ಸಿಎಂ ಸಿದ್ದರಾಮಯ್ಯ


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನೂ ಅಧಿಕಾರದ ತಮ್ಮ ಕೈಯಲ್ಲೇ ಇದೆ ಎಂಬ ಬಲವಾದ ಸಂದೇಶ ನೀಡಲು ಈ ಕ್ರಮ ಕೈಗೊಂಡಿದ್ದಾರೆಂಬ ಮಾತುಗಳು ಕೇಳಿಬರುತ್ತಿದೆ. 

ಐಜಿಪಿ ಲಾಭು ರಾಮ್

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವದ ಗೊಂದಲದ ನಡುವೆ ರಾಜ್ಯ ಗುಪ್ತಚರ ಮುಖ್ಯಸ್ಥರ ಬದಲಾವಣೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.ಎಡಿಜಿಪಿ ರವಿ ಎಸ್ ಬದಲಿಗೆ ಕೇಂದ್ರ ವಲಯ ಐಜಿಪಿ ಲಾಭು ರಾಮ್ ಅವರನ್ನು ಗುಪ್ತಚರ ವಿಭಾಗದ ಐಜಿಪಿಯಾಗಿ ನೇಮಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನೂ ಅಧಿಕಾರದ ತಮ್ಮ ಕೈಯಲ್ಲೇ ಇದೆ ಎಂಬ ಬಲವಾದ ಸಂದೇಶ ನೀಡಲು ಈ ಕ್ರಮ ಕೈಗೊಂಡಿದ್ದಾರೆಂಬ ಮಾತುಗಳು ಕೇಳಿಬರುತ್ತಿದೆ. 

ಇತ್ತೀಚಿನ ದಿನಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ರಾಜಕೀಯ ಮಾಹಿತಿಯ ಸಂಗ್ರಹಣದಲ್ಲಿ ‘ಇಂಟೆಲಿಜೆನ್ಸ್ ವೈಫಲ್ಯ’ ಕಂಡುಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಸಮಾಧಾನಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

ಫೆಬ್ರವರಿಯಲ್ಲಿ ಧಾರವಾಡದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬ್ಯಾನರ್‌ಗಳು, ಪೋಸ್ಟರ್‌ಗಳನ್ನು ಸುಟ್ಟ ಘಟನೆ ಸರ್ಕಾರದ ವರ್ಚಸ್ಸಿಗೆ ಧಕ್ಕೆ ತಂದಿದ್ದು ಈ ಘಟನೆ ಬಗ್ಗೆ ಮುಂಚಿತವಾಗಿ ಸೂಕ್ತ ಮಾಹಿತಿ ಲಭ್ಯವಾಗದಿರುವುದು ಗುಪ್ತಚರ ಇಲಾಖೆಯ ಕಾರ್ಯಕ್ಷಮತೆ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದೆ.

ಇದಕ್ಕೂ ಹೊರತಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಣದ ಚಟುವಟಿಕೆಗಳ ಬಗ್ಗೆ ಸಮರ್ಪಕ ಮಾಹಿತಿ ಸಿಗದಿರುವುದೂ ಮುಖ್ಯಮಂತ್ರಿಗಳ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.ಅವರ ಬೆಂಬಲಿಗರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾದ ವಿಚಾರಗಳು ಕೂಡ ಮುಂಚಿತವಾಗಿ ತಿಳಿದಿರಲಿಲ್ಲ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *