ಕಾಂಗ್ರೆಸ್ ಡಿಎಂಕೆ ಮೈತ್ರಿಗೆ ಶಾಕ್ ನೀಡಿದ್ದು, ವಿಜಯ್ ಅವರನ್ನು ಬೆಂಬಲಿಸಲು ನಿರ್ಧರಿಸಿದೆ. ಇದರಿಂದಾಗಿ ಟಿವಿಕೆ ಸರ್ಕಾರ ರಚನೆ ಯತ್ನ ವೇಗ ಪಡೆದುಕೊಂಡಿದೆ. ಚೆನ್ನೈ: ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಕ್ಷೇತ್ರಗಳನ್ನು ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದ್ದು, ಇದೀಗ ಅಚ್ಚರಿಯ ವಿದ್ಯಮಾನವೊಂದು ನಡೆದಿದೆ. ಕಾಂಗ್ರೆಸ್ ಡಿಎಂಕೆ ಮೈತ್ರಿಗೆ ಶಾಕ್ ನೀಡಿದ್ದು, ವಿಜಯ್ ಅವರನ್ನು ಬೆಂಬಲಿಸಲು ನಿರ್ಧರಿಸಿದೆ. ಇದರಿಂದಾಗಿ ಟಿವಿಕೆ ಸರ್ಕಾರ ರಚನೆ ಯತ್ನ ವೇಗ ಪಡೆದುಕೊಂಡಿದೆ. ಕಾಂಗ್ರೆಸ್ ಮತ್ತು ಟಿವಿಕೆ ನಡುವೆ ನಡೆದ ಮಾತುಕತೆಗಳಲ್ಲಿ ಸಂಪುಟ ಸ್ಥಾನ ಹಂಚಿಕೆ ಸೇರಿದಂತೆ ಹಲವು ವಿಚಾರಗಳು ಚರ್ಚೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸರ್ಕಾರದಲ್ಲಿ ಪ್ರಮುಖ ಸ್ಥಾನಮಾನ ದೊರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಈ ನಿರ್ಧಾರಕ್ಕೂ ಮುನ್ನ ನಡೆದ ತುರ್ತು ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಕೇಂದ್ರ ನಾಯಕತ್ವದ ಸೂಚನೆಗಳ ಮೇರೆಗೆ ಅಂತಿಮ ತೀರ್ಮಾನ ಕೈಗೊಂಡಿದ್ದಾರೆ. ತಡರಾತ್ರಿ 10.30 ಕ್ಕೆ ನಡೆದ ತಮಿಳುನಾಡು ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿಯ ತುರ್ತು ಸಭೆಯಲ್ಲಿ ಟಿವಿಕೆಯನ್ನು ಬೆಂಬಲಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಎಐಸಿಸಿ ಉಸ್ತುವಾರಿ ಗಿರೀಶ್ ಚೋಡಂಕರ್ ಕರೆದಿದ್ದ ಸಭೆಯನ್ನು ವರ್ಚುವಲ್ ಮೂಲಕ ನಡೆಸಲಾಯಿತು. ವಿಜಯ್ ಅವರ ಬೆಂಬಲ ಕೋರಿಕೆಯ ಬಗ್ಗೆ ನಿರ್ಧರಿಸಲು ರಾಜ್ಯ ಘಟಕಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೇ ತಡರಾತ್ರಿ ಸಭೆ ನಡೆಸಿ, ನಿರ್ಧಾರ ಕೈಗೊಳ್ಳಲಾಗಿದೆ. #Tamilnadu #TVK ಚೆನ್ನೈ: ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಕ್ಷೇತ್ರಗಳನ್ನು ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದ್ದು, ಇದೀಗ ಅಚ್ಚರಿಯ ವಿದ್ಯಮಾನವೊಂದು ನಡೆದಿದೆ. ಕಾಂಗ್ರೆಸ್ ಡಿಎಂಕೆ ಮೈತ್ರಿಗೆ ಶಾಕ್ ನೀಡಿದ್ದು, ವಿಜಯ್ ಅವರನ್ನು ಬೆಂಬಲಿಸಲು ನಿರ್ಧರಿಸಿದೆ. ಇದರಿಂದಾಗಿ ಟಿವಿಕೆ ಸರ್ಕಾರ ರಚನೆ ಯತ್ನ ವೇಗ ಪಡೆದುಕೊಂಡಿದೆ. ಕಾಂಗ್ರೆಸ್ ಮತ್ತು ಟಿವಿಕೆ ನಡುವೆ ನಡೆದ ಮಾತುಕತೆಗಳಲ್ಲಿ ಸಂಪುಟ ಸ್ಥಾನ ಹಂಚಿಕೆ ಸೇರಿದಂತೆ ಹಲವು ವಿಚಾರಗಳು ಚರ್ಚೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸರ್ಕಾರದಲ್ಲಿ ಪ್ರಮುಖ ಸ್ಥಾನಮಾನ ದೊರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಈ ನಿರ್ಧಾರಕ್ಕೂ ಮುನ್ನ ನಡೆದ ತುರ್ತು ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಕೇಂದ್ರ ನಾಯಕತ್ವದ ಸೂಚನೆಗಳ ಮೇರೆಗೆ ಅಂತಿಮ ತೀರ್ಮಾನ ಕೈಗೊಂಡಿದ್ದಾರೆ. ತಡರಾತ್ರಿ 10.30 ಕ್ಕೆ ನಡೆದ ತಮಿಳುನಾಡು ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿಯ ತುರ್ತು ಸಭೆಯಲ್ಲಿ ಟಿವಿಕೆಯನ್ನು ಬೆಂಬಲಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಎಐಸಿಸಿ ಉಸ್ತುವಾರಿ ಗಿರೀಶ್ ಚೋಡಂಕರ್ ಕರೆದಿದ್ದ ಸಭೆಯನ್ನು ವರ್ಚುವಲ್ ಮೂಲಕ ನಡೆಸಲಾಯಿತು. ವಿಜಯ್ ಅವರ ಬೆಂಬಲ ಕೋರಿಕೆಯ ಬಗ್ಗೆ ನಿರ್ಧರಿಸಲು ರಾಜ್ಯ ಘಟಕಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೇ ತಡರಾತ್ರಿ ಸಭೆ ನಡೆಸಿ, ನಿರ್ಧಾರ ಕೈಗೊಳ್ಳಲಾಗಿದೆ. #Tamilnadu #Govtforming #Vijay #congress #DMK #ತಮಿಳುನಾಡು #ಸರ್ಕಾರ ರಚನೆ #ವಿಜಯ್ #ಕಾಂಗ್ರೆಸ್ #ಡಿಎಂಕೆ Share via: Facebook X (Twitter) LinkedIn More Post navigation ‘ವಿಜಯ್ ಜೊತೆಗೆ ರಾಹುಲ್ ಪ್ರಚಾರ ಮಾಡಿದ್ದರೆ 180-190 ಸ್ಥಾನ ಪಡೆಯಬಹುದಿತ್ತು- ತಮಿಳುನಾಡು AICC ಉಸ್ತುವಾರಿ ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ: ಗೂಂಡಾಗಳನ್ನು ತಕ್ಷಣ ಬಂಧಿಸಿ: CEC