ಸಿದ್ದರಾಮಯ್ಯ-ಡಿಕೆ ಶಿವಕುಮಾರ್

ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳ ನಡುವೆ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಎಚ್.ಕೆ.ಪಾಟೀಲ್ ಸೇರಿದಂತೆ ಹಲವು ಹಿರಿಯ ಸಚಿವರು ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದ್ದು, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಕೂಡ ಭಾಗಿಯಾಗಿದ್ದಾರೆಂದು ತಿಳಿದುಬಂದಿದೆ.

ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಮಹತ್ವದ “ಬ್ರೇಕ್‌ಫಾಸ್ಟ್ ಮೀಟಿಂಗ್” ಆರಂಭಗೊಂಡಿದೆ. ಈ ಸಭೆಯ ಬಳಿಕ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳ ನಡುವೆ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಎಚ್.ಕೆ.ಪಾಟೀಲ್ ಸೇರಿದಂತೆ ಹಲವು ಹಿರಿಯ ಸಚಿವರು ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದ್ದು, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಕೂಡ ಭಾಗಿಯಾಗಿದ್ದಾರೆಂದು ತಿಳಿದುಬಂದಿದೆ.

ಉಪಹಾರ ಸಭೆ ಭಾವುಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಡಿಕೆ ಶಿವಕುಮಾರ್ ಆಶೀರ್ವಾದ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ಮುಂದಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

#KarnatakaPolitics #leadershipchange #Siddaramaiah #dkshivakumar#ಕರ್ನಾಟಕರಾಜಕೀಯ#ನಾಯಕತ್ವಬದಲಾವಣೆ#ಸಿದ್ದರಾಮಯ್ಯ#ಡಿಕೆ ಶಿವಕುಮಾರ್

Leave a Reply

Your email address will not be published. Required fields are marked *