ಸಿದ್ದರಾಮಯ್ಯ

ಇಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಗೆಲುವಿನ ಸಂಪೂರ್ಣ ಶ್ರೇಯಸ್ಸು ಮತದಾರರಿಗೆ ಸಲ್ಲಬೇಕು. ಸರ್ಕಾರದ ಯೋಜನೆಗಳನ್ನು ಮೆಚ್ಚಿ ರಾಜ್ಯದ ಜನತೆ ನೀಡಿರುವ ಆಶೀರ್ವಾದದಿಂದ ಸತತ ಉಪಚುನಾವಣೆಗಳಲ್ಲಿ ಜಯಗಳಿಸಲು ಸಾಧ್ಯವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

ಮೈಸೂರು : ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳಿಗೆ ಜನಸಾಮಾನ್ಯರು ನೀಡಿದ ಅಭಯಹಸ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಗೆಲುವಿನ ಸಂಪೂರ್ಣ ಶ್ರೇಯಸ್ಸು ಮತದಾರರಿಗೆ ಸಲ್ಲಬೇಕು. ಸರ್ಕಾರದ ಯೋಜನೆಗಳನ್ನು ಮೆಚ್ಚಿ ರಾಜ್ಯದ ಜನತೆ ನೀಡಿರುವ ಆಶೀರ್ವಾದದಿಂದ ಸತತ ಉಪಚುನಾವಣೆಗಳಲ್ಲಿ ಜಯಗಳಿಸಲು ಸಾಧ್ಯವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಕುರಿತ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ತಾವು ಬದ್ಧವಾಗಿರುವುದಾಗಿ ಸ್ಪಷ್ಟಪಡಿಸಿದರು. ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ನಿಗದಿಯಾದ ತಕ್ಷಣ ದೆಹಲಿಗೆ ತೆರಳಿ ರಾಜ್ಯದ ಪ್ರಮುಖ ವಿಷಯಗಳ ಕುರಿತು ಚರ್ಚಿಸುವುದಾಗಿ ಅವರು ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ: ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ವಿಳಂಬ ಮಾಡದೆ ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ ಎಂಬ ಭರವಸೆಯನ್ನು ಇದೇ ಸಂದರ್ಭದಲ್ಲಿ ನೀಡಿದರು.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಸುಮಾರು 255 ಮತಗಳನ್ನು ಅಸಿಂಧುಗೊಳಿಸಿರುವುದು ವ್ಯವಸ್ಥಿತ ಪಿತೂರಿಯಂತೆ ಕಾಣುತ್ತಿದೆ ಎಂದು ದೂರಿದರು. ಈ “ಮತಗಳ ದರೋಡೆ” ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದಾಗಿ ಅವರು ತಿಳಿಸಿದರು.

#Mysuru #cmsiddaramaiah #Byelectionresult #Guranteescheme

Leave a Reply

Your email address will not be published. Required fields are marked *