ಕೇರಳ ಸೇರಿ ಪಂಚ ರಾಜ್ಯಗಳ ಚುನಾವಣೆಯ ಬಳಿಕ, ಸಂಪುಟ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ವಿಚಾರದಲ್ಲಿ ಗಮನ ಹರಿಸುವುದಾಗಿ ಹೈಕಮಾಂಡ್ ಹೇಳಿತ್ತು. ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹಲವು ದಿನಗಳಿಂದ ನಡೆಯುತ್ತಿರುವ ಸಿಎಂ ಕುರ್ಚಿ ಕಚ್ಚಾಟಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಕಾಣಿಸಲು ಹೈಕಮಾಂಡ್ ಮುಂದಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ದೆಹಲಿಗೆ ಬರುವಂತೆ ಬುಲಾವ್ ಬಂದಿದೆ. ಮೇ 26ರಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ. ಮೇಲ್ನೋಟಕ್ಕೆ ರಾಜ್ಯಸಭಾ ಚುನಾವಣೆ ಸಂಬಂಧ ಚರ್ಚಿಸಲು ಸಿಎಂ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ. ಆದರೆ, ಅಧಿಕಾರ ಹಂಚಿಕೆ ವಿಚಾರ, ಸಂಪುಟ ಪುನಾರಚನೆಯ ವಿಷಯಗಳೂ ಚರ್ಚೆಯಾಗಲಿದೆ ಎಂದು ಹೇಳಲಾಗುತ್ತಿದೆ. ಕೇರಳ ಸೇರಿ ಪಂಚ ರಾಜ್ಯಗಳ ಚುನಾವಣೆಯ ಬಳಿಕ, ಸಂಪುಟ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ವಿಚಾರದಲ್ಲಿ ಗಮನ ಹರಿಸುವುದಾಗಿ ಹೈಕಮಾಂಡ್ ಹೇಳಿತ್ತು. ಈಗ ಸಿಎಂ, ಡಿಸಿಎಂಗೆ ದೆಹಲಿಗೆ ಬರುವಂತೆ ಸೂಚನೆ ನೀಡಲಾಗಿರುವುದು ರಾಜ್ಯ ಕಾಂಗ್ರೆಸ್ ನಲ್ಲಿ ಸಂಚಲನ ಮೂಡಿಸಿದೆ. ಮೇ 26 ರ ಮಂಗಳವಾರ ಉಭಯ ನಾಯಕರು ದೆಹಲಿಗೆ ತೆರಳಲಿದ್ದಾರೆ. ಅಂದು ರಾಹುಲ್ ಗಾಂಧಿ ಅವರನ್ನ ಭೇಟಿಯಾಗಲಿದ್ದು, ಸಿಎಂ ಹುದ್ದೆಗಾಗಿ ಕಾಂಗ್ರೆಸ್ ಆಂತರಿಕ ವಲಯದಲ್ಲಿ ನಡೆಯಲಿರುವ ಕುರ್ಚಿ ಕದನಕ್ಕೆ ಬ್ರೇಕ್ ಬೀಳಲಿದೆಯಾ ಎಂಬುದನ್ನು ಕಾದುನೋಡಬೇಕಿದೆ. #Karnatakacm #cmsiddaramaiah #dcmdkshivakumar #Congress #Hicommand #ಕರ್ನಾಟಕಸಿಎಂ #ಸಿಎಂಸಿದ್ದರಾಮಯ್ಯ #ಡಿಸಿಎಂಡಿಕೆ ಶಿವಕುಮಾರ್ #ಕಾಂಗ್ರೆಸ್ #ಹೈಕಮಾಂಡ್ Share via: Facebook X (Twitter) LinkedIn More Post navigation ಭಟ್ಕಳ ದುರಂತ: ಮೃತರ ಸಂಖ್ಯೆ 10ಕ್ಕೆ ಏರಿಕೆ, ರಾಜ್ಯ, ಕೇಂದ್ರ ಸರ್ಕಾರದಿಂದ ಪರಿಹಾರ ಘೋಷಣೆ! ಕಾಂತಾರ’ ಕೆಂಗಣ್ಣಿಗೆ ಗುರಿ: ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ಬಾಲಿವುಡ್ ನಟ ರಣವೀರ್ ಸಿಂಗ್ !