರಪೀಡಿತ ಎಂದು ಘೋಷಿಸಲಾಗಿರುವ ಎಲ್ಲ ತಾಲೂಕುಗಳ ಮಾಹಿತಿಯನ್ನು ತಂಡಗಳು ಪರಿಶೀಲಿಸುವ ಸಾಧ್ಯತೆಯಿದೆ. ಕೆಲವು ತಾಲೂಕುಗಳಿಗೆ ತಂಡಗಳು ನೇರವಾಗಿ ಭೇಟಿ ನೀಡಿ, ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿವೆ. ರಾಜ್ಯ ಸರ್ಕಾರ ಸಲ್ಲಿಸಿರುವ ವರದಿಯಲ್ಲಿನ ಅಂಶಗಳು ಹಾಗೂ ಸ್ಥಳ ಪರಿಶೀಲನೆಯ ವೇಳೆ ಕಂಡುಬರುವ ವಾಸ್ತವ ಪರಿಸ್ಥಿತಿಯಲ್ಲಿ ಯಾವುದೇ ವ್ಯತ್ಯಾಸವಿದೆಯೇ ಎಂಬುದನ್ನೂ ಪರಿಶೀಲಿಸಲಾಗುವುದು ಎಂದು ಪರಮೇಶ್ವರ್ ಅವರು ವಿವರಿಸಿದರು. ಸೆಪ್ಟೆಂಬರ್ 30ಕ್ಕೆ ಮುಂಗಾರು ಅವಧಿ ಮುಕ್ತಾಯಗೊಳ್ಳಲಿದೆ. ಬಳಿಕ ಅಕ್ಟೋಬರ್ ಮೊದಲ ವಾರದಲ್ಲಿ ಕೇಂದ್ರ ಸರ್ಕಾರಕ್ಕೆ ಅಂತಿಮ ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ಪರಮೇಶ್ವರ್ ಹೇಳಿದರು. ರಾಜ್ಯದಲ್ಲಿ ಉಂಟಾಗಿರುವ ನಷ್ಟ, ರೈತರ ಪರಿಸ್ಥಿತಿ ಹಾಗೂ ಅಗತ್ಯವಿರುವ ಪರಿಹಾರದ ಕುರಿತು ಸಮಗ್ರ ವರದಿಯನ್ನು ಸಿದ್ಧಪಡಿಸಿ ಕೇಂದ್ರದ ಮುಂದೆ ಮಂಡಿಸಲಾಗುವುದು ಎಂದು ಅವರು ತಿಳಿಸಿದರು. #Karnataka #Drought situation #Central teams #DCM Parameshwar #ಕರ್ನಾಟಕ #ಬರಪರಿಸ್ಥಿತಿ#ಕೇಂದ್ರತಂಡಗಳು#ಡಿಸಿಎಂ ಪರಮೇಶ್ವರ Share via: Facebook X (Twitter) LinkedIn More Post navigation ಮಾಗಡಿ ರಸ್ತೆ ತಾವರೆಕೆರೆಯಲ್ಲಿ ಹಠಯೋಗಿ ಕಾಳಪ್ಪಸ್ವಾಮಿ ನೂತನ ದೇವಸ್ಥಾನ ನಿರ್ಮಾಣಕ್ಕೆ ಶಿಲಾನ್ಯಾಸ! ಸಚಿವ ಎಚ್.ಸಿ.ಬಾಲಕೃಷ್ಣರಿಂದ 36 ಎಕರೆ ಸರ್ಕಾರಿ ಜಮೀನು ಕಬಳಿಕೆ: ಮಾಜಿ ಶಾಸಕ ಆರೋಪ!