ಬಿಡದಿ ಟೌನ್ ಶಿಪ್ ಯೋಜನೆಯ ಬಗ್ಗೆ ನಾವು ಅತ್ಯಂತ ವಿವರವಾಗಿ ಚರ್ಚೆ ನಡೆಸಿದ್ದೇವೆ ಹಾಗೂ ಮುಂಬರುವ ವಿಧಾನಕಲಾಪದಲ್ಲಿ ಪ್ರಸ್ತಾಪಿಸಲು ಉದ್ದೇಶಿಸಿರುವ ವಿವಿಧ ವಿಷಯಗಳ ಬಗ್ಗೆ ಸಮಾಲೋಚಿಸಿದ್ದೇವೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಬೆಂಗಳೂರು: ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಬಿಡದಿ ಬೃಹತ್ ಪಾದಯಾತ್ರೆಗೆ ಮಿತ್ರಪಕ್ಷ ಬಿಜೆಪಿ ನೈತಿಕ ಬೆಂಬಲ ವ್ಯಕ್ತಪಡಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ನಡೆದ ಜೆಡಿಎಸ್ ಮತ್ತು ಬಿಜೆಪಿ ಹಿರಿಯ ನಾಯಕರ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು ಕೇಂದ್ರ ಸಚಿವರು, ಬಿಡದಿ ಟೌನ್ ಶಿಪ್ ಯೋಜನೆಯ ಬಗ್ಗೆ ನಾವು ಅತ್ಯಂತ ವಿವರವಾಗಿ ಚರ್ಚೆ ನಡೆಸಿದ್ದೇವೆ ಹಾಗೂ ಮುಂಬರುವ ವಿಧಾನಕಲಾಪದಲ್ಲಿ ಪ್ರಸ್ತಾಪಿಸಲು ಉದ್ದೇಶಿಸಿರುವ ವಿವಿಧ ವಿಷಯಗಳ ಬಗ್ಗೆ ಸಮಾಲೋಚಿಸಿದ್ದೇವೆ ಎಂದು ಅವರು ಹೇಳಿದರು. ಬಿಡದಿ ಪಾದಯಾತ್ರೆಯ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ವರೆಗೂ ಹಮ್ಮಿಕೊಳ್ಳಲಾಗಿದೆ. ನಿಖಿಲ್ ಕುಮಾರಸ್ವಾಮಿ ಅವರು ಪಾದಯಾತ್ರೆಯ ನೇತೃತ್ವ ವಹಿಸಿದ್ದಾರೆ. ಬಿಜೆಪಿ ನಾಯಕರು ಕೂಡ ಪಾದಯಾತ್ರೆಯ ಬಗ್ಗೆ ಅತ್ಯಂತ ಸಕಾರಾತ್ಮಕ ಮನಸ್ಸು ಹೊಂದಿದ್ದು, ಅವರು ಕೂಡ ಪಾದಯಾತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳಿಸಿದ್ದಾರೆ ಎಂದು ಅವರು ತಿಳಿಸಿದರು. ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್, ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಸೇರಿದಂತೆ ಬಿಜೆಪಿಯ ಅನೇಕ ಹಿರಿಯ ನಾಯಕರು ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಅಲ್ಲದೆ, ಮುಂಬರುವ ವಿಧಾನಮಂಡಲ ಕಲಾಪದಲ್ಲಿ ಬಿಡದಿ ಟೌನ್ಶಿಪ್ ವಿಷಯ ಹಾಗೂ ನೈಸ್ ಯೋಜನೆಯ ಅಕ್ರಮಗಳ ಬಗ್ಗೆ ಧ್ವನಿ ಎತ್ತಲು ನಿರ್ಧರಿಸಲಾಗಿದೆ. ಈ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಒಮ್ಮತದಿಂದ ಹೋರಾಟ ನಡೆಸಲಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಪ್ರಶ್ನೆ ಒಂದಕ್ಕೆ ಉತ್ತರಿಸಿದರು. ಎರಡೂ ಪಕ್ಷಗಳ ನಡುವೆ ಸಮನ್ವಯ ಕೊರತೆ ಆಗಬಾರದು ಎಂಬ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬಿಡದಿ ಪಾದಯಾತ್ರೆ ನಡೆಯುತ್ತಿದೆ. ನಾನೇ ಪಾದಯಾತ್ರೆಗೆ ಚಾಲನೆ ನೀಡುತ್ತೇನೆ ಎಂದರು ಸಚಿವರು. