ಸಿಎಂ ಡಿಕೆ ಶಿವಕುಮಾರ್


ಮೊಟೊಮಾಚಿ ಘಟಕದಲ್ಲಿ ಟೊಯೋಟಾ ಮೋಟಾರ್ ಕಾರ್ಪೊರೇಷನ್‌ನ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಮಸಕಾಜು ಯೋಶಿಮುರಾ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಲಾಯಿತು. 

ಬೆಂಗಳೂರು: ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸುವ ಮತ್ತು ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸುವ ನಿಟ್ಟಿನಲ್ಲಿ ಜಪಾನ್ ಪ್ರವಾಸದಲ್ಲಿರುವ ಸಿಎಂ ಡಿಕೆ ಶಿವಕುಮಾರ್‌ (DK Shivakumar) ನೇತೃತ್ವದ ರಾಜ್ಯ ನಿಯೋಗವು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ (MB Patil) ಅವರೊಂದಿಗೆ ಜಪಾನ್‌ನ ಮೊಟೊಮಾಚಿ (Motomachi) ಘಟಕದಲ್ಲಿ ಟೊಯೋಟಾ ಮೋಟಾರ್ ಕಾರ್ಪೊರೇಷನ್‌ನ ಉನ್ನತ ನಾಯಕರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದೆ.

ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ (FDI) ಕರ್ನಾಟಕವನ್ನು ದೇಶದಲ್ಲೇ ನಂಬರ್ ಒನ್ ರಾಜ್ಯವನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಬಿಯಾಂಡ್ ಬೆಂಗಳೂರು (Beyond Bengaluru) ದೂರದೃಷ್ಟಿಯ ಮೂಲಕ ಕೈಗಾರಿಕಾ ಬೆಳವಣಿಗೆ ಮತ್ತು ಹೂಡಿಕೆಯನ್ನು ಬೆಂಗಳೂರಿನಿಂದ ಹೊರಗೂ ರಾಜ್ಯದ ಎಲ್ಲಾ ಭಾಗಗಳಿಗೆ ಕೊಂಡೊಯ್ಯಲು ಸರ್ಕಾರ ಶ್ರಮಿಸುತ್ತಿದೆ ಎಂದು ಸಿಎಂ ಹೇಳಿದ್ದಾರೆ.

ಮೊಟೊಮಾಚಿ ಘಟಕದಲ್ಲಿ ಟೊಯೋಟಾ ಮೋಟಾರ್ ಕಾರ್ಪೊರೇಷನ್‌ನ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಮಸಕಾಜು ಯೋಶಿಮುರಾ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಲಾಯಿತು.

ಕರ್ನಾಟಕದಲ್ಲಿ ತನ್ನ ವಾಹನ ಉತ್ಪಾದನಾ ಸಾಮರ್ಥ್ಯವನ್ನು 10 ಲಕ್ಷಕ್ಕೆ ವಿಸ್ತರಿಸುವ ಟೊಯೋಟಾ ಯೋಜನೆಯ ಕುರಿತು ಮಾತುಕತೆ ನಡೆಯಿತು. ಕಂಪನಿಯ ಈ ವಿಸ್ತರಣೆಗೆ ರಾಜ್ಯ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಲಾಗಿದೆ. ಅಲ್ಲದೆ, ಟೊಯೋಟಾದ ಕೈಗೆಟುಕುವ ದರದ ಹೈಬ್ರಿಡ್ ಟ್ಯಾಕ್ಸಿ ಮಾದರಿಯನ್ನು ಕರ್ನಾಟಕಕ್ಕೆ ತರುವುದು ಮತ್ತು ಫ್ಲೆಕ್ಸ್-ಫ್ಯೂಯೆಲ್ (Flex-fuel) ವಾಹನ ತಂತ್ರಜ್ಞಾನದ ಸಾಧ್ಯತೆಗಳ ಬಗ್ಗೆಯೂ ಚರ್ಚಿಸಲಾಯಿತು

#DKShivakumar #Japantour #Toyota Kaikan Museum #Visited #ಡಿಕೆ ಶಿವಕುಮಾರ್ #ಜಪಾನ್ ಪ್ರವಾಸ #ಟೋಯೋಟಾ ಕೈಕಾನ್ ಮ್ಯೂಸಿಯಂ#ಭೇಟಿ

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link