ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಹೊಸ ಬೋರ್‌ವೆಲ್ ಕೊರೆಸುವಾಗ ಕಡ್ಡಾಯವಾಗಿ ವಿಡಿಯೋ ಚಿತ್ರೀಕರಣ ಆಗಬೇಕು ಎಂದು ಸೂಚನೆ ನೀಡಿದರು. ಸಿಎಂ ಡಿಕೆಶಿವಕುಮಾರ್ ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಪ್ರತಿ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಾಗಿ ₹1 ಕೋಟಿ ರೂ. ಹೆಚ್ಚುವರಿ ಅನುದಾನವನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಘೋಷಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಹೊಸ ಬೋರ್‌ವೆಲ್ ಕೊರೆಸುವಾಗ ಕಡ್ಡಾಯವಾಗಿ ವಿಡಿಯೋ ಚಿತ್ರೀಕರಣ ಆಗಬೇಕು. ನಕಲಿ ಪ್ರಕರಣಗಳು ಕಂಡುಬಂದರೆ ಸಿಇಒಗಳೇ ನೇರ ಹೊಣೆ ಎಂದರು.ಮುಂದಿನ 15 ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ಬರ ಪರಿಸ್ಥಿತಿಯ ಸಮಗ್ರ ವರದಿ ಸಲ್ಲಿಕೆಗೆ ಸೂಚಿಸಿದರು. ಸಣ್ಣ ಮತ್ತು ಅತಿ ಸಣ್ಣ ರೈತರ ಹಿತವೇ ಮುಖ್ಯ ಆದ್ಯತೆ. ಕೃಷಿ, ಪಶುಸಂಗೋಪನೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು. ಟ್ರಾನ್ಸ್‌ಫಾರ್ಮರ್‌ಗಳ ರಿಪೇರಿಗೆ ವಿಶೇಷ ಗಮನ ನೀಡಿ, ಹೆಚ್ಚುವರಿ ಟ್ರಾನ್ಸ್‌ಫಾರ್ಮರ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳಲು 4G ವಿನಾಯಿತಿ ನೀಡಬೇಕು. ಅಧಿಕಾರಿಗಳು ಕೇವಲ ಕಾಗದದ ವರದಿ ನೀಡದೆ, ಫೀಲ್ಡ್‌ಗಿಳಿದು ಆಡಳಿತಾತ್ಮಕ ಟೀಮ್ ವರ್ಕ್ ಮತ್ತು ಕಾರ್ಯಕ್ಷಮತೆ ಪ್ರದರ್ಶಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಜುಲೈ 18ರವರೆಗೆ ರಾಜ್ಯದಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಒಟ್ಟಾರೆ ಶೇ. 39ರಷ್ಟು ಕೊರತೆಯಾಗಿದ್ದು, 170ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಮಳೆ ಅಭಾವವಿದೆ. ವಿಜಯನಗರ ಜಿಲ್ಲೆಯಲ್ಲಿ ಅತ್ಯಧಿಕ ಶೇ. 67 ರಷ್ಟು ಕೊರತೆಯಾಗಿದೆ. ಉಳಿದಂತೆ ಮಲೆನಾಡಿನಲ್ಲಿ ಶೇ.43, ಕರಾವಳಿ ಭಾಗದಲ್ಲಿ ಶೇ. 35, ಉತ್ತರ ಒಳನಾಡಿನಲ್ಲಿ ಶೇ. 33 ಹಾಗೂ ದಕ್ಷಿಣ ಒಳನಾಡಿನಲ್ಲಿ ಶೇ.31 ರಷ್ಟು ಮಳೆ ಕೊರತೆಯಾಗಿದೆ ಎಂದರು. ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ವಿಧಾನಸೌಧದಲ್ಲಿಂದು ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ವಿಡಿಯೋ ಸಂವಾದ ನಡೆಸಿ, ನೀಡಿರುವ ಪ್ರಮುಖ ಸೂಚನೆಗಳು ಇಂತಿವೆ. pic.twitter.com/B9WovIYr17— CM of Karnataka (@CMofKarnataka) July 19, 2026 ಸಣ್ಣ ಮತ್ತು ಅತಿ ಸಣ್ಣ ರೈತರ ಸಂಪೂರ್ಣ ವಿವರಗಳನ್ನು ‘ಫ್ರೂಟ್ಸ್’ (FRUITS) ತಂತ್ರಾಂಶದ ಮೂಲಕ ಸಿದ್ಧವಾಗಿಟ್ಟುಕೊಂಡು, ಪ್ರತಿಯೊಂದು ಪರಿಹಾರವೂ ತಳಮಟ್ಟದ ಅರ್ಹ ಫಲಾನುಭವಿಗೆ ತಲುಪುವಂತೆ ನೋಡಿಕೊಳ್ಳಬೇಕು. ರಾಜ್ಯದ ಯಾವುದೇ ಹಳ್ಳಿ ಅಥವಾ ನಗರದ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ತೊಂದರೆ ಕಾಣಿಸಿಕೊಳ್ಳಬಾರದು. ಸ್ಥಳೀಯ ನೀರಿನ ಮೂಲಗಳಿಲ್ಲದಿದ್ದರೆ, ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ಅಥವಾ ಟ್ಯಾಂಕರ್‌ಗಳ ಮೂಲಕ ತಕ್ಷಣವೇ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಲ್ಲಿ ಮಳೆನೀರು ಕೊಯ್ಲಿನ ಕುರಿತು ಜಾಗೃತಿ ಮೂಡಿಸಬೇಕು ಎಂದು ನಿರ್ದೇಶನ ನೀಡಿದರು. Share via: Facebook X (Twitter) LinkedIn More Post navigation ಬಿಡದಿ ಟೌನ್ಶಿಪ್ ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿಯಾಗಲು ಬಿಡುವುದಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ! ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚನ್ನಮ್ಮ ದೇವೇಗೌಡರ ಅಂತಿಮ ಯಾತ್ರೆಯ ಭಾವುಕ ಕ್ಷಣಗಳು!Video