ರಾಹುಲ್ ಗಾಂಧಿ

ಆಕಾಶವಾಣಿ ಭವನದ ಆವರಣದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು,’ದೇಶದ್ರೋಹ’ ಎಸಗಿದ್ದಕ್ಕಾಗಿ ಅವರೆಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾರೂ ಕೂಡ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನೆರವಿನೊಂದಿಗೆ ‘ಮತ ಕಳ್ಳತನ’ ನಡೆಸಿ ದೇಶವನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ.

ಆಕಾಶವಾಣಿ ಭವನದ ಆವರಣದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು,’ದೇಶದ್ರೋಹ’ ಎಸಗಿದ್ದಕ್ಕಾಗಿ ಅವರೆಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾರೂ ಕೂಡ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

ನರೇಂದ್ರ ಮೋದಿ, ಅಮಿತ್ ಶಾ, ಮೋಹನ್ ಭಾಗವತ್ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ವಾನೇಶ್ ಕುಮಾರ್ ಅವರು ದೇಶದಲ್ಲಿ ಪ್ರಜಾಪ್ರಭುತ್ವವನ್ನು ಅಂತ್ಯಗೊಳಿಸಿದ್ದಾರೆ. ಇಡೀ ದೇಶ ಇದನ್ನು ನಂಬುತ್ತದೆ. ದೇಶದ ಯುವಜನತೆಯೂ ಇದನ್ನು ನಂಬುತ್ತದೆ. ನನ್ನನ್ನು ತಡೆಯುತ್ತಿದ್ದ ಪೊಲೀಸರೂ ಇದನ್ನೇ ಹೇಳುತ್ತಿದ್ದಾರೆ. ವಾಸ್ತವ ಎಲ್ಲರಿಗೂ ತಿಳಿದಿದೆ’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ಹೇಳಿದರು.

ಪ್ರಧಾನಿ ಮೋದಿ, ಶಾ ಮತ್ತು ಭಾಗವತ್ ಅವರು ‘ಮತ ಕಳ್ಳತನ”ದ ಮೂಲಕ ದೇಶವನ್ನು ವಶಪಡಿಸಿಕೊಂಡಿದ್ದಾರೆ. ಜ್ಞಾನೇಶ್ ಕುಮಾರ್ ಅವರು ಇದಕ್ಕೆ ನೆರವಾದರು ಎಂದು ದೂರಿದರು.

‘ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪ್ರಧಾನಿ ಮೋದಿ, ಗೃಹ ಸಚಿವ ಶಾ, ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್ ಅಥವಾ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ – ಹೀಗೆ ಯಾರನ್ನೂ ಬಿಡುವುದಿಲ್ಲ. ನಮ್ಮ ದೇಶಕ್ಕೆ ಎಸಗಿರುವ ಕೃತ್ಯವು ದೇಶದ್ರೋಹವಾಗಿದೆ. ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಹೇಳಿದರು.

#Rahulgandhi #PMMODI #Amitsha #cec #ರಾಹುಲ್ ಗಾಂಧಿ#ಪ್ರಧಾನಿಮೋದಿ#ಅಮಿತ್ ಶಾ#ಸಿಇಸಿ

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link