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದು ಸರಿ ಇಲ್ಲ ಎಂಬುದಕ್ಕೆ ಅನೇಕ ನಿದರ್ಶನಗಳು ಇವೆ. ಸಂಪುಟ ವಿಸ್ತರಣೆಗೆ ತಿಂಗಳಗಟ್ಟಲೆ ಸಮಯ ತೆಗೆದುಕೊಂಡರು. ಈಗ ಖಾತೆ ಹಂಚಿಕೆ ಕೂಡ ನಡೆದಿಲ್ಲ. ಸರ್ಕಾರದ ಕಾರ್ಯವೈಖರಿ ನೋಡಿದರೆ ತುಂಬಾ ನಿರಾಶೆಯಾಗುತ್ತದೆ, ಖಾತೆ ಹಂಚಿಕೆ ವಿಷಯ ಕಾಂಗ್ರೆಸ್ ದಿವಾಳಿತನ ತೋರುತ್ತದೆ ಸಚಿವರು ಕಟುವಾಗಿ ಟೀಕಿಸಿದರು. ರಾಜ್ಯ ಹಿಂದೆಂದೂ ಸಿಲುಕಿರದಷ್ಟು ತೀವ್ರ ಬರಕ್ಕೆ ತುತ್ತಾಗಿದೆ. ಸರ್ಕಾರ ಜನರಿಗೆ ನೆರವಾಗುವಲ್ಲಿ ವಿಫಲವಾಗಿದೆ. ಈ ಬಗ್ಗೆಯೂ ಪ್ರಸ್ತಾಪಿಸಿ ಹೋರಾಟ ಮಾಡಲು ನಿರ್ಧರಿಸಲಾಯಿತು ಎಂದು ಸಚಿವರು ಮಾಹಿತಿ ನೀಡಿದರು. 📍ಬೆಂಗಳೂರು @JanataDal_S ಮತ್ತು @BJP4Karnataka ಪಕ್ಷಗಳ ಹಿರಿಯ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲಾಯಿತು. ಮಹತ್ವದ ಈ ಸಭೆಯಲ್ಲಿ ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲಿ ದನಿಯೆತ್ತಬೇಕಾಗಿರುವ ವಿವಿಧ ಜನಪರ ವಿಷಯಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ವಿಧಾನಸಭೆ ಪ್ರತಿಪಕ್ಷ ನಾಯಕರಾದ ಶ್ರೀ @RAshokaBJP ಅವರು, ವಿಧಾನ ಪರಿಷತ್… pic.twitter.com/39bajJGejl— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) August 8, 2026 ಬಿಡದಿ ವಿಚಾರದಲ್ಲಿ ಸದನದಲ್ಲೂ ಚರ್ಚೆ ಆಗಲೇಬೇಕು. ರೈತರ ಮಹಿಳೆಯರ ಹೋರಾಟವನ್ನು ಇಡೀ ರಾಜ್ಯ ನೋಡುತ್ತಿದೆ. ರೈತರು ಭೂಮಿ ಕೊಡಲು ತಯಾರಿಲ್ಲ. ಕೇವಲ ರೈತರ ಭೂಮಿಯನ್ನು ಲೂಟಿ ಒಡೆಯಲು ಯೋಜನೆಯನ್ನು ಮಾಡುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಜೊತೆ ವಿಸ್ತೃತವಾಗಿ ಚರ್ಚೆ ನಡೆಸಿದ್ದೇನೆ ಎಂದು ಸಚಿವರು ಹೇಳಿದರು. ಇದಲ್ಲದೆ, ವಾಲ್ಮೀಕಿ ಹಗರಣ, ಬೆಂಗಳೂರಿನಲ್ಲಿ ಅಸಮರ್ಪಕ ಕಸ ವಿಲೇವಾರಿ, ಕೆಪಿಎಸ್ಸಿ ಅಕ್ರಮಗಳು, ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳು, ಗೃಹಲಕ್ಷ್ಮಿ ಯೋಜನೆಯ ಹಣ ದುರ್ಬಳಕೆ ಮುಂತಾದ ವಿಷಯಗಳ ಬಗ್ಗೆ ಎರಡು ಪಕ್ಷಗಳು ದನಿಯ ಎತ್ತುತ್ತವೆ ಎಂದು ಸಚಿವರು ಹೇಳಿದರು. #Bidaditownshipscheme #JDS Padayatra #BJPSupport #HDKumaraswamy #ಬಿಡದಿಟೌನ್ ಶಿಪ್ ಯೋಜನೆ#ಜೆಡಿಎಸ್ ಪಾದಯಾತ್ರೆ#ಬಿಜೆಪಿ ಬೆಂಬಲ#ಹೆಚ್ ಡಿ ಕುಮಾರಸ್ವಾಮಿ Share via: Facebook X (Twitter) LinkedIn More Post navigation ಹಿಂದುಳಿದ ವರ್ಗಗಳ ಮಹಿಳೆಯರಿಗೆ ಪ್ರತ್ಯೇಕ ಮೀಸಲಾತಿ ಅವಶ್ಯ- ಡಾ. ಉಮಾಶ್ರೀ! ನೈಸ್ ಹಗರಣ, ಬಿಡದಿ ಟೌನ್ ಶಿಪ್ ಎರಡೂ ಒಂದೇ ನಾಣ್ಯದ 2 ಮುಖಗಳು: ಎಚ್.ಡಿ. ಕುಮಾರಸ್ವಾಮಿ!